ಅತಿಯಾದ ನಿದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು, ಇಲ್ಲಿದೆ ಮಾಹಿತಿ

ಉತ್ತಮ ನಿದ್ರೆ ಪಡೆಯುವುದು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯ. ನಾವು ಆರೋಗ್ಯಕರವಾಗಿರಲು ದಿನದಲ್ಲಿ 7 ರಿಂದ 8 ಗಂಟೆಗಳ ಕಾಲ ಉತ್ತಮ ನಿದ್ರೆಯನ್ನು ಪಡೆಯುವುದು ಬಹಳ ಅವಶ್ಯಕ. ಇದು ನಮ್ಮನ್ನು ದಿನವಿಡೀ ಕ್ರಿಯಾಶೀಲವಾಗಿರಿಸುತ್ತದೆ ಮತ್ತು ನಮಗೆ ಶಕ್ತಿ ನೀಡುತ್ತದೆ. ಆದರೆ ಅಗತ್ಯಕ್ಕಿಂತ ಹೆಚ್ಚು ನಿದ್ರೆ ಮಾಡುವುದು ಒಳ್ಳೆಯದಲ್ಲ. ಅತಿಯಾದ ನಿದ್ರೆಯು ಕಾಯಿಲೆಗಳನ್ನು ಉಂಟುಮಾಡಬಹುದು ಈ ಕುರಿತ ಇನ್ನಷ್ಟು ಮಾಹಿತಿ ಇಲ್ಲಿದೆ.

ಅತಿಯಾದ ನಿದ್ರೆ ಈ ಆರೋಗ್ಯ  ಸಮಸ್ಯೆಗೆ ಕಾರಣವಾಗಬಹುದು, ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 09, 2023 | 6:56 PM

ನಾವು ಆರೋಗ್ಯಕರವಾಗಿ ಜೀವನ ನಡೆಸಲು ಸಮತೋಲಿತ ಆಹಾರ, ವ್ಯಾಯಾಮ ಎಷ್ಟು ಮುಖ್ಯವೋ ಅದೇ ರೀತಿ ಸಾಕಷ್ಟು ನಿದ್ರೆ ಪಡೆಯುವುದು ಕೂಡ ಬಹಳ ಮುಖ್ಯ. ಒಬ್ಬ ಮನುಷ್ಯನಿಗೆ ಪ್ರತಿನಿತ್ಯ 7 ರಿಂದ 8 ಗಂಟೆಗಳ ನಿದ್ರೆ ಬಹಳ ಮುಖ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಲೆಕ್ಕಕ್ಕಿಂತ ಹೆಚ್ಚಾಗಿ ನಿದ್ರೆ ಮಾಡಿದರೆ ಇದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಅತಿಯಾದರೆ ಅಮೃತವೂ ವಿಷವೆನ್ನುವಂತೆ ಯಾವುದೇ ಅಭ್ಯಾಸವಾಗಿರಲಿ ಅದು ಮಿತವಾಗಿರಬೇಕು. ಅಗತ್ಯಕ್ಕಿಂತ ಹೆಚ್ಚಾದರೆ ಅದು ನಮ್ಮ ಆರೋಗ್ಯಕ್ಕೆ ಕುತ್ತು ತರಬಹುದು. ಹಾಗೇಯೇ ಅತಿಯಾಗಿ ನಿದ್ರೆಯು ಕೂಡಾ ದೇಹದಲ್ಲಿ ಹಲವು ಕಾಯಿಲೆಗಳನ್ನು ಉಂಟುಮಾಡಬಹುದು.

