AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ಜ್ಯೂಸ್ ಕುಡಿಯುವುದರಿಂದ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದಾ? ಇಲ್ಲಿದೆ ಮಾಹಿತಿ

ಬೀಟ್ರೊಟ್ ರಸವು ನೈಟ್ರೇಟ್​​ಗಳನ್ನು ಹೊಂದಿರುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸುತ್ತದೆ ಮತ್ತು ರಕ್ತದ ಹರಿವನ್ನು ಸುಧಾರಿಸುತ್ತದೆ, ಆ ಮೂಲಕ ಅಧಿಕ ರಕ್ತದೊತ್ತಡ ಮತ್ತು ನಂತರದ ಹಾನಿಯನ್ನು ತಗ್ಗಿಸುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

Heart Attack: ಜ್ಯೂಸ್ ಕುಡಿಯುವುದರಿಂದ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದಾ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 14, 2023 | 3:24 PM

Share

ನಿಮಗೆ ತಿಳಿದಿರಬಹುದು ಕೋವಿಡ್ ಸಾಂಕ್ರಾಮಿಕ ಪ್ರಾರಂಭವಾದಾಗಿನಿಂದ ಹೃದಯಾಘಾತ ಹೆಚ್ಚುತ್ತಲಿದ್ದು, ಇದು ಪ್ರಸ್ತುತ ಪೀಳಿಗೆಗೆ ಕಳವಳದ ಸಂಗತಿಯಾಗಿದೆ. 13 ವರ್ಷ ವಯಸ್ಸಿನ ಮಕ್ಕಳು ಸಹ ಮಾರಣಾಂತಿಕ ಹೃದಯಾಘಾತದಿಂದ ಕೊನೆಯುಸಿರೆಳೆಯುತ್ತಿರುವುದನ್ನು ನೀವು ನೋಡಿರಬಹುದು. ಅದಲ್ಲದೆ ಇತ್ತೀಚಿನ ದಿನಗಳಲ್ಲಿ ಹುಟ್ಟಿದ ಮಕ್ಕಳು ಹೃದಯಾಘಾದಿಂದ ಪ್ರಾಣ ಬಿಡುತ್ತಿದ್ದಾರೆ. ವಯಸ್ಕರಲ್ಲಿ ಇಂತಹ ಅಪಾಯವನ್ನು ಕಡಿಮೆ ಮಾಡುವಲ್ಲಿ ಆಹಾರ ಮತ್ತು ಅವರ ಜೀವನಶೈಲಿ ಪ್ರಮುಖ ಪಾತ್ರ ವಹಿಸುತ್ತದೆಯಾದರೂ, ಒಂದು ನಿರ್ದಿಷ್ಟ ತರಕಾರಿ ರಸ ಅಥವಾ ಹಣ್ಣಿನ ರಸ ಈ ಉದ್ದೇಶಕ್ಕಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿದು ಬಂದಿದೆ. ಅದು ಬೇರಾವುದೂ ಅಲ್ಲ ಬೀಟ್ರೂಟ್ ಜ್ಯೂಸ್. ಈ ಕೆಂಪು ಬಣ್ಣದ ಪಾನೀಯವು ನಿಮಗೆ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ.

ಲಂಡನ್ನ ಕ್ವೀನ್ ಮೇರಿ ವಿಶ್ವವಿದ್ಯಾಲಯದ ತಜ್ಞರ ಪ್ರಕಾರ, ದಿನಕ್ಕೆ ಕೇವಲ 70 ಮಿಲಿ ಬೀಟ್ರೂಟ್ ರಸವನ್ನು ಕುಡಿಯುವುದರಿಂದ ಹೃದಯಾಘಾತದ ಅಪಾಯವನ್ನು ಶೇಕಡಾ 50ಕ್ಕಿಂತ ಕಡಿಮೆ ಮಾಡಬಹುದು. ಇದು ಕೇವಲ ಆರು ತಿಂಗಳಲ್ಲಿ ಸ್ಟೆಂಟ್ ಹೊಂದಿರುವ ರೋಗಿಗಳಲ್ಲಿನ ಹೆಚ್ಚಾಗಿರುವ ತೊಡಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Heart Attack Symptoms: ಕೇವಲ ಎದೆನೋವು ಮಾತ್ರವಲ್ಲ ಹೃದಯಾಘಾತದ ಈ ಲಕ್ಷಣಗಳ ಬಗ್ಗೆಯೂ ಎಚ್ಚರವಿರಲಿ

