ಸಕ್ಕರೆ ಕಾಯಿಲೆ ಇರುವವರು ತೊಂಡೆಕಾಯಿ ತಿನ್ನಬಹುದೇ, ತಜ್ಞರು ನೀಡಿದ ಮಾಹಿತಿ ಇಲ್ಲಿದೆ

ತೊಂಡೆಕಾಯಿ ತಿಂದರೆ ಮರೆಗುಳಿತನ ಬರುತ್ತದೆ ಎಂಬ ಮೂಢನಂಬಿಕೆಯಿದೆ. ಆ ಕಾರಣದಿಂದಾಗಿ ಹೆಚ್ಚಿನವರು ಈ ತರಕಾರಿಯನ್ನು ಸೇವನೆ ಮಾಡುವುದಿಲ್ಲ. ಆದರೆ ತೊಂಡೆಕಾಯಿಯನ್ನು ಜೀರ್ಣಕಾರಿ ಮತ್ತು ಮೆದುಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿರುವವರು ತಿನ್ನಬಾರದು ಎಂದು ತಜ್ಞರು ಹೇಳುತ್ತಾರೆ. ತೊಂಡೆಕಾಯಿ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಮಾತ್ರವಲ್ಲ ಈ ಸಸ್ಯದ ಎಲೆ ಮತ್ತು ಬೇರುಗಳಲ್ಲಿಯೂ ಅನೇಕ ರೀತಿಯ ಔಷಧೀಯ ಗುಣಗಳು ಕಂಡುಬರುತ್ತವೆ. ಆದರೆ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಜೊತೆಗೆ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳಿರುವವರು ತೊಂಡೆಕಾಯಿಯನ್ನು ತಿನ್ನಬಹುದೇ? ತಿಂದರೆ ಏನಾಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಕ್ಕರೆ ಕಾಯಿಲೆ ಇರುವವರು ತೊಂಡೆಕಾಯಿ ತಿನ್ನಬಹುದೇ, ತಜ್ಞರು ನೀಡಿದ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 23, 2024 | 5:15 PM

ತೊಂಡೆಕಾಯಿ ಇಷ್ಟಪಡುವವರಿದ್ದಾರೆ. ಅನೇಕರಿಗೆ ಈ ತರಕಾರಿ ಅಷ್ಟಕ್ಕೇ ಅಷ್ಟೇ ಆದರೂ ಇದರ ಪ್ರಯೋಜನಗಳನ್ನು ತಿಳಿದರೆ ಯಾರೂ ಇದನ್ನು ತಿನ್ನದೆ ಇರಲಾರರು. ಇವು ದೇಹದ ಆರೋಗ್ಯಕ್ಕೆ ಅಗತ್ಯವಿರುವ ಕೆಲವು ಪೋಷಕಾಂಶಗಳನ್ನು ಹೇರಳವಾಗಿ ನೀಡುತ್ತದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವ ಮೂಲಕ ಅನೇಕ ರೀತಿಯ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಬಹುದು. ಆದರೆ ಕೆಲವರಲ್ಲಿ, ತೊಂಡೆಕಾಯಿ ತಿಂದರೆ ಮರೆಗುಳಿತನ ಬರುತ್ತದೆ ಎಂಬ ಮೂಢನಂಬಿಕೆಯಿದೆ. ಆ ಕಾರಣದಿಂದಾಗಿ ಹೆಚ್ಚಿನವರು ಈ ತರಕಾರಿಯನ್ನು ಸೇವನೆ ಮಾಡುವುದಿಲ್ಲ. ಆದರೆ ತೊಂಡೆಕಾಯಿಯನ್ನು ಜೀರ್ಣಕಾರಿ ಮತ್ತು ಮೆದುಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿರುವವರು ತಿನ್ನಬಾರದು ಎಂದು ತಜ್ಞರು ಹೇಳುತ್ತಾರೆ. ತೊಂಡೆಕಾಯಿ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಮಾತ್ರವಲ್ಲ ಈ ಸಸ್ಯದ ಎಲೆ ಮತ್ತು ಬೇರುಗಳಲ್ಲಿಯೂ ಅನೇಕ ರೀತಿಯ ಔಷಧೀಯ ಗುಣಗಳು ಕಂಡುಬರುತ್ತವೆ. ಆದರೆ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಜೊತೆಗೆ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳಿರುವವರು ತೊಂಡೆಕಾಯಿಯನ್ನು ತಿನ್ನಬಹುದೇ? ತಿಂದರೆ ಏನಾಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಕ್ಕರೆ ಕಾಯಿಲೆ ಇರುವವರು ಇದನ್ನು ತಿನ್ನಬಹುದೇ?

