AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡದಿಂದಲೇ ಕೂದಲು ಬೇಗ ಬಿಳಿಯಾಗುತ್ತದೆಯೇ? ತಜ್ಞರು ಹೇಳಿರುವ ಸತ್ಯ ಇಲ್ಲಿದೆ!

ಇತ್ತೀಚಿನ ದಿನಗಳಲ್ಲಿ ಕಡಿಮೆ ವಯಸ್ಸಿನಲ್ಲೇ ಕೂದಲು ಬಿಳಿಯಾಗುವ ಸಮಸ್ಯೆ ಹೆಚ್ಚುತ್ತಿದೆ. ಇದಕ್ಕೆ ಕೇವಲ ವಯಸ್ಸು ಮಾತ್ರವಲ್ಲ, ಮಾನಸಿಕ ಒತ್ತಡವೂ ಕಾರಣವಾಗಿರಬಹುದು ಎಂದು ಕೆಲವು ಅಧ್ಯಯನಗಳಿಂದ ತಿಳಿದು ಬಂದಿದೆ. ದೀರ್ಘಕಾಲದ ಒತ್ತಡವು ಕೂದಲಿಗೆ ಬಣ್ಣ ನೀಡುವ ಮೆಲನಿನ್ ಉತ್ಪಾದನೆಗೆ ಪರಿಣಾಮ ಬೀರಿ ಅಕಾಲಿಕವಾಗಿ ಕೂದಲು ಬಿಳಿಯಾಗುವ ಸಾಧ್ಯತೆಯನ್ನು ಹೆಚ್ಚಿಸಬಹುದು. ಆದರೆ ಇದಕ್ಕೆ ಇದೊಂದೇ ಕಾರಣವೇ ಅಥವಾ ಇದಕ್ಕೆ ಬೇರೆ ಕಾರಣಗಳೂ ಇವೆಯೇ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಒತ್ತಡದಿಂದಲೇ ಕೂದಲು ಬೇಗ ಬಿಳಿಯಾಗುತ್ತದೆಯೇ? ತಜ್ಞರು ಹೇಳಿರುವ ಸತ್ಯ ಇಲ್ಲಿದೆ!
Premature Gray HairImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 26, 2026 | 8:39 PM

Share

ಮುಖ್ಯಾಂಶಗಳು

  • ಒತ್ತಡದಿಂದ ಕೂದಲು ಬೇಗ ಬಿಳಿಯಾಗುವ ಸಾಧ್ಯತೆ ಹೆಚ್ಚಾಗಬಹುದು
  • ಜೆನೆಟಿಕ್ಸ್, ವಿಟಮಿನ್ ಕೊರತೆಯೂ ಪ್ರಮುಖ ಕಾರಣಗಳು
  • ಕೂದಲಿನ ಆರೋಗ್ಯ ಕಾಪಾಡಲು ಸಲಹೆಗಳು

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿಗೆ ಕೂದಲು ಬಿಳಿಯಾಗುವುದು (Premature Gray Hair) ಸಾಮಾನ್ಯ ಸಮಸ್ಯೆಯಾಗಿದೆ. ಇದನ್ನು ಕೇವಲ ವಯಸ್ಸಿನ ಪ್ರಭಾವ ಎಂದು ಭಾವಿಸುವುದು ಸರಿಯಲ್ಲ. ಒತ್ತಡ, ಪೌಷ್ಟಿಕಾಂಶದ ಕೊರತೆ, ಅನುವಂಶೀಯ ಕಾರಣಗಳು ಸೇರಿದಂತೆ ಹಲವು ಅಂಶಗಳು ಇದಕ್ಕೆ ಕಾರಣವಾಗಬಹುದು. ಹಾಗಾದರೆ ಮಾನಸಿಕ ಒತ್ತಡದಿಂದ (Stress) ನಿಜವಾಗಿಯೂ ಕೂದಲು ಬೇಗ ಬಿಳಿಯಾಗುತ್ತದೆಯೇ, ಇದರ ಹೊರತಾಗಿ ಕೂದಲು ಬಿಳಿಯಾಗುವುದಕ್ಕೆ ಕಾರಣಗಳೇನು ಮತ್ತು ಯಾವಾಗ ವೈದ್ಯರ ಸಲಹೆ ತೆಗೆದುಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಒತ್ತಡದ ನಿಜವಾಗಿಯೂ ಕೂದಲನ್ನು ಬಿಳಿಯಾಗಿಸುತ್ತದೆಯೇ?

