Cervical Cancer: ಲೈಂಗಿಕ ಕ್ರಿಯೆಯಿಂದ ಕ್ಯಾನ್ಸರ್ ಬರಬಹುದು; ಈ ಬಗ್ಗೆ ಇರಲಿ ಎಚ್ಚರ!

ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಅಪಾಯ ಕೂಡ ಇದೆ. ಲೈಂಗಿಕ ಕ್ರಿಯೆಯಿಂದ ಕ್ಯಾನ್ಸರ್​​​​ ಬರುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಇತ್ತೀಚೆಗೆ ನಟಿ ಪೂನಂ ಪಾಂಡೆಯನ್ನು ಬಲಿಯಾಗಿದ್ದರು ಎಂಬ ಸುದ್ದಿಯಾಗಿತ್ತು. ಇದಕ್ಕೆ ಗರ್ಭಕಂಠದ ಕ್ಯಾನ್ಸರ್​ಗೂ ಲೈಂಗಿಕ ಕ್ರಿಯೆಗೂ ಸಂಬಂಧವಿದೆ ಎಂದು ಹೇಳಲಾಗಿತ್ತು. ಹಾಗಾದರೆ ಲೈಂಗಿಕ ಕ್ರಿಯೆಯಿಂದ ಕ್ಯಾನ್ಸರ್​​​​ ಬರುತ್ತ? ಈ ಬಗ್ಗೆ ಅಧ್ಯಾಯನ ಹೇಳೋದೇನು?

Cervical Cancer: ಲೈಂಗಿಕ ಕ್ರಿಯೆಯಿಂದ ಕ್ಯಾನ್ಸರ್ ಬರಬಹುದು; ಈ ಬಗ್ಗೆ ಇರಲಿ ಎಚ್ಚರ!
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 22, 2024 | 12:00 PM

ಮಹಿಳೆಯರಲ್ಲಿ ಇತ್ತೀಚೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಗರ್ಭಕಂಠದ ಕ್ಯಾನ್ಸರ್ (cervical cancer) ಬಹಳ ಆತಂಕ ಮೂಡಿಸಿದೆ. ಈ ಕ್ಯಾನ್ಸರ್ ಅನ್ನು ಸೈಲೆಂಟ್ ಕಿಲ್ಲರ್ ಎಂದು ಕರೆಯಲಾಗುತ್ತದೆ. ಗರ್ಭಕಂಠವೆಂಬುದು ಯೋನಿಯಿಂದ ಗರ್ಭಾಶಯದ ಪ್ರವೇಶದ್ವಾರ. ಇದು ಭಾರತದಲ್ಲಿ ಮಹಿಳೆಯರ ಸಾವಿಗೆ ಕಾರಣವಾಗುತ್ತಿರುವ ಎರಡನೇ ಅತಿ ದೊಡ್ಡ ಕಾಯಿಲೆಯಾಗಿದೆ. ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳುವವರಿಗೆ ಮಾತ್ರ ಈ ಕ್ಯಾನ್ಸರ್​ ಆರಂಭಿಕ ಹಂತದಲ್ಲೇ ಗೊತ್ತಾಗುತ್ತದೆ. ಇದು ಮೊದಲು ಯಾವುದೇ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ಹೀಗಾಗಿ, ಬಹುತೇಕ ರೋಗಿಗಳಿಗೆ ತಮಗೆ ಕ್ಯಾನ್ಸರ್ ಬಂದಿದೆ ಎಂದು ಗೊತ್ತಾಗುವಷ್ಟರಲ್ಲಿ ಆ ಕ್ಯಾನ್ಸರ್ ಕೋಶಗಳು ತೀವ್ರವಾಗಿ ಹರಡಿರುತ್ತದೆ. ಇಂತಹ ಸಂದರ್ಭದಲ್ಲಿ ಬದುಕುವ ಸಾಧ್ಯತೆ ಬಹಳ ಕಡಿಮೆ. ಈ ಗರ್ಭಕಂಠದ ಕ್ಯಾನ್ಸರ್​ಗೆ ಅಸುರಕ್ಷಿತ ಲೈಂಗಿಕ ಕ್ರಿಯೆ ಪ್ರಮುಖವಾದ ಕಾರಣವಾಗಿದೆ.

