ಕಡಿಮೆ ನಿದ್ರೆ ಮಾಡುವುದರಿಂದ ಟೈಪ್ 2 ಡಯಾಬಿಟಿಸ್ ಅಪಾಯ ಹೆಚ್ಚಾಗುತ್ತಾ?

ನಿದ್ರೆ ನಮ್ಮ ದೇಹಕ್ಕೆ ಎಷ್ಟು ಅತ್ಯಗತ್ಯ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಸರಿಯಾಗಿ ನಿದ್ರೆ ಮಾಡದಿದ್ದರೆ ಅದು ನಮ್ಮ ದೇಹದ ಎಲ್ಲ ಅಂಗಗಳ ಕೆಲಸದ ಮೇಲೂ ಪರಿಣಾಮ ಬೀರುತ್ತದೆ. ಇದಕ್ಕೆ ಮಧುಮೇಹ ಕೂಡ ಹೊರತಾಗಿಲ್ಲ. ನಮ್ಮ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಮೇದೋಜ್ಜೀರಕ ಗ್ರಂಥಿಯಿಂದ ಬಿಡುಗಡೆ ಮಾಡುವ 'ಇನ್ಸುಲಿನ್' ಎಂಬ ಹಾರ್ಮೋನ್ ನಿಯಂತ್ರಿಸುತ್ತದೆ. ಮಧುಮೇಹ ಇರುವವರಲ್ಲಿ ಮೇದೋಜ್ಜೀರಕ ಗ್ರಂಥಿಯಿಂದ ಸ್ರವಿಸುವ ಇನ್ಸುಲಿನ್ ಸರಿಯಾದ ಪ್ರಮಾಣದಲ್ಲಿ ಇರುವುದಿಲ್ಲ. ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದನ್ನು ಮಧುಮೇಹ ಎಂದು ಪರಿಗಣಿಸಲಾಗುತ್ತದೆ.

ಕಡಿಮೆ ನಿದ್ರೆ ಮಾಡುವುದರಿಂದ ಟೈಪ್ 2 ಡಯಾಬಿಟಿಸ್ ಅಪಾಯ ಹೆಚ್ಚಾಗುತ್ತಾ?
ನಿದ್ರೆImage Credit source: iStock
Follow us
ಸುಷ್ಮಾ ಚಕ್ರೆ
|

Updated on: Mar 12, 2024 | 7:12 PM

ದಿನಕ್ಕೆ ಕೇವಲ 3ರಿಂದ 5 ಗಂಟೆಗಳ ಕಾಲ ನಿದ್ರೆ ಮಾಡುವುದರಿಂದ ವಯಸ್ಕರಲ್ಲಿ ಟೈಪ್ 2 ಮಧುಮೇಹದ ಅಪಾಯ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಎಂದು ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾನಿಲಯದ ಇತ್ತೀಚಿನ ಅಧ್ಯಯನ ಹೇಳಿದೆ. ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸುವುದರಿಂದ ನಿರಂತರ ನಿದ್ರಾಹೀನತೆಗೆ ಸಂಬಂಧಿಸಿದ ಅಪಾಯಗಳನ್ನು ಕಡಿಮೆ ಮಾಡಬಹುದು ಎಂದು ಸಂಶೋಧನೆಯು ಒತ್ತಿಹೇಳಿದೆ.

ಉಪ್ಸಲಾ ವಿಶ್ವವಿದ್ಯಾನಿಲಯದ ಪ್ರಮುಖ ಸಂಶೋಧಕ ಮತ್ತು ಸಹಾಯಕ ಪ್ರಾಧ್ಯಾಪಕ ಕ್ರಿಶ್ಚಿಯನ್ ಬೆನೆಡಿಕ್ಟ್, ಜನರು ಸಾಕಷ್ಟು ನಿದ್ರೆ ಮಾಡಬೇಕೆಂದು ಸೂಚಿಸಿದ್ದಾರೆ. ವಿಶೇಷವಾಗಿ ಇಡೀ ದಿನ ಕೆಲಸ ಮಾಡುವವರು ನಿದ್ರೆಗೆ ಆದ್ಯತೆ ನೀಡಬೇಕು. ಜಾಗೃತಿ ಮತ್ತು ಜೀವನಶೈಲಿಯ ಹೊಂದಾಣಿಕೆಯ ಅಗತ್ಯವೂ ಮುಖ್ಯವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Snoring: ಸಂಗಾತಿಯ ಗೊರಕೆಯಿಂದ ನಿದ್ರೆ ಮಾಡಲು ಆಗುತ್ತಿಲ್ಲವೇ? ಹೀಗೆ ಮಾಡಿ