ಕೆಲವು ಅಧ್ಯಯನಗಳ ಪ್ರಕಾರ, ನಿರಂತರ ಮಾನಸಿಕ ಒತ್ತಡವು ಕೂದಲಿಗೆ ಬಣ್ಣ ನೀಡುವ ಮೆಲನೋಸೈಟ್ ಕೋಶಗಳ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಮೆಲನಿನ್ ಉತ್ಪಾದನೆ ಕಡಿಮೆಯಾಗಿ ಕೂದಲು ಅಕಾಲಿಕವಾಗಿ ಬಿಳಿಯಾಗುವ ಸಾಧ್ಯತೆ ಹೆಚ್ಚಾಗಬಹುದು. ಆದರೆ ಎಲ್ಲರಲ್ಲೂ ಒತ್ತಡ ಒಂದೇ ಕಾರಣ ಎಂದು ಹೇಳಲಾಗುವುದಿಲ್ಲ.

ಕೂದಲು ಬೇಗ ಬಿಳಿಯಾಗುವುದಕ್ಕೆ ಮೊತ್ತೊಂದಿಷ್ಟು ಕಾರಣಗಳು;

  • ಅನುವಂಶೀಯ (ಜೆನೆಟಿಕ್) ಕಾರಣಗಳು
  • ವಿಟಮಿನ್ ಬಿ12, ಕಬ್ಬಿಣ, ಫೋಲೇಟ್ ಕೊರತೆ
  • ಥೈರಾಯ್ಡ್ ಸಮಸ್ಯೆಗಳು
  • ಕೆಲವು ಆಟೋಇಮ್ಯೂನ್ ಕಾಯಿಲೆಗಳು
  • ಧೂಮಪಾನ ಮತ್ತು ಅನಾರೋಗ್ಯಕರ ಜೀವನಶೈಲಿ

ಇದನ್ನೂ ಓದಿ: ಪದೇ ಪದೇ ತಲೆಸುತ್ತು ಬರುತ್ತಿದೆಯೇ? ಇದು ವಿಟಮಿನ್ ಕೊರತೆಯ ಲಕ್ಷಣವಾಗಿರಬಹುದು!

ಕೂದಲ ಆರೋಗ್ಯ ಕಾಪಾಡುವುದು ಹೇಗೆ?

ಸಾಮಾನ್ಯವಾಗಿ ಕೂದಲು ಆರೋಗ್ಯವಾಗಿರಲು ಸಮತೋಲಿತ ಆಹಾರ ಸೇವಿಸಿ. ಹಸಿರು ತರಕಾರಿ, ಹಣ್ಣು, ಪ್ರೋಟೀನ್ ಹಾಗೂ ಅಗತ್ಯ ವಿಟಮಿನ್‌ಗಳಿರುವ ಆಹಾರವನ್ನು ಸೇರಿಸಿಕೊಳ್ಳಿ. ಪ್ರತಿದಿನ ಸಮರ್ಪಕ ನಿದ್ರೆ ಪಡೆಯಿರಿ. ಯೋಗ, ಧ್ಯಾನ ಹಾಗೂ ನಿಯಮಿತ ವ್ಯಾಯಾಮದ ಮೂಲಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಧೂಮಪಾನದಿಂದ ದೂರವಿರಿ ಮತ್ತು ಕೂದಲಿಗೆ ಅತಿಯಾದ ರಾಸಾಯನಿಕ ಉತ್ಪನ್ನಗಳನ್ನು ಬಳಸುವುದನ್ನು ತಪ್ಪಿಸಿ.

ಕಡಿಮೆ ವಯಸ್ಸಿನಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಕೂದಲು ಬಿಳಿಯಾಗುತ್ತಿದ್ದರೆ ಅಥವಾ ಕೂದಲು ಉದುರುವುದು, ಆಯಾಸ, ಇತರ ಆರೋಗ್ಯ ಸಮಸ್ಯೆಗಳೂ ಕಾಣಿಸುತ್ತಿದ್ದರೆ ವೈದ್ಯರನ್ನು ಸಂಪರ್ಕಿಸಿ ಅಗತ್ಯ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ಗಮನಿಸಿ: ಈ ಲೇಖನವು ಸಾಮಾನ್ಯ ಆರೋಗ್ಯ ಮಾಹಿತಿಗಾಗಿ ಮಾತ್ರ. ನಿರಂತರವಾಗಿ ಕೂದಲು ಬಿಳಿಯಾಗುತ್ತಿದ್ದರೆ ಅಥವಾ ಇತರ ಲಕ್ಷಣಗಳು ಕಂಡುಬಂದರೆ ವೈದ್ಯರ ಸಲಹೆ ಪಡೆಯಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್