ಗರ್ಭಕಂಠದ ಕ್ಯಾನ್ಸರ್ ಎಂಬುದು ಗರ್ಭಕಂಠದಲ್ಲಿ ಪ್ರಾರಂಭವಾಗುವ ಜೀವಕೋಶಗಳ ಬೆಳವಣಿಗೆಯಾಗಿದೆ. ಗರ್ಭಕಂಠವೆಂಬುದು ಗರ್ಭಾಶಯದ ಕೆಳಗಿನ ಭಾಗವಾಗಿದ್ದು ಅದು ಯೋನಿಯೊಂದಿಗೆ ಸಂಪರ್ಕಿಸುತ್ತದೆ. ಹೆಚ್​ಪಿವಿ (HPV) ಎಂದು ಕರೆಯಲ್ಪಡುವ ಹ್ಯೂಮನ್ ಪ್ಯಾಪಿಲೋಮವೈರಸ್‌ನ ವಿವಿಧ ತಳಿಗಳು ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್‌ ಉಂಟಾಗಲು ಮುಖ್ಯವಾದ ಪಾತ್ರ ವಹಿಸುತ್ತವೆ. ಈ HPV ಲೈಂಗಿಕ ಸಂಪರ್ಕದ ಮೂಲಕ ಹಾದುಹೋಗುವ ಸಾಮಾನ್ಯ ಸೋಂಕು.

ಇದನ್ನೂ ಓದಿ: Stomach Cancer: ಹೊಟ್ಟೆಯ ಕ್ಯಾನ್ಸರ್ ಯಾಕೆ ಬಹಳ ಅಪಾಯಕಾರಿ?

ಬಹುತೇಕ ಗರ್ಭಕಂಠದ ಕ್ಯಾನ್ಸರ್​ HPV ಸೋಂಕಿನಿಂದ ಉಂಟಾಗುತ್ತವೆ. HPV ಲೈಂಗಿಕ ಸಂಪರ್ಕದ ಮೂಲಕ ಹರಡುವ ಒಂದು ವೈರಸ್. ಹೆಚ್ಚಿನ ಜನರಿಗೆ ಈ ವೈರಸ್ ಯಾವುದೇ ಸಮಸ್ಯೆಗಳನ್ನು ಉಂಟುಮಾಡುವುದಿಲ್ಲ. ಇದು ತನ್ನಷ್ಟಕ್ಕೆ ತಾನೇ ದೇಹದಿಂದ ಹೊರಹೋಗುತ್ತದೆ. ಆದರೆ, ಕೆಲವರಿಗೆ ಮಾತ್ರ ಈ ವೈರಸ್ ಕ್ಯಾನ್ಸರ್​ ಕೋಶಗಳ ಬೆಳವಣಿಗೆಗೆ ಕಾರಣವಾಗುತ್ತದೆ. HPV ಸೋಂಕು ಕೆಲವೊಮ್ಮೆ ಗರ್ಭಕಂಠದ ಕೋಶಗಳನ್ನು ಕ್ಯಾನ್ಸರ್ ಕೋಶಗಳಾಗಿ ಪರಿವರ್ತಿಸುತ್ತದೆ. ನಿಯಮಿತವಾಗಿ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮತ್ತು HPV ಸೋಂಕಿನಿಂದ ರಕ್ಷಿಸುವ ಲಸಿಕೆಯನ್ನು ಪಡೆಯುವ ಮೂಲಕ ನೀವು ಗರ್ಭಕಂಠದ ಕ್ಯಾನ್ಸರ್ ಅಪಾಯವನ್ನು ನಿಯಂತ್ರಿಸಬಹುದು.

ಈ ಲಕ್ಷಣಗಳನ್ನು ನಿರ್ಲಕ್ಷ್ಯಿಸಬೇಡಿ:

ಲೈಂಗಿಕವಾಗಿ ಸಕ್ರಿಯರಾಗಿರುವವರು ಕೆಲವೊಂದು ಲಕ್ಷಣಗಳು ಗೋಚರಿಸಿದರೆ ಆದಷ್ಟು ಬೇಗ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು. ಸಂಭೋಗದ ನಂತರ, ಪಿರಿಯಡ್ಸ್​ ಮುಗಿದ ನಂತರ ಅಥವಾ ಋತುಬಂಧದ ನಂತರ ಯೋನಿಯಲ್ಲಿ ರಕ್ತಸ್ರಾವ ಉಂಟಾದರೆ ಅದನ್ನು ನಿರ್ಲಕ್ಷ್ಯ ಮಾಡಬೇಡಿ. ಮುಟ್ಟಿನ ಸಮಯದಲ್ಲಿ ವಿಪರೀತ ಮತ್ತು ದೀರ್ಘಕಾಲದವರೆಗೆ ರಕ್ತಸ್ರಾವ ಆಗುವುದು. ಯೋನಿಯಲ್ಲಿ ಕೆಟ್ಟ ವಾಸನೆ ಬರುವುದು, ಸಂಭೋಗದ ಸಮಯದಲ್ಲಿ ಬಹಳ ನೋವು ಉಂಟಾಗುವುದು ಗರ್ಭಕಂಠದ ಕ್ಯಾನ್ಸರ್​ನ ಲಕ್ಷಣಗಳಾಗಿವೆ.

