Carrot Juice: ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ 5 ಅದ್ಭುತ ಪ್ರಯೋಜನಗಳು

Health Tips: ಕ್ಯಾರೆಟ್ ಜ್ಯೂಸ್​ ಕುಡಿಯುವುದರಿಂದ ನಿಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭಗಳಿವೆ. ಆರೋಗ್ಯ ಸುಧಾರಣೆಗೆ ಕ್ಯಾರೆಟ್​ ಜ್ಯೂಸ್​ ಉತ್ತಮವೇ ಎಂಬುದರ ಕುರಿತಾದ ಒಂದಿಷ್ಟು ಮಾಹಿತಿ ಇಲ್ಲಿದೆ.

Carrot Juice: ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ 5 ಅದ್ಭುತ ಪ್ರಯೋಜನಗಳು
ಸಂಗ್ರಹ ಚಿತ್ರ
Follow us
TV9 Web
| Updated By: preethi shettigar

Updated on: Oct 27, 2021 | 9:14 AM

ಕ್ಯಾರೆಟ್ ತುಂಬಾ ಪೌಷ್ಟಿಕವಾದ ತರಕಾರಿ. ಇದು ಪೊಟ್ಯಾಷಿಯಂ ಮತ್ತು ವಿಟಮಿನ್ ಸಿ ಒದಗಿಸುವುದು ಮಾತ್ರವಲ್ಲದೇ ಪ್ರೊವಿಟಮಿನ್ ಎ ಅಂಶದಿಂದ ಸಮೃದ್ಧವಾಗಿರುತ್ತದೆ. ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕಣ್ಣು, ಚರ್ಮದ ಆರೋಗ್ಯ ಸುರಕ್ಷತೆಗೆ ಇದು ಒಳ್ಳೆಯದು. ಹಾಗಿರುವಾಗ ವಾರಕ್ಕೆ ಎರಡು ದಿನವಾದರೂ ಒಂದು ಗ್ಲಾಸ್ ಕ್ಯಾರೆಟ್ ಜ್ಯೂಸ್ ಕುಡಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ಕ್ಯಾರೆಟ್ ಜ್ಯೂಸ್​ನಲ್ಲಿ ವಿಟಮಿನ್ ಸಿ ಮತ್ತು ಕೆ ಅಂಶ ಅಧಿಕವಾಗಿರುತ್ತದೆ. ಇದು ಉತ್ಕರ್ಷಣ ನಿರೋಧಕವನ್ನು ನೀಡುತ್ತದೆ. ಹಾಗಿರುವಾಗ ನಿಮ್ಮ ಸಂಪೂರ್ಣ ಆರೋಗ್ಯ ಸುರಕ್ಷತೆಗೆ ಬೇಕಾಗಿರುವ ಪೋಷಕಾಂಶವನ್ನು ನೀಡುವ ಕ್ಯಾರೆಟ್ ಜ್ಯೂಸ್ ಕುಡಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ಕ್ಯಾರೆಟ್ ಜ್ಯೂಸ್​ ಸೇವನೆಯ ಆರೋಗ್ಯ ಪ್ರಯೋಜನಗಳು ಕಣ್ಣುಗಳ ಆರೋಗ್ಯ ಸುಧಾರಣೆ ಕಣ್ಣಿನ ಆರೋಗ್ಯಕ್ಕೆ ವಿಟಮಿನ್ ಎ ಅತ್ಯಗತ್ಯ. ವಿಟಮಿನ್ ಎ ಅಂಶದಿಂದ ನಮಗೆ ಕಣ್ಣಿನ ಆರೋಗ್ಯ ಸುಧಾರಿಸುತ್ತದೆ. ವಿಟಮಿನ್ ಎ ಹೊಂದಿರುವ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವ ಮೂಲಕ ಕಣ್ಣಿನ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಕ್ಯಾರೆಟ್ ಜ್ಯೂಸ್​ನಲ್ಲಿ ಕಂಡುಬರುವ ವಿಟಮಿನ್ ಎ ಮತ್ತು ಸಿ ಉತ್ಕರ್ಷಣ ನಿರೋಧಕಗಳಾಗಿ ಕಾರ್ಯನಿರ್ವಹಿಸುತ್ತದೆ. ಇವೆರಡೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡಲು ಬೇಕಾಗುವ ಅಂಶಗಳು. ಸ್ವತಂತ್ರ ರಾಡಿಕಲ್​ಗಳಿಂದ ಉಂಟಾಗುವ ಹಾನಿಯಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಕ್ಯಾರೆಟ್ ಜ್ಯೂಸ್ ಕುಡಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಕ್ಯಾರೆಟ್ ಜ್ಯೂಸ್ ವಿಟಮಿನ್ ಬಿ6 ನ ಸಮೃದ್ಧ ಮೂಲವಾಗಿದೆ.

ಕ್ಯಾನ್ಸರ್ ವಿರೋಧಿ ಗುಣವನ್ನು ಹೊಂದಿದೆ ಕೆಲವು ಅಧ್ಯಯನಗಳಿಂದ ಕ್ಯಾರೆಟ್​ನಲ್ಲಿ ಕ್ಯಾನ್ಸರ್ ತಡೆಗಟ್ಟುವ ಕೆಲವು ಅಂಶಗಳಿವೆ ಎಂಬುದು ತಿಳಿದು ಬಂದಿದೆ. ಕ್ಯಾರೆಟ್​ನಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿರುತ್ತದೆ. ಇದು ಕ್ಯಾನ್ಸರ್ ಕೋಶಗಳನ್ನು ತಡೆಯುತ್ತದೆ.

ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಣ ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸಲು ಕ್ಯಾರೆಟ್ ಜ್ಯೂಸ್ ಒಳ್ಳೆಯದು. ದೇಹಕ್ಕೆ ಸುಸ್ತು, ಆಯಾಸ, ಅಸ್ವಸ್ಥತೆಯ ಸಮಸ್ಯೆ ಉಂಟಾಗುತ್ತಿದ್ದರೆ ಕ್ಯಾರೆಟ್ ಜ್ಯೂಸ್ ಕುಡಿಯಿರಿ. ಇದು ನಿಮಗೆ ಶಕ್ತಿಯನ್ನು ನೀಡುತ್ತದೆ. ಜತೆಗೆ ದೇಹದ ಒತ್ತಡ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ.

ಚರ್ಮದ ಆರೋಗ್ಯಕ್ಕೆ ಒಳ್ಳೆಯದು ಕ್ಯಾರೆಟ್ ಜ್ಯೂಸ್ ವಿಟಮಿನ್ ಸಿ ಅಂಶವನ್ನು ಒದಗಿಸುತ್ತದೆ. ಉತ್ಕರ್ಷಣ ನಿರೋಧಕಗಳು ನಿಮ್ಮ ಚರ್ಮವನ್ನು ಹಾನಿಗೊಳಗಾಗದಂತೆ ರಕ್ಷಿಸುತ್ತದೆ. ವಿಟಮಿನ್ ಸಿ ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಇದು ಚರ್ಮದ ಆರೋಗ್ಯವನ್ನು ರಕ್ಷಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:

Health Tips: ಸಾತ್ವಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು

Health Tips: ತೆಂಗಿನಕಾಯಿ ನೀರು ಸೇವನೆ ರಕ್ತದೊತ್ತಡ ನಿಯಂತ್ರಿಸಲು ಸಹಾಯಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?