AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿನ ಬೆಲೆ ಹೆಚ್ಚಾಗಿದೆಯೇ? ಕ್ಯಾಲ್ಸಿಯಂ ಮತ್ತು ಪ್ರೋಟೀನ್‌ಗಾಗಿ ಈ ಆಹಾರಗಳನ್ನು ಸೇವಿಸಿ

ಹಾಲಿನ ಬೆಲೆ ಹೆಚ್ಚಾಗುತ್ತಿರುವುದರಿಂದ ಪ್ರತಿದಿನ ಹಾಲು ಕುಡಿಯಲು ಸಾಧ್ಯವಾಗುತ್ತಿಲ್ಲವೇ? ಚಿಂತಿಸಬೇಡಿ. ಮೊಸರು, ಸೋಯಾಬೀನ್, ಕಡಲೆ, ಬೇಳೆಕಾಳುಗಳು, ಶೇಂಗಾ, ಎಳ್ಳು ಮತ್ತು ರಾಗಿಯಂತಹ ಆಹಾರಗಳಿಂದಲೂ ಕ್ಯಾಲ್ಸಿಯಂ ಹಾಗೂ ಪ್ರೋಟೀನ್ ಪಡೆಯಬಹುದು. ಇವುಗಳನ್ನು ಸಮತೋಲಿತ ಆಹಾರದ ಭಾಗವಾಗಿ ಸೇವಿಸುವುದರಿಂದ ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತದೆ.

ಹಾಲಿನ ಬೆಲೆ ಹೆಚ್ಚಾಗಿದೆಯೇ? ಕ್ಯಾಲ್ಸಿಯಂ ಮತ್ತು ಪ್ರೋಟೀನ್‌ಗಾಗಿ ಈ ಆಹಾರಗಳನ್ನು ಸೇವಿಸಿ
Calcium Rich FoodsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Nov 12, 2026 | 7:35 PM

Share

ಹಾಲು ದೇಹಕ್ಕೆ ಅಗತ್ಯವಾದ ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಒದಗಿಸುವ ಪ್ರಮುಖ ಆಹಾರವಾಗಿದೆ. ಮೂಳೆಗಳು ಮತ್ತು ಹಲ್ಲುಗಳ ಆರೋಗ್ಯ ಕಾಪಾಡಲು ಕ್ಯಾಲ್ಸಿಯಂ ಸಹಾಯ ಮಾಡಿದರೆ, ಸ್ನಾಯುಗಳ ಬೆಳವಣಿಗೆ ಮತ್ತು ದೇಹದ ಅಂಗಾಂಶಗಳ ದುರಸ್ತಿಗೆ ಪ್ರೋಟೀನ್ ಅಗತ್ಯ. ಆದರೆ ಹಾಲಿನ ಬೆಲೆ ಹೆಚ್ಚುತ್ತಿರುವುದರಿಂದ ಪ್ರತಿದಿನ ಹಾಲು ಖರೀದಿಸುವುದು ಕೆಲವರಿಗೆ ಕಷ್ಟವಾಗಬಹುದು. ಇಂತಹ ಸಂದರ್ಭದಲ್ಲಿ ಹಾಲಿನ ಜೊತೆಗೆ ಅಥವಾ ಅದರ ಬದಲಾಗಿ ಕೆಲವು ಕಡಿಮೆ ಬೆಲೆಯ ಆಹಾರಗಳನ್ನು ಸೇವಿಸುವ ಮೂಲಕ ಪೋಷಕಾಂಶಗಳ ಅಗತ್ಯವನ್ನು ಪೂರೈಸಿಕೊಳ್ಳಬಹುದು.

ಮೊಸರು ಮತ್ತು ಸೋಯಾಬೀನ್‌ನಿಂದ ಪೋಷಕಾಂಶ

ಸಾಮಾನ್ಯವಾಗಿ ಮೊಸರು ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಎರಡನ್ನೂ ಒದಗಿಸುವ ಉತ್ತಮ ಆಹಾರವಾಗಿದೆ. ಮಧ್ಯಾಹ್ನದ ಊಟದೊಂದಿಗೆ ಮೊಸರು ಅಥವಾ ಮಜ್ಜಿಗೆಯನ್ನು ಸೇವಿಸಬಹುದು. ಕೆಲವರಿಗೆ ಹಾಲಿಗಿಂತ ಮೊಸರು ಸುಲಭವಾಗಿ ಜೀರ್ಣವಾಗಬಹುದು. ಸೋಯಾಬೀನ್‌ನಲ್ಲಿ ಉತ್ತಮ ಪ್ರಮಾಣದ ಪ್ರೋಟೀನ್ ಇರುತ್ತದೆ. ಇದನ್ನು ನೆನೆಸಿ ಬೇಯಿಸಿ, ಪಲ್ಯ ಅಥವಾ ಸಾಂಬಾರ್ ರೂಪದಲ್ಲಿ ಸೇವಿಸಬಹುದು. ಸೋಯಾ ಹಾಲು ಕೂಡ ಹಾಲಿಗೆ ಪರ್ಯಾಯವಾಗಬಹುದು. ಖರೀದಿಸುವಾಗ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಸೇರಿಸಿರುವ ಸೋಯಾ ಹಾಲಿಗೆ ಆದ್ಯತೆ ನೀಡಬಹುದು.