ಬೀಟ್ರೂಟ್ ಜ್ಯೂಸ್ ಸಮಗ್ರವಾಗಿ “ನೈಟ್ರೇಟ್​​​ಗಳನ್ನು” ಒಳಗೊಂಡಿದೆ. ಇದು ರಕ್ತನಾಳಗಳನ್ನು ಹಿಗ್ಗಿಸುತ್ತದೆ ಮತ್ತು ರಕ್ತದ ಹರಿವನ್ನು ಸುಧಾರಿಸುತ್ತದೆ, ಆ ಮೂಲಕ ಅಧಿಕ ರಕ್ತದೊತ್ತಡ ಮತ್ತು ನಂತರದ ಹಾನಿಯನ್ನು ತಗ್ಗಿಸುತ್ತದೆ. ಅಧ್ಯಯನದಲ್ಲಿ ಭಾಗಿಯಾಗಿರುವ, ಭಾಗವಹಿಸುವವರು ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಔಷಧಿಗಳ ಅಗತ್ಯವಿಲ್ಲದೆ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆಯನ್ನು ಗಮನಿಸಿದ್ದಾರೆ. ಪಾನೀಯವು ಪರಿಣಾಮಕಾರಿಯಾಗಿದ್ದು ಜೊತೆಗೆ ಸ್ಟೆಂಟ್ ಗಳು ಹೆಚ್ಚು ಕಾಲ ಬಾಳಿಕೆ ಬರುವುದನ್ನು ನೀವು ನೋಡಬಹುದಾಗಿದೆ.

ಹೃದಯಾಘಾತದ ಅಪಾಯವನ್ನು ಹೇಗೆ ಕಡಿಮೆ ಮಾಡುವುದು?

ಆನುವಂಶಿಕ ಅಂಶಗಳನ್ನು ಬದಲಾಯಿಸಲಾಗುವುದಿಲ್ಲವಾದರೂ, ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಜನರಿಗೆ ಸಹಾಯ ಮಾಡುವ ಕೆಲವು ಸರಳ ಸಲಹೆಗಳಿವೆ:

-ಧೂಮಪಾನ ಮಾಡುವುದನ್ನು ನಿಲ್ಲಿಸಿ.

– ಆಲ್ಕೋಹಾಲ್ ಸೇವನೆಯನ್ನು ಮಿತಿಯಲ್ಲಿಟ್ಟುಕೊಳ್ಳಿ ಅಥವಾ ಬಿಟ್ಟು ಬಿಡಿ.

-ಸೂಚಿಸಿದ ಔಷಧೋಪಚಾರವನ್ನು ಸಮಯೋಚಿತವಾಗಿ ತೆಗೆದುಕೊಳ್ಳಿ.

– ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ.

-ಆರೋಗ್ಯಕರವಾಗಿರಲು ಪ್ರತಿನಿತ್ಯ ವ್ಯಾಯಾಮ ಮಾಡಿ.

-ಆಹಾರವನ್ನು ನಿಯಮಿತವಾಗಿ ಸೇವಿಸಿ, ಸಮತೋಲಿತ ಆಹಾರವನ್ನು ಅನುಸರಿಸಿ.

-ಸೂಚಿಸಲಾದ ಔಷಧಿಗಳನ್ನು ತೆಗೆದುಕೊಳ್ಳಿ.

ಲೇಖನದಲ್ಲಿ ಉಲ್ಲೇಖಿಸಲಾದ ಸಲಹೆಗಳು ಸಾಮಾನ್ಯ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ವೃತ್ತಿಪರ ವೈದ್ಯಕೀಯ ಸಲಹೆ ಎಂದು ಭಾವಿಸಬಾರದು. ನಿಮ್ಮ ಆಹಾರದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುವ ಮೊದಲು ಯಾವಾಗಲೂ ನಿಮ್ಮ ವೈದ್ಯರು ಅಥವಾ ಆಹಾರ ತಜ್ಞರನ್ನು ಸಂಪರ್ಕಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!