ಅತಿಯಾಗಿ ನಿದ್ರಿಸುವುದರಿಂದ ಭಾದಿಸುವ ಆರೋಗ್ಯ ಸಮಸ್ಯೆಗಳೆಂದರೆ:

ಹೆಚ್ಚು ನಿದ್ರೆ ಮಾಡುವುದನ್ನು ವೈದ್ಯಕೀಯ ಭಾಷೆಯಲ್ಲಿ ಹೈಪರ್ ಸೋಮ್ನಿಯಾ ಎಂದು ಕರೆಯಲಾಗುತ್ತದೆ. ಹೈಪರ್ ಸೋಮ್ನಿಯಾ ದಿಂದ ಬಳಲುತ್ತಿರುವ ಜನರು ವಾಸ್ತವಾಗಿ ಅತಿಯಾಗಿ ನಿದ್ರೆ ಮಾಡುತ್ತಾರೆ. ಈ ಸ್ಥಿತಿಯು ಜನರು ದಿನವಿಡೀ ನಿದ್ರಿಸುವಂತೆ ಮಾಡುತ್ತದೆ. ಅಲ್ಲದೆ ಇದು ಅನೇಕ ರೋಗ ಲಕ್ಷಣಗಳನ್ನು ಉಂಟುಮಾಡಬಹುದು ಅವುಗಳೆಂದರೆ,

ಟೈಪ್-2 ಮಧುಮೇಹ:

ದೀರ್ಘಕಾಲ ನಿದ್ರೆ ಮಾಡುವುದರಿಂದ ವ್ಯಕ್ತಿಯು ದಿನನಿತ್ಯದ ಚಟುವಟಿಕೆಯಲ್ಲಿ ಕಡಿಮೆ ತೊಡಗಿಕೊಳ್ಳಲು ಕಾರಣವಾಗುತ್ತದೆ. ಅಲ್ಲದೆ ಇದು ದೇಹದಲ್ಲಿ ಸಕ್ಕರೆಯ ಮಟ್ಟ ಹೆಚ್ಚಾಗಲು ಕಾರಣವಾಗುತ್ತದೆ. ಅಧ್ಯಯನವೊಂದರ ಪ್ರಕಾರ 9 ಗಂಟೆಗಳಿಗಿಂತ ಹೆಚ್ಚು ಕಾಲ ನಿದ್ರೆ ಮಾಡುವುದರಿಂದ ವ್ಯಕ್ತಿಯ ದೇಹದಲ್ಲಿ ಸಕ್ಕರೆಯ ಮಟ್ಟವು ಹೆಚ್ಚಾಗಬಹುದು.

ಹೃದ್ರೋಗ:

ಅಮೇರಿಕನ್ ಅಕಾಡೆಮಿ ಆಫ್ ಸ್ಲೀಪ್ ಮೆಡಿಸಿನ್ ನಿಯತಕಾಲಿಕೆಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಹೆಚ್ಚು ನಿದ್ರೆ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಯ ಅಪಾಯವು ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಅಗತ್ಯಕ್ಕಿಂತ ಹೆಚ್ಚಾಗಿ ನಿದ್ರೆ ಮಾಡಬಾರದು.

ಇದನ್ನೂ ಓದಿ: ರಜಾದಿನಗಳಲ್ಲಿ ಮಕ್ಕಳು ಸಾಕಷ್ಟು ನಿದ್ರೆ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಈ ಸಲಹೆಗಳನ್ನು ಅನುಸರಿಸಿ

ಬೊಜ್ಜು ಅಥವಾ ಸ್ಥೂಲಕಾಯತೆ:

ದೀರ್ಘ ಕಾಲ ನಿದ್ದೆ ಮಾಡುವವರು ನಿದ್ರೆಯಲ್ಲಿ ಹೆಚ್ಚಿನ ಸಮಯ ಕಳೆಯುವುದರಿಂದ ಅವರು ದೈಹಿಕ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ. ಒಬ್ಬ ವ್ಯಕ್ತಿಯು ತನ್ನ ಹೆಚ್ಚಿನ ಸಮಯವನ್ನು ತಿನ್ನುವುದು, ಕುಳಿತುಕೊಳ್ಳುವುದು ಹಾಗೂ ಮಲಗುವುದರಲ್ಲಿ ಕಳೆದರೆ ಅದು ತೂಕ ಹೆಚ್ಚಾಗಲು ಅಥವಾ ಬೊಜ್ಜಿಗೆ ಕಾರಣವಾಗುತ್ತದೆ. ಅಷ್ಟೇ ಅಲ್ಲ ಇದರಿಂದ ಜೀರ್ಣಕ್ರಿಯೆಯೂ ನಿಧಾನವಾಗುತ್ತದೆ. ಮತ್ತು ವ್ಯಕ್ತಿಯು ಮಲಬದ್ಧತೆಯ ಸಮಸ್ಯೆಯನ್ನು ಎದುರಿಸಲು ಪ್ರಾರಂಭಿಸುತ್ತಾನೆ.

ಖಿನ್ನತೆ:

ಅತಿಯಾದ ನಿದ್ರೆಯೂ ಖಿನ್ನತೆಗೆ ನಿಮ್ಮ ಮನಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲ ಹೆಚ್ಚು ಹೊತ್ತು ನಿದ್ದೆ ಮಾಡುವುದರಿಂದ ವ್ಯಕ್ತಿಯಲ್ಲಿ ಆಲಸ್ಯ ಹೆಚ್ಚಾಗುತ್ತದೆ ಹಾಗೂ ಆತ ತನ್ನ ದೈನಂದಿನ ಕೆಲಸ ಕಾರ್ಯಗಳಲ್ಲಿ ಚುರುಕಾಗಿ ತೊಡಗಿಕೊಳ್ಳುವುದಿಲ್ಲ.

ತಲೆನೋವು:

ದೀರ್ಘಕಾಲ ನಿದ್ರಿಸುವುದು ಮೆದುಳಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ ನೀವು ತೀವ್ರವಾದ ತಲೆನೋವಿನ ಸಮಸ್ಯೆಯನ್ನು ಸಹ ಹೊಂದಬಹುದು. ಕೆಲವು ವಾರಾಂತ್ಯದಲ್ಲಿ ಅಥವಾ ರಜಾ ದಿನಗಳಲ್ಲಿ ಹೆಚ್ಚು ನಿದ್ರೆ ಮಾಡುತ್ತಾರೆ ಮತ್ತು ಎದ್ದ ನಂತರ ತಲೆನೋವಿನಿಂದ ತೊಂದರೆಗೊಳಗಾಗುತ್ತಾರೆ. ಸಿರೋಟಿನ್ ಸೇರಿದಂತೆ ಮೆದುಳಿನಲ್ಲಿನ ನರಪ್ರೇಕ್ಷಕಗಳ ಮೇಲೆ ಹೆಚ್ಚು ನಿದ್ರಿಸುವುದರಿಂದ ಉಂಟಾಗುವ ಪರಿಣಾಮಗಳು ಇದಕ್ಕೆ ಕಾರಣ ಎಂದು ಹೇಳಲಾಗುತ್ತದೆ.

ಎಷ್ಟು ಗಂಟೆಗಳ ಕಾಲ ನಿದ್ದೆ ಮಾಡುವುದು ಆರೋಗ್ಯಕ್ಕೆ ಉತ್ತಮ:

ನಿದ್ರೆಯ ಅಗತ್ಯತೆಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಆದರೆ ಸಾಮಾನ್ಯವಾಗಿ ಆರೋಗ್ಯವಂತ ವಯಸ್ಕರರು ಪ್ರತಿನಿತ್ಯ 7 ರಿಂದ 9 ಗಂಟೆಗಳ ಕಾಲ ನಿದ್ರಿಸಬೇಕು. ಇದರ ಹೊರತಾಗಿ ನೀವು 7 ಅಥವಾ 9 ಗಂಟೆಗಳಿಗಿಂತ ಹೆಚ್ಚು ಕಾಲ ನಿದ್ರೆ ಮಾಡಿದರೆ ಇದು ಆಧಾರವಾಗಿರುವ ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