ಕಡಲೆ, ಬೇಳೆ ಮತ್ತು ಶೇಂಗಾದಿಂದ ಪ್ರೋಟೀನ್

ಕಪ್ಪು ಕಡಲೆ, ಹೆಸರುಬೇಳೆ, ಮಸೂರ ಬೇಳೆ ಮತ್ತು ತೊಗರಿಬೇಳೆ ಪ್ರೋಟೀನ್‌ನ ಉತ್ತಮ ಮೂಲಗಳಾಗಿವೆ. ಇವುಗಳನ್ನು ಪ್ರತಿದಿನದ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಕಪ್ಪು ಕಡಲೆಯನ್ನು ನೆನೆಸಿ ಬೇಯಿಸಿ ತಿನ್ನುವುದು ಉತ್ತಮ ಆಯ್ಕೆ. ಶೇಂಗಾ ಕೂಡ ಕಡಿಮೆ ಬೆಲೆಯಲ್ಲಿ ದೊರೆಯುವ ಪೌಷ್ಟಿಕ ಆಹಾರ. ಇದರಲ್ಲಿ ಪ್ರೋಟೀನ್ ಜೊತೆಗೆ ಆರೋಗ್ಯಕರ ಕೊಬ್ಬುಗಳೂ ಇರುತ್ತವೆ. ಹುರಿದ ಶೇಂಗಾ ಅಥವಾ ಶೇಂಗಾ ಚಟ್ನಿ ರೂಪದಲ್ಲಿ ಸೇವಿಸಬಹುದು.

ಇದನ್ನೂ ಓದಿ: ಪ್ರತಿದಿನ ಸೋಂಪು ನೀರು ಕುಡಿದರೆ ಏನಾಗುತ್ತದೆ? ಜೀರ್ಣಕ್ರಿಯೆಯಿಂದ ಚರ್ಮದ ಆರೋಗ್ಯದವರೆಗೆ ಪ್ರಯೋಜನಗಳು

ಕ್ಯಾಲ್ಸಿಯಂಗೆ ಎಳ್ಳು ಮತ್ತು ರಾಗಿ

ಎಳ್ಳಿನಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದ್ದು, ಚಟ್ನಿ, ಉಂಡೆ ಅಥವಾ ಅಡುಗೆಗಳಲ್ಲಿ ಸೇರಿಸಿಕೊಳ್ಳಬಹುದು. ರಾಗಿಯೂ ಕ್ಯಾಲ್ಸಿಯಂ ಒದಗಿಸುವ ಉತ್ತಮ ಧಾನ್ಯವಾಗಿದೆ. ರಾಗಿ ಮುದ್ದೆ, ರೊಟ್ಟಿ, ದೋಸೆ ಅಥವಾ ರಾಗಿ ಗಂಜಿ ರೂಪದಲ್ಲಿ ಸೇವಿಸಬಹುದು.

ವಿಟಮಿನ್ ಡಿ ಕೂಡ ಮುಖ್ಯ

ಹಾಲು ಕುಡಿಯದಿದ್ದರೂ ಸಮತೋಲಿತ ಆಹಾರದಿಂದ ದೇಹಕ್ಕೆ ಬೇಕಾದ ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಪಡೆಯಬಹುದು. ಮೊಸರು, ಸೋಯಾಬೀನ್, ಬೇಳೆಕಾಳುಗಳು, ಶೇಂಗಾ, ಎಳ್ಳು ಮತ್ತು ರಾಗಿಯನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದು ಉತ್ತಮ. ಆದರೆ ಕ್ಯಾಲ್ಸಿಯಂ ದೇಹದಲ್ಲಿ ಸರಿಯಾಗಿ ಹೀರಿಕೊಳ್ಳಲು ವಿಟಮಿನ್ ಡಿ ಕೂಡ ಅಗತ್ಯ. ಆದ್ದರಿಂದ ಅದರ ಲಭ್ಯತೆಯ ಬಗ್ಗೆಯೂ ಗಮನಹರಿಸಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