ಗೋಡಂಬಿ ಸೇವನೆ ಮಾಡಿದರೆ ದೇಹದ ತೂಕ ಹೆಚ್ಚಾಗುತ್ತದೆಯೇ ಅಥವಾ ಕಡಿಮೆಯಾಗುತ್ತಾ ತಿಳಿದುಕೊಳ್ಳಿ
ಗೋಡಂಬಿ ಸೇವನೆಯ ಪ್ರಯೋಜನ: ಗೋಡಂಬಿಯಲ್ಲಿರುವ ಪೋಷಕಾಂಶಗಳು ದೇಹಕ್ಕೆ ಬಹಳ ಒಳ್ಳೆಯದು. ಆದರೆ ಇದನ್ನು ಸೇವನೆ ಮಾಡುವುದರಿಂದ ತೂಕ ಹೆಚ್ಚಾಗುತ್ತದೆಯೇ ಅಥವಾ ಕಡಿಮೆಯಾಗುತ್ತದೆಯೇ ಎಂಬ ಅನುಮಾನಗಳಿವೆ. ಈ ವಿಷಯದ ಬಗ್ಗೆ ಸ್ಪಷ್ಟತೆ ಪಡೆಯಲು ಕೆಲವು ಮಾಹಿತಿಗಳನ್ನು ನೀಡಲಾಗಿದ್ದು, ಎಷ್ಟು ತಿನ್ನುತ್ತೀರಿ? ಯಾವ ಸಮಯದಲ್ಲಿ ಸೇವನೆ ಮಾಡುತ್ತೀರಿ ಎಂಬುದು ಕೂಡ ಮುಖ್ಯವಾಗಿರುತ್ತದೆ. ಹಾಗಾದರೆ ಇದನ್ನು ಸೇವನೆ ಮಾಡುವುದು ತೂಕ ಹೆಚ್ಚಳಕ್ಕೆ ಕಾರಣವಾಗಬಹುದೇ? ಅಥವಾ ತೂಕ ಕಡಿಮೆಯಾಗುತ್ತಾ? ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಗೋಡಂಬಿ (Cashew) ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಇವು ನಾಲಿಗೆಗೆ ರುಚಿ ನೀಡುವುದಲ್ಲದೆ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಇದರಲ್ಲಿರುವ ಪೋಷಕಾಂಶಗಳು ದೇಹಕ್ಕೆ ಶಕ್ತಿಯನ್ನು ಒದಗಿಸುವುದಲ್ಲದೆ ರೋಗನಿರೋಧಕ ಶಕ್ತಿಯನ್ನು (Immunity) ಕೂಡ ಹೆಚ್ಚಿಸುತ್ತದೆ. ಆದರೆ ಅನೇಕರಿಗೆ ಗೋಡಂಬಿ ಸೇವನೆ ಮಾಡುವುದರಿಂದ ತೂಕ (Weight) ಹೆಚ್ಚಾಗುತ್ತದೆಯೇ ಅಥವಾ ಕಡಿಮೆಯಾಗುತ್ತದೆಯೇ ಎಂಬ ಗೊಂದಲವಿದೆ. ಈ ರೀತಿಯ ಅನುಮಾನಗಳಿಂದ ಗೋಡಂಬಿ ತಿನ್ನುವುದನ್ನೇ ನಿಲ್ಲಿಸಿರುತ್ತಾರೆ. ಹಾಗಾದರೆ ಇದನ್ನು ಸೇವನೆ ಮಾಡುವುದು ತೂಕ ಹೆಚ್ಚಳಕ್ಕೆ ಕಾರಣವಾಗಬಹುದೇ? ಅಥವಾ ತೂಕ ಕಡಿಮೆಯಾಗುತ್ತಾ? ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹೆಚ್ಚಿನ ಕ್ಯಾಲೊರಿ ಇರುವ ಆಹಾರ