200 ಸಂಬಂಧಿತ ವೈರಸ್‌ಗಳ ಗುಂಪಾಗಿರುವ HPV ಕೆಲವು ಕಡಿಮೆ ಅಪಾಯಕಾರಿ ಮತ್ತು ಹೆಚ್ಚಿನ ಅಪಾಯಕಾರಿ ವೈರಸ್‌ಗಳನ್ನು ಹೊಂದಿರುತ್ತದೆ. ಹಾಗಂತ ಎಲ್ಲಾ ಅಪಾಯಕಾರಿ ವೈರಸ್‌ಗಳು ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವಾಗುವುದಿಲ್ಲ. ಹೆಚ್ಚು ಪ್ರಚಲಿತದಲ್ಲಿರುವ HPV 16 ಮತ್ತು HPV 18ನಿಂದ ಈ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು. ಈ ವೈರಸ್‌ಗಳು ಲೈಂಗಿಕ ಸಂಪರ್ಕದ ಮೂಲಕ ಹರಡುತ್ತವೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಲೈಂಗಿಕವಾಗಿ ಸಕ್ರಿಯವಾಗಿರುವ ಬಹುತೇಕ ಎಲ್ಲಾ ಜನರು HPV ಸೋಂಕಿಗೆ ಒಳಗಾಗಿದ್ದಾರೆ. ಜೀವನದಲ್ಲಿ ಒಮ್ಮೆಯಾದರೂ ಈ ಸೋಂಕು ಉಂಟಾಗುತ್ತದೆ. ಆದರೆ, ಹಲವರಿಗೆ ಇದು ಯಾವುದೇ ಅಪಾಯ ಮಾಡುವುದಿಲ್ಲ. ಅನೇಕ ಸಂದರ್ಭಗಳಲ್ಲಿ ರೋಗನಿರೋಧಕ ಶಕ್ತಿಯು ದೇಹದಿಂದ HPV ಅನ್ನು ಹೊರಹಾಕುತ್ತದೆ. ಹೆಚ್ಚಿನ ಅಪಾಯದ HPVಯೊಂದಿಗಿನ ನಿರಂತರ ಸೋಂಕು ಅಸಹಜ ಕೋಶಗಳನ್ನು ಅಭಿವೃದ್ಧಿಪಡಿಸಲು ಕಾರಣವಾಗುತ್ತದೆ. ಅದು ಕ್ಯಾನ್ಸರ್ ಆಗಿ ಪರಿವರ್ತನೆಯಾಗುತ್ತದೆ.

ಇದನ್ನೂ ಓದಿ: Cervical Cancer: ಗರ್ಭಕಂಠದ ಕ್ಯಾನ್ಸರ್ ಬಾರದಂತೆ ತಡೆಯುವುದು ಹೇಗೆ?

ವೈದ್ಯರ ಪ್ರಕಾರ, ನೀವು ಲೈಂಗಿಕವಾಗಿ ಸಕ್ರಿಯರಾಗಿದ್ದರೆ ನೀವು HPV ವೈರಸ್‌ಗೆ ಒಳಗಾಗುವ ಅಪಾಯವಿದೆ. HPV ಲೈಂಗಿಕವಾಗಿ ಹರಡುತ್ತದೆ. ಒಂದುವೇಳೆ ನೀವು ಒಬ್ಬರಿಗಿಂತ ಹೆಚ್ಚು ಜನರ ಜೊತೆ ಲೈಂಗಿಕ ಕ್ರಿಯೆ ನಡೆಸುವವರಾದರೆ ನೀವು ಗರ್ಭಕಂಠದ ಕ್ಯಾನ್ಸರ್ ಅನ್ನು ಹೊಂದುವ ಅಪಾಯವನ್ನು ಹೊಂದಿರುತ್ತೀರಿ. ಲೈಂಗಿಕವಾಗಿ ಸಕ್ರಿಯವಾಗಿರುವುದು ನಿಮಗೆ ಅಪಾಯವನ್ನುಂಟುಮಾಡುತ್ತದೆ. ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆಯನ್ನು ತೆಗೆದುಕೊಳ್ಳುವುದರಿಂದ ಕಾಲಾನಂತರದಲ್ಲಿ, ನೀವು ಈ ಅಪಾಯದಿಂದ ಶೇ. 95ರಷ್ಟು ಪ್ರಮಾಣದಲ್ಲಿ ಪಾರಾಗಬಹುದು.

ಲೈಂಗಿಕವಾಗಿ ಸಕ್ರಿಯವಾಗಿರುವ ಪುರುಷರು ಮತ್ತು ಮಹಿಳೆಯರಿಬ್ಬರೂ ನಿಯಮಿತ ತಪಾಸಣೆ, ವ್ಯಾಕ್ಸಿನೇಷನ್‌ಗಳನ್ನು ಹಾಕಿಸಿಕೊಳ್ಳಬೇಕು. ಗರ್ಭಕಂಠದ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಆರೋಗ್ಯಕರ ಜೀವನಶೈಲಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್