ಅವಕಾಡೊ ಸೇವನೆಯಿಂದ ಟೈಪ್ 2 ಡಯಾಬಿಟಿಸ್ ನಿಯಂತ್ರಣ ಸಾಧ್ಯವೇ?

ಟೈಪ್ 2 ಮಧುಮೇಹಕ್ಕೆ ಯಾವುದೇ ಚಿಕಿತ್ಸೆ ಇಲ್ಲ. ಅವಕಾಡೊ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿ ಒಳಾಂಗಗಳಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ಕಡಿಮೆ ಮಾಡುತ್ತದೆ. ಒಳಾಂಗಗಳ ಕೊಬ್ಬು ಮಧುಮೇಹಕ್ಕೆ ಅಪಾಯಕಾರಿ ಅಂಶವಾಗಿದೆ.

ಅವಕಾಡೊ ಸೇವನೆಯಿಂದ ಟೈಪ್ 2 ಡಯಾಬಿಟಿಸ್ ನಿಯಂತ್ರಣ ಸಾಧ್ಯವೇ?
ಅವಕಾಡೊ ಹಣ್ಣು
Follow us
ಸುಷ್ಮಾ ಚಕ್ರೆ
|

Updated on: Dec 15, 2023 | 4:02 PM

ಟೈಪ್ 2 ಡಯಾಬಿಟಿಸ್ ರಕ್ತದಲ್ಲಿನ ಅಧಿಕ ಮಟ್ಟದ ಸಕ್ಕರೆಯಿಂದ ಬರುವ ರೋಗವಾಗಿದೆ. ಈ ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲದಿರುವುದರಿಂದ ತೂಕ ಇಳಿಸುವುದು, ಆಹಾರ ಮತ್ತು ವ್ಯಾಯಾಮದ ಮೂಲಕ ಈ ಕಾಯಿಲೆಯನ್ನು ಕೊಂಚ ಮಟ್ಟಿಗೆ ನಿಯಂತ್ರಿಸಬಹುದು. ಅವಕಾಡೊ ಹಣ್ಣು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್, ಹೆಚ್ಚಿನ ಫೈಬರ್ ಮತ್ತು ಹೃದಯಕ್ಕೆ ಆರೋಗ್ಯಕರವಾದ ಕೊಬ್ಬು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಅವಕಾಡೊ ಹಣ್ಣಿನಲ್ಲಿ ವಿಟಮಿನ್ ಎ, ಬಿ, ಇ, ಫೈಬರ್, ಖನಿಜಗಳು ಮತ್ತು ಪ್ರೋಟೀನ್ ತುಂಬಿದೆ. ಅವಕಾಡೊದಲ್ಲಿ ಸಕ್ಕರೆಯ ಪ್ರಮಾಣವು ತುಂಬಾ ಕಡಿಮೆ ಇರುತ್ತದೆ. ಅಧಿಕ ಕೊಬ್ಬು ಮತ್ತು ಕಡಿಮೆ ಕಾರ್ಬ್ ಆಹಾರವಾಗಿರುವ ಅವಕಾಡೊ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಅವಕಾಡೊ ಹಣ್ಣನ್ನು ತಿನ್ನುವುದರಿಂದ ತೂಕ ಇಳಿಸಲು ಸಹಾಯವಾಗುತ್ತದೆ. ಈ ಹಣ್ಣು ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದು ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಬಟರ್ ಫ್ರೂಟ್ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುವ ಮೊನೊಸಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತದೆ. ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಇದು ಪರಿಣಾಮಕಾರಿಯಾಗಿದೆ. ಅವಕಾಡೊದಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಷಿಯಮ್ ಸಮೃದ್ಧವಾಗಿರುತ್ತದೆ. ಇದರ ಜೊತೆಗೆ ಆ್ಯಂಟಿಆಕ್ಸಿಡೆಂಟ್‌ಗಳು, ವಿಟಮಿನ್ ಬಿ 6, ಎ, ಇ ಮತ್ತು ಸಿ ಅಂಶಗಳು ಇರುತ್ತದೆ.

ಇದನ್ನೂ ಓದಿ: ದಿನವೂ ಬಟರ್​ ಫ್ರೂಟ್ ತಿನ್ನಿ, ರೋಗಗಳಿಂದ ದೂರವಿರಿ

ಅವಕಾಡೊ ಉರಿಯೂತದ ಗುಣಲಕ್ಷಣಗಳನ್ನು ಸಹ ಹೊಂದಿದೆ. ಇದು ಮಧುಮೇಹಿಗಳಿಗೆ ಪ್ರಯೋಜನಕಾರಿಯಾದ ಆಯ್ಕೆಯಾಗಿದೆ. ಮಧುಮೇಹವು ದೀರ್ಘಕಾಲದ ಸಮಸ್ಯೆಯಾಗಿದ್ದು, ಇದರಲ್ಲಿ ನಿಮ್ಮ ರಕ್ತದಲ್ಲಿನ ಗ್ಲೂಕೋಸ್ (ರಕ್ತದ ಸಕ್ಕರೆ) ಮಟ್ಟವು ಅಧಿಕವಾಗಿರುತ್ತದೆ. ನಿಮ್ಮ ಮೇದೋಜ್ಜೀರಕ ಗ್ರಂಥಿಯು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿರ್ವಹಿಸಲು ಸಾಕಷ್ಟು ಇನ್ಸುಲಿನ್ ಅನ್ನು ಉತ್ಪಾದಿಸದಿದ್ದಾಗ ಅಥವಾ ಉತ್ಪತ್ತಿಯಾಗುವ ಇನ್ಸುಲಿನ್ ಅನ್ನು ದೇಹವು ಪರಿಣಾಮಕಾರಿಯಾಗಿ ಬಳಸದಿದ್ದಾಗ ಮಧುಮೇಹ ರೋಗ ಉಂಟಾಗುತ್ತದೆ. ಈ ಎರಡೂ ಸಂದರ್ಭಗಳಲ್ಲಿ ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ. ಕ್ರಮೇಣ ಇದು ತೀವ್ರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಟೈಪ್ 2 ಮಧುಮೇಹಕ್ಕೆ ಯಾವುದೇ ಚಿಕಿತ್ಸೆ ಇಲ್ಲ. ತೂಕವನ್ನು ಇಳಿಸಿಕೊಳ್ಳುವುದು, ಉತ್ತಮ ಆಹಾರ ಸೇವನೆ ಮತ್ತು ವ್ಯಾಯಾಮ ಮಾಡುವುದರಿಂದ ಡಯಾಬಿಟಿಸ್ ರೋಗವನ್ನು ನಿಭಾಯಿಸಬಹುದು. ಆಹಾರ ಮತ್ತು ವ್ಯಾಯಾಮವು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡದಿದ್ದರೆ ನೀವು ಔಷಧಿಗಳು ಅಥವಾ ಇನ್ಸುಲಿನ್ ಚಿಕಿತ್ಸೆಯನ್ನು ಪಡೆಯಬೇಕಾಗುತ್ತದೆ.

ಅವಕಾಡೊ 40ರ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಇದನ್ನು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಇದು ಹೆಚ್ಚಿನ ಫೈಬರ್, ಕಡಿಮೆ ಕಾರ್ಬೋಹೈಡ್ರೇಟ್‌ಗಳು ಮತ್ತು ಉತ್ತಮ ಪ್ರಮಾಣದ ಹೃದಯಕ್ಕೆ ಆರೋಗ್ಯಕರವಾದ ಕೊಬ್ಬನ್ನು ಹೊಂದಿದೆ. ಒಟ್ಟಾರೆಯಾಗಿ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಸಕ್ಕರೆ ತಿನ್ನದವರಿಗೂ ಮಧುಮೇಹ ಬರುತ್ತಾ? ಕುತೂಹಲಕಾರಿ ಮಾಹಿತಿ ಇಲ್ಲಿದೆ

ಅವಕಾಡೊವನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿ ಒಳಾಂಗಗಳಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ಕಡಿಮೆ ಮಾಡುತ್ತದೆ. ಒಳಾಂಗಗಳ ಕೊಬ್ಬು ಮಧುಮೇಹಕ್ಕೆ ಅಪಾಯಕಾರಿ ಅಂಶವಾಗಿದೆ. ಆರೋಗ್ಯಕರ ಕೊಬ್ಬುಗಳು ನಿಧಾನವಾಗಿ ಹೊಟ್ಟೆ ಖಾಲಿಯಾಗಲು ಸಹಾಯ ಮಾಡುತ್ತದೆ. ಇದರಿಂದ ಹೆಚ್ಚು ಹಸಿವಾಗುವುದಿಲ್ಲ. ಈ ಹಣ್ಣಿನಲ್ಲಿ ಕಾರ್ಬೋಹೈಡ್ರೇಟ್‌ಗಳು ಕಡಿಮೆ ಇದೆ. ಇದು ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ತಡೆಯಲು ಸಹಾಯ ಮಾಡುತ್ತದೆ. ಮಧುಮೇಹ ಇರುವವರಿಗೆ ಅವಕಾಡೊ ಸುರಕ್ಷಿತವಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