ಗೋಡಂಬಿಯಲ್ಲಿ ಹೆಚ್ಚಿನ ಕ್ಯಾಲೊರಿಗಳಿರುತ್ತದೆ. ಅದಲ್ಲದೆ ಇದು ದೇಹಕ್ಕೆ ತ್ವರಿತ ಶಕ್ತಿಯನ್ನು ಒದಗಿಸುವ ಅತ್ಯುತ್ತಮ ಆಹಾರಗಳಲ್ಲಿ ಒಂದಾಗಿದೆ. ಜೊತೆಗೆ ಗೋಡಂಬಿಯಲ್ಲಿ ಆರೋಗ್ಯಕರ ಕೊಬ್ಬುಗಳು, ಫೈಬರ್ ಮತ್ತು ಪ್ರೋಟೀನ್ ಗಳು ಸಮೃದ್ಧವಾಗಿದೆ. ಇದು ದೇಹಕ್ಕೆ ಅಗತ್ಯವಿರುವ ಪೋಷಣೆಯನ್ನು ನೀಡುವಲ್ಲಿ ಮುಖ್ಯ ಪಾತ್ರವಹಿಸುತ್ತದೆ. ನೀವು ಕೂಡ ತೂಕ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಹೆಚ್ಚಿನ ಕ್ಯಾಲೊರಿಗಳನ್ನು ಹೊಂದಿರುವ ಆಹಾರ ಸೇವನೆ ಮಾಡಬೇಕಾಗುತ್ತದೆ ಅಂದರೆ, ಗೋಡಂಬಿಯಂತಹ ಆಹಾರಗಳು ಬಹಳ ಉಪಯುಕ್ತವಾಗಿವೆ. ವಿಶೇಷವಾಗಿ ಹುರಿದ ಗೋಡಂಬಿ ಬೀಜಗಳಿಗೆ ಸ್ವಲ್ಪ ಉಪ್ಪನ್ನು ಸೇರಿಸಿ ತಿಂದರೆ ಅದರಲ್ಲಿನ ಕ್ಯಾಲೊರಿಗಳು ದೇಹಕ್ಕೆ ತಕ್ಷಣದ ಶಕ್ತಿಯನ್ನು ನೀಡುತ್ತದೆ. ಜೊತೆಗೆ ಈ ರೀತಿ ತಿನ್ನುವುದು ತೂಕ ಹೆಚ್ಚಳಕ್ಕೆ ಕಾರಣವಾಗಬಹುದು.
ಹಸಿವಾಗದಂತೆ ನೋಡಿಕೊಳ್ಳುತ್ತದೆ
ಗೋಡಂಬಿ ಬೀಜಗಳಲ್ಲಿನ ಫೈಬರ್ ದೇಹಕ್ಕೆ ಮತ್ತೊಂದು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ. ಫೈಬರ್ ಸಮೃದ್ಧವಾಗಿರುವ ಆಹಾರವು ದೀರ್ಘಕಾಲದವರೆಗೆ ಹಸಿವಾಗದಂತೆ ನೋಡಿಕೊಳ್ಳುತ್ತದೆ. ಹಾಗಾಗಿ ಹೊಟ್ಟೆ ತುಂಬಿದ ಅನುಭವ ಇರುತ್ತದೆ. ಇದು ನೀವು ತಿನ್ನುವ ಆಹಾರದ ಪ್ರಮಾಣವನ್ನು ನಿಯಂತ್ರಿಸಲು ಕೂಡ ಸಹಾಯ ಮಾಡುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಕೂಡ ಗೋಡಂಬಿ ಬೀಜಗಳನ್ನು ಮಿತವಾಗಿ ಸೇವನೆ ಮಾಡಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಉದಾಹರಣೆಗೆ, ನೀವು ಇದನ್ನು ಮಧ್ಯಾಹ್ನ ಅಥವಾ ಸಂಜೆ ಸಮಯದಲ್ಲಿ ಲಘು ಉಪಾಹಾರವಾಗಿ ತೆಗೆದುಕೊಂಡರೆ, ದೇಹಕ್ಕೆ ಸಾಕಷ್ಟು ಶಕ್ತಿ ಸಿಗುತ್ತದೆ. ಅನಗತ್ಯವಾಗಿ ಜಂಕ್ ಫುಡ್ ತಿನ್ನುವ ಅಭ್ಯಾಸವೂ ಕೂಡ ಕಡಿಮೆಯಾಗುತ್ತದೆ. ಆದರೆ ಒಂದು ವಿಷಯ ನೆನಪಿನಲ್ಲಿರಲಿ, ಈ ಗೋಡಂಬಿ ಬೀಜಗಳನ್ನು ಮಿತವಾಗಿ ಸೇವಿಸಿದಾಗ ಮಾತ್ರ ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಅತಿಯಾಗಿ ತೆಗೆದುಕೊಂಡರೆ ತೂಕ ಹೆಚ್ಚಾಗುವ ಅಪಾಯವಿರುತ್ತದೆ.
