AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ ಬಿಪಿಯಿಂದ ಮರೆವು ಹೆಚ್ಚಾಗುತ್ತಾ? ಮೆದುಳಿನ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ?

ಇತ್ತೀಚಿನ ದಿನಗಳಲ್ಲಿ, ಅಧಿಕ ರಕ್ತದೊತ್ತಡದ ಸಮಸ್ಯೆ ವೇಗವಾಗಿ ಹೆಚ್ಚುತ್ತಿದ್ದು ವಯಸ್ಸಾದವರು ಮಾತ್ರವಲ್ಲ, ಯುವಜನತೆ ಕೂಡ ಇದರಿಂದ ಬಳಲುತ್ತಿದ್ದಾರೆ. ಇದನ್ನು ಕೇವಲ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಎಂದು ಪರಿಗಣಿಸಬಾರದು ಏಕೆಂದರೆ ಇದು ದೇಹದ ಇತರ ಅಂಗಗಳ ಮೇಲೂ ಪರಿಣಾಮ ಬೀರುತ್ತದೆ. ಅಷ್ಟು ಮಾತ್ರವಲ್ಲ, ಅಧಿಕ ರಕ್ತದೊತ್ತಡವು ಸ್ಮರಣಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಎಂಬುದು ತಿಳಿದು ಬಂದಿದೆ. ಹಾಗಾದರೆ ಯಾವ ರೀತಿಯ ಲಕ್ಷಣಗಳು ಕಂಡುಬಂದಾಗ ನಿರ್ಲಕ್ಷಿಸಬಾರದು, ಈ ಸಮಸ್ಯೆಯನ್ನು ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೈ ಬಿಪಿಯಿಂದ ಮರೆವು ಹೆಚ್ಚಾಗುತ್ತಾ? ಮೆದುಳಿನ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ?
High Bp And Brain HealthImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 29, 2026 | 7:55 PM

Share

ಇತ್ತೀಚಿನ ದಿನಗಳಲ್ಲಿ ಹೈ ಬಿಪಿ (High BP) ಸಮಸ್ಯೆ ಯುವಕರಲ್ಲೂ ಹೆಚ್ಚಾಗಿ ಕಾಣಿಸುತ್ತಿದೆ. ಇದನ್ನು ಹಲವರು ಹೃದಯ ಸಂಬಂಧಿತ ಸಮಸ್ಯೆ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಹೈ ಬಿಪಿ ದೇಹದ ಹಲವು ಅಂಗಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ವಿಶೇಷವಾಗಿ, ಇದು ಮೆದುಳಿನ ಆರೋಗ್ಯ ಮತ್ತು ನೆನಪಿನ ಶಕ್ತಿಯ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿದೆ. ಆರೋಗ್ಯ ತಜ್ಞರ ಪ್ರಕಾರ, ದೀರ್ಘಕಾಲ ಹೈ ಬಿಪಿ ಇದ್ದವರಿಗೆ ಮೆದುಳಿಗೆ ರಕ್ತವನ್ನು ಸಾಗಿಸುವ ರಕ್ತನಾಳಗಳು ಹಾನಿಗೊಳಗಾಗಬಹುದು. ಇದರಿಂದ ಗಮನ ಕೇಂದ್ರೀಕರಿಸುವುದು, ವಿಚಾರಗಳನ್ನು ನೆನಪಿಟ್ಟುಕೊಳ್ಳುವುದು ಮತ್ತು ಯೋಚನೆ ಮಾಡುವ ಸಾಮರ್ಥ್ಯ ಕುಗ್ಗುವ ಸಾಧ್ಯತೆ ಇದೆ. ಕೆಲವರಲ್ಲಿ ಮರೆವು, ಮಾನಸಿಕ ದೌರ್ಬಲ್ಯ ಮತ್ತು ಏಕಾಗ್ರತೆ ಸಮಸ್ಯೆಗಳು ಕಾಣಿಸಬಹುದು. ಆದರೆ ಜನ ಇವುಗಳನ್ನು ತಲೆನೋವು, ದಣಿವು ಅಥವಾ ಒತ್ತಡ ಎಂದು ಭಾವಿಸಿ ಈ ರೀತಿಯ ಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ. ಆದರೆ ದೀರ್ಘಕಾಲ ಬಿಪಿ ನಿಯಂತ್ರಣದಲ್ಲಿಲ್ಲದಿದ್ದರೆ ಅದು ಬ್ರೇನ್ ಹೆಲ್ತ್ ಮೇಲೆ ನಿಧಾನವಾಗಿ ಪರಿಣಾಮ ಬೀರುತ್ತದೆ ಎಂದು ವೈದ್ಯರು ಎಚ್ಚರಿಸುತ್ತಾರೆ. ಹಾಗಾದರೆ ಯಾವ ರೀತಿಯ ಲಕ್ಷಣಗಳನ್ನು ನಿರ್ಲಕ್ಷಿಸಬಾರದು, ಈ ಸಮಸ್ಯೆಯನ್ನು ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾವ ಲಕ್ಷಣಗಳನ್ನು ನಿರ್ಲಕ್ಷಿಸಬಾರದು?

  • ಪದೇಪದೇ ಮರೆತು ಹೋಗುವುದು
  • ಗಮನ ಕೇಂದ್ರೀಕರಿಸಲು ಕಷ್ಟವಾಗುವುದು
  • ತಲೆ ಸುತ್ತುವುದು
  • ನಿರಂತರ ತಲೆನೋವು
  • ಗೊಂದಲ ಅಥವಾ ಮಾನಸಿಕ ದಣಿವು

ಈ ರೀತಿಯ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಬಿಪಿ ಮತ್ತು ಮೆದುಳಿನ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ಇದನ್ನೂ ಓದಿ: ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಹೈ ಬಿಪಿ ನಿಯಂತ್ರಣಕ್ಕೆ ಏನು ಮಾಡಬೇಕು?

ತಜ್ಞರ ಸಲಹೆಯಂತೆ ನಿಯಮಿತವಾಗಿ ಬಿಪಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಉಪ್ಪಿನ ಸೇವನೆಯನ್ನು ಕಡಿಮೆ ಮಾಡುವುದು, ಪೌಷ್ಟಿಕ ಆಹಾರ ಸೇವಿಸುವುದು ಮತ್ತು ಪ್ರತಿದಿನ ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ಸಹಕಾರಿ. ಜೊತೆಗೆ ಉತ್ತಮ ನಿದ್ರೆ, ಒತ್ತಡ ನಿಯಂತ್ರಣ ಮತ್ತು ಧೂಮಪಾನ- ಮದ್ಯಪಾನದಿಂದ ದೂರ ಇರುವುದು ಕೂಡ ಮೆದುಳಿನ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಹೈ ಬಿಪಿಯನ್ನು ನಿರ್ಲಕ್ಷಿಸದೆ ಆರಂಭದಲ್ಲೇ ನಿಯಂತ್ರಣದಲ್ಲಿಟ್ಟರೆ ಹೃದಯ ಮತ್ತು ಮೆದುಳಿನ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More