ಸಾಕಷ್ಟು ನಿದ್ರೆ ಮತ್ತು ಟೈಪ್ 2 ಡಯಾಬಿಟಿಸ್ ನಡುವಿನ ಸಂಬಂಧವನ್ನು ಪರೀಕ್ಷಿಸುವುದು, ದೇಹದ ಸಕ್ಕರೆ ಸಂಸ್ಕರಣಾ ಸಾಮರ್ಥ್ಯದ ಮೇಲೆ ಪರಿಣಾಮ ಬೀರುವ ಸಮಸ್ಯೆ ರಕ್ತದಲ್ಲಿನ ಸಕ್ಕರೆ ಮಟ್ಟಗಳು ಮತ್ತು ದೀರ್ಘಕಾಲೀನ ಆರೋಗ್ಯ ತೊಡಕುಗಳಿಗೆ ಕಾರಣವಾಗುತ್ತದೆ. ಇದು ಅಧ್ಯಯನದ ಕೇಂದ್ರಬಿಂದುವಾಗಿದೆ. ವಿಶ್ವಾದ್ಯಂತ 462 ಮಿಲಿಯನ್ ವ್ಯಕ್ತಿಗಳ ಮೇಲೆ ಪರಿಣಾಮ ಬೀರುವ ಟೈಪ್ 2 ಡಯಾಬಿಟಿಸ್‌ನಿಂದ ಜಾಗತಿಕ ಆರೋಗ್ಯ ಸವಾಲನ್ನು ಸಂಶೋಧನೆಯು ಒತ್ತಿಹೇಳಿದೆ.

ಮೊದಲಿನ ಸಂಶೋಧನೆಯು ಮಧುಮೇಹದ ಹೆಚ್ಚಿನ ಅಪಾಯದೊಂದಿಗೆ ಕಡಿಮೆ ದೈನಂದಿನ ನಿದ್ರೆಯ ಅವಧಿ ಪರಸ್ಪರ ಸಂಬಂಧ ಹೊಂದಿದೆ ಎಂದು ಹೇಳಿತ್ತು. ವಿಶ್ವದ ಅತ್ಯಂತ ವ್ಯಾಪಕವಾದ ಜನಸಂಖ್ಯೆಯ ಡೇಟಾಬೇಸ್‌ಗಳಲ್ಲಿ ಒಂದಾದ UK ಬಯೋಬ್ಯಾಂಕ್‌ನಿಂದ ಡೇಟಾವನ್ನು ಪರೀಕ್ಷಿಸಿ, ಸಂಶೋಧಕರು ಒಂದು ದಶಕದಿಂದ ಸುಮಾರು ಅರ್ಧ ಮಿಲಿಯನ್ ಭಾಗವಹಿಸುವವರ ಆರೋಗ್ಯವನ್ನು ಟ್ರ್ಯಾಕ್ ಮಾಡಿದ್ದಾರೆ.

ಇದನ್ನೂ ಓದಿ: Insomnia: ರಾತ್ರಿ ಸುಖವಾದ ನಿದ್ರೆ ಬರಲು ಏನು ಮಾಡಬೇಕು?

ಪ್ರತಿ ರಾತ್ರಿ 3ರಿಂದ 5 ಗಂಟೆಗಳ ಕಾಲ ಮಲಗುವ ವ್ಯಕ್ತಿಗಳು ಟೈಪ್ 2 ಮಧುಮೇಹವನ್ನು ಅಭಿವೃದ್ಧಿಪಡಿಸುವ ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆ ಎಂದು ಅಧ್ಯಯನ ತಿಳಿಸಿದೆ. ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸುವುದು ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. ಆರೋಗ್ಯಕರ ಆಹಾರದೊಂದಿಗೆ, ದಿನಕ್ಕೆ 6 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವ ವ್ಯಕ್ತಿಗಳು ಇನ್ನೂ ಟೈಪ್ 2 ಮಧುಮೇಹದ ಅಪಾಯವನ್ನು ಎದುರಿಸುತ್ತಾರೆ ಎಂದು ಹೇಳಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