Cancer: ಯುವಜನರಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿ ಕಂಡು ಬರಲು ಕಾರಣವೇನು? ಇದಕ್ಕೆ ಪರಿಹಾರವೇನು?

 ನಮ್ಮ ದೇಶದಲ್ಲಿ ಯುವಜನತೆಯ ಮೇಲೆ ಕ್ಯಾನ್ಸರ್ ಪ್ರಭಾವ ಹೆಚ್ಚಾಗುತ್ತಿದೆ ಎಂದು ಅನೇಕ ಅಧ್ಯಯನಗಳಿಂದ ತಿಳಿದು ಬಂದಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ ಭಾರತದಲ್ಲಿ ಸ್ತನ ಕ್ಯಾನ್ಸರ್, ಜೊತೆಗೆ ವಿವಿಧ ರೀತಿಯ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ. ಕೇವಲ 30 ವರ್ಷಗಳಲ್ಲಿ, ವಿಶ್ವಾದ್ಯಂತ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೊಸ ಕ್ಯಾನ್ಸರ್ ಪ್ರಕರಣಗಳು ಶೇಕಡಾ 79 ರಷ್ಟು ಹೆಚ್ಚಾಗಿದೆ ಎಂದು ಈ ಅಧ್ಯಯನದಿಂದ ತಿಳಿದು ಬಂದಿದೆ.

Cancer: ಯುವಜನರಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿ ಕಂಡು ಬರಲು ಕಾರಣವೇನು? ಇದಕ್ಕೆ ಪರಿಹಾರವೇನು?
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 19, 2024 | 5:33 PM

ಕ್ಯಾನ್ಸರ್ ಒಂದು ಅಪಾಯಕಾರಿ ಕಾಯಿಲೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದಕ್ಕೂ ಮಿಗಿಲಾಗಿ ಸರಿಯಾದ ಸಮಯದಲ್ಲಿ ಪತ್ತೆಯಾಗದಿದ್ದರೆ ಚಿಕಿತ್ಸೆ ನೀಡುವುದು ಕೂಡ ಕಷ್ಟ. ಮೊದಲು ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದ ಈ ರೋಗವು ಈಗ ಯುವಜನತೆಯ ಮೇಲೂ ಪರಿಣಾಮ ಬೀರುತ್ತಿದೆ. ಹಾಗಾಗಿ ಈಗಿನಿಂದಲೇ ಇದನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಏಕೆಂದರೆ ನಮ್ಮ ದೇಶದಲ್ಲಿ ಯುವಜನತೆಯ ಮೇಲೆ ಕ್ಯಾನ್ಸರ್ ಪ್ರಭಾವ ಹೆಚ್ಚಾಗುತ್ತಿದೆ ಎಂದು ಅನೇಕ ಅಧ್ಯಯನಗಳಿಂದ ತಿಳಿದು ಬಂದಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ ಭಾರತದಲ್ಲಿ ಸ್ತನ ಕ್ಯಾನ್ಸರ್, ಜೊತೆಗೆ ವಿವಿಧ ರೀತಿಯ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ. ಕೇವಲ 30 ವರ್ಷಗಳಲ್ಲಿ, ವಿಶ್ವಾದ್ಯಂತ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೊಸ ಕ್ಯಾನ್ಸರ್ ಪ್ರಕರಣಗಳು ಶೇಕಡಾ 79 ರಷ್ಟು ಹೆಚ್ಚಾಗಿದೆ ಎಂದು ಈ ಅಧ್ಯಯನದಿಂದ ತಿಳಿದು ಬಂದಿದೆ.

ಯುವಜನತೆಯಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಲು ಕಾರಣವೇನು?