ಪ್ರಸ್ತುತ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು ಆದರೆ ಅದನ್ನು ಪೂರ್ತಿಯಾಗಿ ಗುಣಪಡಿಸಲು ಸಾಧ್ಯವಿಲ್ಲ. ಆದ್ದರಿಂದ ವಿವಿಧ ರೀತಿಯ ಆಹಾರಗಳನ್ನು ಸೇವನೆ ಮಾಡುವ ಮೂಲಕ, ನೀವು ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಇದು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಅಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗದಂತೆ ತಡೆಯುತ್ತದೆ. ಮಧುಮೇಹದಿಂದ ಬಳಲುತ್ತಿರುವವರು ಹೆಚ್ಚಾಗಿ ತೊಂಡೆಕಾಯಿಯನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ. ನೀವು ತೊಂಡೆಕಾಯಿ ರಸವನ್ನು ಸಹ ಕುಡಿಯಬಹುದು. ಅಲ್ಲದೆ ಇದರ ಎಲೆಗಳ ರಸವನ್ನು ತೆಗೆದುಕೊಂಡರೂ ಮಧುಮೇಹವನ್ನು ನಿಯಂತ್ರಿಸಬಹುದು.

ಇದನ್ನೂ ಓದಿ: ನಿಮ್ಮ ಮನೆಯಲ್ಲಿ ಈ ಸಸ್ಯವಿದ್ದರೆ ಸಕ್ಕರೆ ಕಾಯಿಲೆ, ಕೀಲು ನೋವು ಹತ್ತಿರವೂ ಸುಳಿಯುವುದಿಲ್ಲ

ಇನ್ನೂ ಅನೇಕ ಪ್ರಯೋಜನಗಳು;

ನಿಯಮಿತವಾಗಿ ತೊಂಡೆಕಾಯಿ ಸೇವನೆ ಮಾಡುವುದರಿಂದ ಇನ್ನೂ ಅನೇಕ ರೀತಿಯ ಪ್ರಯೋಜನಗಳಿವೆ. ಈ ತರಕಾರಿಯ ಎಲೆಗಳಿಂದ ಮಾಡಿದ ಕಷಾಯವನ್ನು ಕುಡಿಯುವುದರಿಂದ ಜ್ವರ, ಕಾಮಾಲೆ ಮತ್ತು ಕ್ಯಾನ್ಸರ್ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಎಲೆಗಳನ್ನು ಉಂಡೆಯನ್ನಾಗಿ ಮಾಡಿ ಬಳಸುವುದರಿಂದ ಚರ್ಮದ ಸಮಸ್ಯೆಗಳನ್ನು ಗುಣಪಡಿಸಬಹುದು. ನೀವು ಎಲೆ ಮತ್ತು ಕಾಂಡ ತೆಗೆದುಕೊಂಡು ಅದರ ಕಷಾಯವನ್ನು ಕುಡಿದರೆ, ಇದು ಕೆಮ್ಮು ಮತ್ತು ಅಸ್ತಮಾವನ್ನು ಸಹ ನಿವಾರಿಸುತ್ತದೆ. ಹೊಟ್ಟೆಯಲ್ಲಿರುವ ಹುಳುಗಳನ್ನು ಕೂಡ ಹೊರಗೆ ಹಾಕುತ್ತದೆ.

ಸೂಚನೆ: ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಮಾತ್ರ. ಯಾವುದೇ ಮಾಹಿತಿಯನ್ನು ಅನುಸರಿಸುವ ಮೊದಲು ತಜ್ಞರನ್ನು ಸಂಪರ್ಕಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು