Camphor Health Benefits: ಕರ್ಪೂರ ಪೂಜೆಗೆ ಮಾತ್ರವಲ್ಲ ಆರೋಗ್ಯಕ್ಕೂ ಪ್ರಯೋಜನಕಾರಿ
ಕರ್ಪೂರ ಕೇವಲ ಪೂಜೆಗೆ ಮಾತ್ರ ಸೀಮಿತವಾಗಿರದೆಯೇ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಕರ್ಪೂರದಲ್ಲಿ ಉತ್ಕರ್ಷಣ ನಿರೋಧಕಗಳು, ಲಿನಾಲುಲ್, ಲೆಮೋನೇನ್, ಸಬಿನ್ ನಂತಹ ಗುಣಗಳನ್ನು ಹೊಂದಿದೆ. ಹಾಗಾಗಿ ಕರ್ಪೂರ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡಿ ಆರೋಗ್ಯವನ್ನು ಸುಧಾರಣೆ ಮಾಡುವ ಶಕ್ತಿಯನ್ನು ಹೊಂದಿದೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು? ಯಾವ ರೀತಿ ಬಳಸುವುದು ಉತ್ತಮ? ಇಲ್ಲಿದೆ ಸಂಪೂರ್ಣ ಮಾಹಿತಿ.
ಸಾಂದರ್ಭಿಕ ಚಿತ್ರ
ಮನೆ ಮತ್ತು ದೇವಸ್ಥಾನಗಳ ಪೂಜೆ ಸಮಯದಲ್ಲಿ ಕರ್ಪೂರವನ್ನು ಬಳಸಲಾಗುತ್ತದೆ. ಇದು ಕೇವಲ ಪೂಜೆಗೆ ಮಾತ್ರ ಸೀಮಿತವಾಗಿರದೆಯೇ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಕರ್ಪೂರದಲ್ಲಿ ಉತ್ಕರ್ಷಣ ನಿರೋಧಕಗಳು, ಲಿನಾಲುಲ್, ಲೆಮೋನೇನ್, ಸಬಿನ್ ನಂತಹ ಗುಣಗಳನ್ನು ಹೊಂದಿದೆ. ಹಾಗಾಗಿ ಕರ್ಪೂರ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡಿ ಆರೋಗ್ಯವನ್ನು ಸುಧಾರಣೆ ಮಾಡುವ ಶಕ್ತಿಯನ್ನು ಹೊಂದಿದೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು? ಯಾವ ರೀತಿ ಬಳಸುವುದು ಉತ್ತಮ? ಇಲ್ಲಿದೆ ಸಂಪೂರ್ಣ ಮಾಹಿತಿ.
- ಪೂಜಾ ಸಮಯದಲ್ಲಿ ಬಳಸುವ ಕರ್ಪೂರವು ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.
- ಕರ್ಪೂರದ ಬಳಕೆಯು ಉಸಿರಾಟದ ಸಮಸ್ಯೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಇದು ಶ್ವಾಸಕೋಶದ ಸೋಂಕನ್ನು ನಿವಾರಣೆ ಮಾಡುತ್ತದೆ.
- ಕರ್ಪೂರವನ್ನು ಬಿಸಿ ನೀರಿಗೆ ಹಾಕಿ ಆ ಹಬೆ ತೆಗೆದುಕೊಳ್ಳುವುದರಿಂದ ತೆಲೆನೋವು ವಾಸಿಯಾಗುತ್ತದೆ.
- ಕರ್ಪೂರವನ್ನು ಗಾಯವಾದ ಸ್ಥಳಕ್ಕೆ ಹಚ್ಚುವುದರಿಂದ ಗಾಯ ಬೇಗ ವಾಸಿಯಾಗುತ್ತದೆ.
- ಕರ್ಪೂರವು ಸ್ನಾಯು ಮತ್ತು ಕೀಲುಗಳಿಗೆ ಸಂಬಂಧಿಸಿದ ನೋವಿನಿಂದ ಪರಿಹಾರ ನೀಡುತ್ತದೆ.
- ನಿಮ್ಮ ತಲೆಯಲ್ಲಿ ತುರಿಕೆ ಹೆಚ್ಚಾಗಿದ್ದರೆ, ತೆಂಗಿನ ಎಣ್ಣೆಯಲ್ಲಿ ಕರ್ಪೂರವನ್ನು ಬೆರೆಸಿ ಮಸಾಜ್ ಮಾಡಿ, ಈ ರೀತಿ ಮಾಡುವುದರಿಂದ ಎಷ್ಟೇ ತುರಿಕೆ ಇದ್ದರೂ ಕಡಿಮೆಯಾಗುತ್ತದೆ.
- ಕರ್ಪೂರವು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಕರ್ಪೂರವನ್ನು ಬಿಸಿ ನೀರಿನಲ್ಲಿ ಹಾಕಿ ಅದರಲ್ಲಿ ಕಾಲುಗಳನ್ನು ಇಟ್ಟು ಕುಳಿತುಕೊಳ್ಳುವುದರಿಂದ ಒಡೆದ ಹಿಮ್ಮಡಿಗಳಿಂದ ಪರಿಹಾರ ಪಡೆದುಕೊಳ್ಳಬಹುದು.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸೂಚನೆ: ಇದು ಕೇವಲ ಮಾಹಿತಿಯಾಗಿದ್ದು ಇದನ್ನು ಅನುಸರಿಸುವ ಮೊದಲು ವೈದ್ಯರ ಸಲಹೆಯನ್ನು ಪಡೆದುಕೊಳ್ಳಿ.