ಯಾವ ಸಮಯದಲ್ಲಿ ಸೇವನೆ ಮಾಡಬೇಕು?
ಅದಲ್ಲದೆ ನೀವು ಗೋಡಂಬಿಯನ್ನು ತಿನ್ನುವ ವಿಧಾನವೂ ಕೂಡ ಬಹಳ ಮುಖ್ಯವಾಗುತ್ತದೆ. ಹುರಿದ ಅಥವಾ ಉಪ್ಪಿನೊಂದಿಗೆ ಬೆರೆಸಿ ತಿನ್ನುವುದು ನೇರವಾಗಿ ತಿನ್ನುವ ಬದಲು ಹೆಚ್ಚುವರಿ ಕ್ಯಾಲೊರಿಗಳನ್ನು ಸೇರಿಸುತ್ತದೆ. ತೂಕವನ್ನು ಹೆಚ್ಚಿಸಲು ಬಯಸುವವರಿಗೆ ಇದು ಒಳ್ಳೆಯದು. ಅದೇ ತೂಕವನ್ನು ಕಡಿಮೆ ಮಾಡಿಕೊಳ್ಳಲು ಬಯಸುವವರು ಉಪ್ಪು ಇಲ್ಲದೆ ಹುರಿಯದೆ ಮಿತವಾಗಿ ತಿನ್ನುವುದು ಉತ್ತಮ. ದೈನಂದಿನ ಆಹಾರದಲ್ಲಿ 4- 5 ಗೋಡಂಬಿ ತಿನ್ನುವುದು ದೇಹಕ್ಕೆ ಅಗತ್ಯವಾದ ಕೊಬ್ಬನ್ನು ಒದಗಿಸುತ್ತದೆ. ಆದರೆ ನೀವು ದಿನಕ್ಕೆ 10- 15 ಗೋಡಂಬಿ ಬೀಜಗಳ ಸೇವನೆ ಮಾಡಿದರೆ ಹೆಚ್ಚಿನ ಕ್ಯಾಲೊರಿಗಳ ಸಂಗ್ರವಾಗುವುದರಿಂದ ತೂಕ ಕೂಡ ಹೆಚ್ಚಾಗುತ್ತದೆ.
ಇದನ್ನೂ ಓದಿ: Palm Itching Causes: ಅಂಗೈನಲ್ಲಿ ಕಂಡುಬರುವ ತುರಿಕೆಯನ್ನು ನಿರ್ಲಕ್ಷಿಸಬೇಡಿ
ಗೋಡಂಬಿ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆಯೇ ಅಥವಾ ಕಡಿಮೆಯಾಗುತ್ತಾ?
ತೂಕ ಹೆಚ್ಚಿಸಿಕೊಳ್ಳುತ್ತೇವೆಯೋ ಅಥವಾ ಕಡಿಮೆ ಮಾಡಿಕೊಳ್ಳುತ್ತೇವೆಯೋ ಅದು ನಮ್ಮ ಮೇಲೆ ಅವಲಂಬಿತವಾಗಿರುತ್ತದೆ. ಜೊತೆಗೆ ನಾವು ತಿನ್ನುವ ಸಮಯ ಮತ್ತು ದೈಹಿಕ ಚಟುವಟಿಕೆಯ ಮೇಲೆ ಅವಲಂಬಿಸಿರುತ್ತದೆ. ವ್ಯಾಯಾಮ ಮಾಡದೆ ನೀವು ಹೆಚ್ಚು ಗೋಡಂಬಿ ಸೇವನೆ ಮಾಡಿದರೆ ತೂಕ ಹೆಚ್ಚಾಗುತ್ತದೆ. ಅಂತೆಯೇ, ನೀವು ನಿಯಮಿತವಾಗಿ ವ್ಯಾಯಾಮ ಮಾಡಿದರೆ ಮತ್ತು ಮಿತವಾಗಿ ಗೋಡಂಬಿ ಸೇವನೆ ಮಾಡಿದರೆ ದೇಹದ ತೂಕ ನಿಯಂತ್ರಣದಲ್ಲಿರುತ್ತದೆ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