Hypertensive Retinopathy: ಅಧಿಕ ರಕ್ತದೊತ್ತಡವು ಕಣ್ಣುಗಳ ಮೇಲೆ ಪರಿಣಾಮ ಬೀರಬಹುದೇ?

ಅಧಿಕ ರಕ್ತದೊತ್ತಡವು ಒಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದ್ದು, ದೀರ್ಘಕಾಲದ ಅಧಿಕ ರಕ್ತದೊತ್ತಡದಿಂದಾಗಿ ಹಲವಾರು ಗಂಭೀರ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಅದರಲ್ಲಿ ಕಣ್ಣಿನ ಸಮಸ್ಯೆಯೂ ಒಂದು. ಹೌದು ಅಧಿಕರಕ್ತದೊತ್ತವು ನಮ್ಮ ಕಣ್ಣಗಳನ್ನು ಕೂಡಾ ಹಾನಿಗೊಳಿಸಬಹುದು. ಆದ್ದರಿಂದ ರಕ್ತದೊತ್ತಡವನ್ನು ನಿಯಂತ್ರಣಲ್ಲಿಟ್ಟುಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ.

Hypertensive Retinopathy: ಅಧಿಕ ರಕ್ತದೊತ್ತಡವು ಕಣ್ಣುಗಳ ಮೇಲೆ ಪರಿಣಾಮ ಬೀರಬಹುದೇ?
Hypertensive Retinopathy
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Jul 23, 2023 | 10:59 AM

ಬದಲಾಗುತ್ತಿರುವ ಕಾಲಘಟ್ಟದಲ್ಲಿ ಜನರು ಅಳವಡಿಸಿಕೊಂಡಿರುವ ಅನಾರೋಗ್ಯಕರ ಜೀವನಶೈಲಿಯಿಂದಾಗಿ, ಜನರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆಯೂ ಒಂದು. . ದೀರ್ಘಕಾಲದ ಅನಿಯಂತ್ರಿತ ರಕ್ತದೊತ್ತಡವು ವ್ಯಕ್ತಿಗೆ ಮಾರಕವಾಗಿ ಪರಿಣಮಿಸುತ್ತದೆ. ಇದು ವ್ಯಕ್ತಿಯಲ್ಲಿ ಬ್ರೈನ್ ಸ್ಟ್ರೋಕ್, ಪಾರ್ಶ್ವವಾಯು, ಮೆದುಳಿನ ರಕ್ತಸ್ರಾವ, ಹೃದಯಾಘಾತ , ಮೂತ್ರ ಪಿಂಡದ ವೈಫಲ್ಯದ ಅಪಾಯವನ್ನು ಹೆಚ್ಚಿಸುತ್ತದೆ. ಇದು ಮಾತ್ರವಲ್ಲದೆ ಅಧಿಕ ರಕ್ತದೊತ್ತಡದಿಂದ ಕಣ್ಣಿಗೂ ಕೂಡಾ ಸಮಸ್ಯೆಯಿದೆ. ಅಂತಹ ಪರಿಸ್ಥಿತಿಯಲ್ಲಿ ವ್ಯಕ್ತಿಯ ಕಣ್ಣಿನ ದೃಷ್ಟಿ ಮಂದವಾಗುವ ಸಾಧ್ಯತೆ ಇದೆ ಮತ್ತು ಕೆಲವೊಮ್ಮೆ ವ್ಯಕ್ತಿಯು ಸಂಪೂರ್ಣವಾಗಿ ದೃಷ್ಟಿಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಹಾಗಾಗಿ ಆರೋಗ್ಯಕರ ಜೀವನಶೈಲಿಯ ಪಾಲನೆ ಮತ್ತು ಸರಿಯಾದ ಚಿಕಿತ್ಸೆಯನ್ನು ಪಡೆಯುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದಾಗಿದೆ.

ಹೈಪರ್ಟೆನ್ಸಿವ್ ರೆಟಿನೋಪತಿ ಎಂದರೇನು?

ಹೈಪರ್ಟೆನ್ಸಿವ್ ರೆಟಿನೋಪತಿ ಎನ್ನುವುದು ಅಧಿಕ ರಕ್ತದೊತ್ತಡದಿಂದ ಉಂಟಾಗುವ ಒಂದು ರೀತಿಯ ಕಣ್ಣಿನ ಸಮಸ್ಯೆಯಾಗಿದೆ. ರೆಟಿನಾದ ಮೇಲೆ ಅಂದರೆ ನಮ್ಮ ಕಣ್ಣುಗಳ ಹಿಂದಿನ ಪರದೆಯ ಮೇಲೆ ಉಂಟಾಗುವ ಪರಿಣಾಮವನ್ನು ಹೈಪರ್ಟೆನ್ಸಿವ್ ರೆಟಿನೋಪತಿ ಎಂದು ಕರೆಯಲಾಗುತ್ತದೆ. ದೀರ್ಘಕಾಲದ ಅಧಿಕ ರಕ್ತದೊತ್ತಡದ ಸಮಸ್ಯೆ ಹೊಂದಿರುವ ಜನರು ಹೈಪರ್ಟೆನ್ಸಿವ್ ರೆಟಿನೋಪತಿಯನ್ನು ಅಭಿವೃದ್ಧಿಪಡಿಸುವ ಸಾಧ್ಯತೆ ಹೆಚ್ಚು. ರಕ್ತದೊತ್ತಡದಲ್ಲಿ ಏರಿಕೆಯಾದಾಗ, ರೆಟಿನಾದ ರಕ್ತನಾಳಗಳ ಗೋಡೆಗಳು ದಪ್ಪವಾಗಬಹುದು. ಇದು ರಕ್ತನಾಳಗಳ ಕಿರಿದಾಗುವಿಕೆಗೆ ಕಾರಣವಾಗಬಹುದು. ನಂತರ ರಕ್ತವು ರೆಟಿನಾವನ್ನು ತಲುಪುವುದನ್ನು ಇದು ತಡೆಯುತ್ತದೆ. ಇದರಿಂದಾಗಿ ರೆಟಿನಾದ ರಕ್ತನಾಳಗಳಿಗೆ ಹಾನಿಯಾಗಿ ದೃಷ್ಟಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

ಅಧಿಕ ರಕ್ತದೊತ್ತಡ ಕಣ್ಣನ್ನು ಹೇಗೆ ಹಾನಿಗೊಳಿಸುತ್ತದೆ?

ರೆಟಿನಾದ ರಕ್ತನಾಳಗಳಿಗೆ ಹಾನಿ (ರೆಟಿನೋಪತಿ):

ಕಣ್ಣಿನ ಹಿಂಬಾಗದಲ್ಲಿರುವ (ರೆಟಿನಾ) ಬೆಳಕಿನ ಸೂಕ್ಷ್ಮ ಅಂಗಾಂಶದಲ್ಲಿನ ರಕ್ತನಾಳಗಳಿಗೆ ಹಾನಿಯಾಗುವುದರಿಂದ ಕಣ್ಣಿನಲ್ಲಿ ರಕ್ತಸ್ರಾವವಾಗಬಹುದು. ಇದರಿಂದ ದೃಷ್ಟಿ ಮಂದವಾಗಬಹುದು ಅಥವಾ ಸಂಪೂರ್ಣ ದೃಷ್ಟಿ ಹೋಗಬಹುದು. ಅಕ್ಷಿಪಟಲಕ್ಕೆ ರಕ್ತದ ಹರಿವಿನ ಕೊರತೆಯು ಮಸುಕಾದ ದೃಷ್ಟಿ ಅಥವಾ ಸಂಪೂರ್ಣ ದೃಷ್ಟಿ ನಷ್ಟಕ್ಕೆ ಕಾರಣವಾಗಬಹುದು.

ರೆಟಿನಾದ ಪೊರೆಯಲ್ಲಿ ದ್ರವ ಶೇಖರಣೆ:

ಅಧಿಕ ರಕ್ತದೊತ್ತಡದಿಂದಾಗಿ ಕಣ್ಣಿನಲ್ಲಿ ದ್ರವ ಶೇಖರಣೆಯಾಗುತ್ತದೆ. ಇದು ದೃಷ್ಟಿ ಮಂದವಾಗಲು ಕಾರಣವಾಗಬಹುದು.

ನರಹಾನಿ:

ಅಧಿಕ ರಕ್ತದೊತ್ತಡವು ಕಣ್ಣಿನ ನರಗಳನ್ನು ಹಾನಿಗೊಳಿಸಬಹುದು. ನಿರ್ಬಂಧಿಂತ ರಕ್ತದ ಹರಿವು ಆಪ್ಟಿಕ್ ನರಗಳನ್ನು ಹಾನಿಗೊಳಿಸುತ್ತದೆ ಇದರಿಂದ ನರಗಳು ಊದಿಕೊಳ್ಳುವ ಸಾಧ್ಯತೆಯಿರುತ್ತದೆ. ಇದು ಭಾಗಶಃ ದೃಷ್ಟಿ ನಷ್ಟ ಅಥವಾ ಸಂಪೂರ್ಣ ದೃಷ್ಟಿ ನಷ್ಟಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ: ದೀರ್ಘಕಾಲದ ಗ್ಯಾಸ್ಟ್ರಿಕ್ ಸಮಸ್ಯೆ ಅನ್ನನಾಳವನ್ನು ಹಾನಿಗೊಳಿಸಬಹುದೇ? ತಜ್ಞರು ಹೇಳುವುದೇನು?

ಹೈಪರ್ಟೆನ್ಸಿವ್ ರೆಟಿನೋಪತಿಯ ಲಕ್ಷಣಗಳು:

ಸಾಮಾನ್ಯವಾಗಿ ಹೈಪರ್ಟೆನ್ಸಿವ್ ರೆಟಿನೋಪತಿ ಲಕ್ಷಣರಹಿತವಾಗಿರುತ್ತದೆ ಮತ್ತು ಕಣ್ಣಿನ ಸಮಸ್ಯೆ ಕಾಣಿಸಿಕೊಂಡಾಗ ವೈದ್ಯಕೀಯ ಪರೀಕ್ಷೆಯ ಸಮಯದಲ್ಲಿ ಸಾಮಾನ್ಯವಾಗಿ ಈ ರೋಗಲಕ್ಷಣವನ್ನು ಕಂಡುಹಿಡಿಯಲಾಗುತ್ತದೆ.

  • ದೃಷ್ಟಿ ಸಮಸ್ಯೆಗಳು
  • ತಲೆನೋವು
  • ಕಣ್ಣುಗಳ ಊದಿಕೊಳ್ಳುವಿಕೆ

ಒಬ್ಬ ವ್ಯಕ್ತಿಯು ಅಧಿಕ ರಕ್ತದೊತ್ತಡವನ್ನು ಹೊಂದಿದ್ದರೆ ಮತ್ತು ಅವರು ಇದ್ದಕ್ಕಿದ್ದಂತೆ ದೃಷ್ಟಿ ಸಮಸ್ಯೆಗಳನ್ನು ಅನುಭವಿಸಿದರೆ, ಅವರು ತುರ್ತು ವೈದ್ಯಕೀಯ ಚಿಕಿತ್ಸೆಯನ್ನು ಪಡೆಯುವುದು ಮುಖ್ಯವಾಗಿದೆ.

ಹೈಪರ್ಟೆನ್ಸಿವ್ ರೆಟಿನೋಪತಿಯ ಚಿಕಿತ್ಸೆ ಮತ್ತು ತಡೆಗಟ್ಟುವಿಕೆ:

ಹೈಪರ್ಟೆನ್ಸಿವ್ ರೆಟಿನೋಪತಿಗೆ ಚಿಕಿತ್ಸೆ ನೀಡಲು ಉತ್ತಮ ಮಾರ್ಗವೆಂದರೆ ನಿಮ್ಮ ರಕ್ತದೊತ್ತಡವನ್ನು ಸಮರ್ಪಕವಾಗಿ ನಿಯಂತ್ರಿಸುವುದು. ಕಡಿಮೆ ಉಪ್ಪು ಸೇವನೆ, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಜೀವನಶೈಲಿಯ ಪಾಲನೆಯೊಂದಿಗೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬಹುದು. ಇದಲ್ಲದೆ ಅಧಿಕ ರಕ್ತದೊತ್ತಡದಿಂದಾಗಿ ಕಣ್ಣಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯುಂಟಾದಾಗ ವೈದ್ಯಕೀಯ ಪರೀಕ್ಷೆಯ ನಂತರ ಸರಿಯಾದ ಚಿಕಿತ್ಸೆಯನ್ನು ಪಡೆಯಬೇಕು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