ಜೀವನಶೈಲಿ: ಯುವ ಜನತೆಯಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರಲು ಮುಖ್ಯ ಕಾರಣವೆಂದರೆ ಅದು, ಆಧುನಿಕ ಜೀವನಶೈಲಿ. ಬೊಜ್ಜು ಯುವಕರಲ್ಲಿ ಹೆಚ್ಚುತ್ತಿದ್ದು ಇದು 15 ವಿಧದ ರೀತಿಯ ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಜೊತೆಗೆ ಧೂಮಪಾನ ಮತ್ತು ಅತಿಯಾದ ಮದ್ಯಪಾನವು ಕೂಡ ಕ್ಯಾನ್ಸರ್ ಗೆ ಕಾರಣವಾಗುತ್ತದೆ.

ಆನುವಂಶಿಕ ಅಂಶಗಳು: ಕುಟುಂಬದಲ್ಲಿ ಯಾರಿಗಾದರೂ ಕ್ಯಾನ್ಸರ್ ಇದ್ದರೆ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು. ಆನುವಂಶಿಕತೆ 5-10% ಕ್ಯಾನ್ಸರ್ ಗೆ ಮುಖ್ಯ ಕಾರಣವಾಗಿದೆ.

ಆಹಾರದಲ್ಲಿ ಪೌಷ್ಠಿಕಾಂಶದ ಕೊರತೆ: ಇತ್ತೀಚಿನ ದಿನಗಳಲ್ಲಿ ಯುವ ಜನತೆ ಪೋಷಕಾಂಶಗಳ ಕೊರತೆಯಿರುವ ಸಂಸ್ಕರಿಸಿದ ಆಹಾರವನ್ನು ಸೇವಿಸುತ್ತಾರೆ. ದೇಹದಲ್ಲಿ ಪೋಷಕಾಂಶಗಳ ಕೊರತೆಯಾದರೆ ಅದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ಅಲ್ಕಾ ಯಾಗ್ನಿಕ್​ಗೆ ಕಿವಿ ಕೇಳದಿರಲು ಈ ಸೋಂಕು ಕಾರಣ, ಇದು ಬರದಂತೆ ಈ ರೀತಿ ಎಚ್ಚರಿಕೆ ವಹಿಸಿ

ಈ ಬಗ್ಗೆ ಅಪೊಲೊ ಆಸ್ಪತ್ರೆಯ ಡಾ. ಪಾಖಿ ಅಗರ್ವಾಲ್ ಅವರು ಹೇಳುವ ಪ್ರಕಾರ, ಯುವಜನರಲ್ಲಿ ಕ್ಯಾನ್ಸರ್ ಹೆಚ್ಚು ಆಕ್ರಮಣಕಾರಿಯಾಗಿದ್ದು ಅದಕ್ಕೆ ಚಿಕಿತ್ಸೆ ನೀಡುವುದು ದೊಡ್ಡ ಸವಾಲಾಗಿದೆ. ಹಾಗಾಗಿಯೇ ನಿಮ್ಮ ಆಹಾರ ಸೇವನೆಯ ಮೇಲೆ ಹೆಚ್ಚಿನ ಗಮನ ಹರಿಸಬೇಕು. ಏಕೆಂದರೆ ಇವು ನಿಮ್ಮನ್ನು ಹಲವು ರೋಗಗಳಿಂದ ರಕ್ಷಿಸುತ್ತದೆ ಎಂದು ಹೇಳಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಸಂಸ್ಕರಿಸಿದ ಆಹಾರ ಮತ್ತು ಕೆಂಪು ಮಾಂಸದ ಸೇವನೆಯು ಕರುಳಿನ ಕ್ಯಾನ್ಸರ್ ನ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಸಾಕಷ್ಟು ಪ್ರಮಾಣದಲ್ಲಿ ಹಣ್ಣು, ತರಕಾರಿ, ಧಾನ್ಯ ಮತ್ತು ಪ್ರೋಟೀನ್ ಗಳನ್ನು ಸೇವಿಸಿ. ಅಲ್ಲದೆ, ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಿ. ನಿಯಮಿತವಾಗಿ ವ್ಯಾಯಾಮ ಮಾಡಿ. ಧೂಮಪಾನ, ಮದ್ಯಪಾನದಿಂದ ದೂರವಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