Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಪಟಾಕಿ ಸಿಡಿಸುವವರಿಗೆ ಆರೋಗ್ಯ ಸಚಿವಾಲಯದಿಂದ ಎಚ್ಚರಿಕೆ

2019ರಲ್ಲಿ 1.7 ಮಿಲಿಯನ್ ಸಾವುಗಳು ಅಥವಾ ಭಾರತದಲ್ಲಿನ ಒಟ್ಟು ಸಾವುಗಳಲ್ಲಿ ಶೇ. 18ರಷ್ಟು ಸಾವುಗಳು ವಾಯು ಮಾಲಿನ್ಯಕ್ಕೆ ಕಾರಣವಾಗಿವೆ. ಪಟಾಕಿ ಸುಡುವುದರಿಂದ ಉಂಟಾಗುವ ಮಾಲಿನ್ಯವು ಹೃದಯರಕ್ತನಾಳದ, ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೋಗ್ಯದ ಮೇಲೆ ಗಂಭೀರವಾಗಿ ಪರಿಣಾಮ ಬೀರಬಹುದು ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ದೀಪಾವಳಿಗೆ ಪಟಾಕಿ ಸಿಡಿಸುವವರಿಗೆ ಆರೋಗ್ಯ ಸಚಿವಾಲಯದಿಂದ ಎಚ್ಚರಿಕೆ
ದೀಪಾವಳಿImage Credit source: iStock
Follow us
ಸುಷ್ಮಾ ಚಕ್ರೆ
|

Updated on:Nov 11, 2023 | 4:38 PM

ಪಟಾಕಿಗಳಿಂದ ಉಂಟಾಗುವ ಮಾಲಿನ್ಯವು ಜನರ ಆರೋಗ್ಯದ ಮೇಲೆ ಅದರಲ್ಲೂ ವಿಶೇಷವಾಗಿ ಉಸಿರಾಟ ಮತ್ತು ಹೃದಯರಕ್ತನಾಳದ ಕಾಯಿಲೆಗಳಿಂದ ಬಳಲುತ್ತಿರುವವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಪಟಾಕಿ ಸಿಡಿಸದಂತೆ ಸೂಚಿಸಿದೆ. ವಿಶೇಷವಾಗಿ ಅಸ್ತಮಾ ಅಥವಾ ಇತರ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ ಜನರು ಪಟಾಕಿಗಳನ್ನು ಹೊಡೆಯಬಾರದು. ವಾಯು ಮಾಲಿನ್ಯ ಇರುವ ಸ್ಥಳದಲ್ಲಿ ಉಸಿರಾಡುವುದರಿಂದ ಅವರ ಆರೋಗ್ಯ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತದೆ.

ಹೀಗಾಗಿ, ಅಂತಹ ಸಮಸ್ಯೆ ಇರುವವರು ದೀಪಾವಳಿಯ ರಾತ್ರಿಗಳಲ್ಲಿ ಮನೆಯೊಳಗೇ ಇರಬೇಕು. ಪಟಾಕಿಗಳಿಂದ ಉಂಟಾಗುವ ವಾಯು ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದನ್ನು ಕಡಿಮೆ ಮಾಡಲು ಮಾಸ್ಕ್​ಗಳನ್ನು (N95 ಅಥವಾ N99) ಧರಿಸಬೇಕು. ಪಟಾಕಿ ಸುಡುವುದರಿಂದ ಉಂಟಾಗುವ ಮಾಲಿನ್ಯವು ಹೃದಯರಕ್ತನಾಳದ, ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೋಗ್ಯದ ಮೇಲೆ ಗಂಭೀರವಾಗಿ ಪರಿಣಾಮ ಬೀರಬಹುದು ಎಂಬ ಸಲಹೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಈ ಟೈಮಿನಲ್ಲಿ ಮಾತ್ರ ಪಟಾಕಿ ಸಿಡಿಸಲು ಅವಾಕಾಶ

ಯಾರಿಗಾದರೂ ಉಸಿರಾಟದ ತೊಂದರೆಗಳು ಉಂಟಾದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸರ್ಕಾರ ಸಲಹೆ ನೀಡಿದೆ. ವಾಯು ಮಾಲಿನ್ಯದಿಂದ ಸಂಪೂರ್ಣ ಪಾರಾಗುವುದು ಕಷ್ಟಕರವಾದಾಗ ಕೆಲವು ಕ್ರಮಗಳನ್ನು ತೆಗೆದುಕೊಳ್ಳುವುದರಿಂದ ನಿಮ್ಮ ಆರೋಗ್ಯದ ಮೇಲೆ ಅದರ ಹಾನಿಕಾರಕ ಪರಿಣಾಮಗಳನ್ನು ಕೊಂಚ ಮಟ್ಟಿಗೆ ನಿಯಂತ್ರಿಸಬಹುದು. ವಾಯು ಮಾಲಿನ್ಯ ಹೆಚ್ಚಾದಾಗ ಶಾಲೆಗಳು ಹೊರಾಂಗಣ ಚಟುವಟಿಕೆಗಳನ್ನು ಮಿತಿಗೊಳಿಸಬೇಕು ಮತ್ತು ಹೆಚ್ಚಿನ ಮಾಲಿನ್ಯ ಮಟ್ಟವನ್ನು ದಾಖಲಿಸುವ ದಿನಗಳಲ್ಲಿ ಮತ್ತು ಓಡುವಂತಹ ದೈಹಿಕ ಚಟುವಟಿಕೆಗಳನ್ನು ಮಾಡಿಸಬಾರದು ಎಂದು ಸಚಿವಾಲಯ ಸಲಹೆ ನೀಡಿದೆ.

ದೆಹಲಿ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಆರೋಗ್ಯ ಇಲಾಖೆಗಳಿಗೆ ಈ ವಾರ ಪತ್ರ ಬರೆದಿರುವ ಆರೋಗ್ಯ ಸಚಿವಾಲಯದ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಅತುಲ್ ಗೋಯೆಲ್ ಅವರು ವಾಯುಮಾಲಿನ್ಯವು ತೀವ್ರವಾದ ಕಾಯಿಲೆಗಳಿಗೆ ಕಾರಣವಾಗುವುದಲ್ಲದೆ, ದೀರ್ಘಕಾಲದ ಕಾಯಿಲೆಗಳ ಉಲ್ಬಣಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಾಯುಮಾಲಿನ್ಯವು ಗಂಭೀರವಾದ ಆರೋಗ್ಯ ಸವಾಲಾಗಿದೆ. ಆದಷ್ಟು ಬೇಗ ಅಗತ್ಯ ಆರೋಗ್ಯ ರಕ್ಷಣಾ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದೀಪಾವಳಿ: ಪಟಾಕಿ ಗಾಯಕ್ಕೆ ಚಿಕಿತ್ಸೆ ನೀಡಲು ಬೆಂಗಳೂರು ಆಸ್ಪತ್ರೆಗಳಿಂದ 24 ಗಂಟೆಯೂ ಸೇವೆ

ಐಸಿಎಂಆರ್​ ಅಧ್ಯಯನದ ಪ್ರಕಾರ, 2019ರಲ್ಲಿ 1.7 ಮಿಲಿಯನ್ ಸಾವುಗಳು ಅಥವಾ ಭಾರತದಲ್ಲಿನ ಒಟ್ಟು ಸಾವುಗಳಲ್ಲಿ ಶೇ. 18ರಷ್ಟು ಸಾವುಗಳು ವಾಯು ಮಾಲಿನ್ಯಕ್ಕೆ ಕಾರಣವಾಗಿವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ವಾಯು ಮಾಲಿನ್ಯದಿಂದ ರೋಗಿಗಳು ಕಣ್ಣು, ಮೂಗು, ಗಂಟಲು ಮತ್ತು ಚರ್ಮದ ಕಿರಿಕಿರಿ, ಕೆಮ್ಮು, ಉಸಿರಾಟದ ತೊಂದರೆ, ಉಬ್ಬಸ, ಎದೆ ಉರಿಯಂತಹ ಕೆಲವು ಲಕ್ಷಣಗಳನ್ನು ಹೊಂದಬಹುದು. ಅಸ್ವಸ್ಥತೆ, ಎದೆನೋವು, ತಲೆನೋವು, ತಲೆತಿರುಗುವಿಕೆ, ಕೈಕಾಲು ದೌರ್ಬಲ್ಯ ಇತ್ಯಾದಿಗಳನ್ನು ಕೂಡ ಅನುಭವಿಸಬಹುದು.

ಡಿಮೆ ಮಟ್ಟದ ವಾಯುಮಾಲಿನ್ಯಕ್ಕೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ ಉಸಿರಾಟ ಮತ್ತು ಹೃದಯರಕ್ತನಾಳದ ವ್ಯವಸ್ಥೆಗಳ ದೀರ್ಘಕಾಲದ ಕಾಯಿಲೆಗಳು, ಶ್ವಾಸಕೋಶದ ಕ್ಯಾನ್ಸರ್ ಮತ್ತು ಅಕಾಲಿಕ ಮರಣಗಳಿಗೆ ಕಾರಣವಾಗಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Sat, 11 November 23

ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!