Cervical Cancer: ಗರ್ಭಕಂಠದ ಕ್ಯಾನ್ಸರ್ ಬಾರದಂತೆ ತಡೆಯುವುದು ಹೇಗೆ?

ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ಅತಿ ಹೆಚ್ಚು ಕಂಡುಬರುತ್ತಿರುವ ಕ್ಯಾನ್ಸರ್ ಆಗಿದೆ. ಬಾಲಿವುಡ್ ನಟಿ ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್​ನಿಂದ ಮೃತಪಟ್ಟ ಬಳಿಕ ಈ ರೋಗದ ಬಗ್ಗೆ ಚರ್ಚೆಗಳು ಹೆಚ್ಚಾಗಿದ್ದು, ಇದರ ಗಂಭೀರತೆಯ ಬಗ್ಗೆಯೂ ಜಾಗೃತಿ ಮೂಡುತ್ತಿದೆ. ಸೈಲೆಂಟ್ ಕಿಲ್ಲರ್ ಆಗಿರುವ ಗರ್ಭಕಂಠದ ಕ್ಯಾನ್ಸರ್ ತೀವ್ರ ಹಂತಕ್ಕೆ ತಲುಪುವವರೆಗೆ ಯಾವ ಲಕ್ಷಣಗಳೂ ಗೊತ್ತಾಗುವುದಿಲ್ಲ. ಹಾಗಾದರೆ, ಗರ್ಭಕಂಠದ ಕ್ಯಾನ್ಸರ್ ನಿಯಂತ್ರಿಸಲು ಏನು ಮಾಡಬೇಕು?

Cervical Cancer: ಗರ್ಭಕಂಠದ ಕ್ಯಾನ್ಸರ್ ಬಾರದಂತೆ ತಡೆಯುವುದು ಹೇಗೆ?
ಗರ್ಭಕಂಠದ ಕ್ಯಾನ್ಸರ್ Image Credit source: iStock
Follow us
|

Updated on:Feb 03, 2024 | 11:01 AM

ಸೈಲೆಂಟ್ ಕಿಲ್ಲರ್ ಎಂದೇ ಕರೆಯಲ್ಪಡುವ ಗರ್ಭಕಂಠದ ಕ್ಯಾನ್ಸರ್ (Cervical Cancer) ಇತ್ತೀಚೆಗೆ ಹೆಚ್ಚು ಪ್ರಚಲಿತದಲ್ಲಿರುವ ಕ್ಯಾನ್ಸರ್ ಆಗಿದೆ. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ವ್ಯಾಕ್ಸಿನೇಷನ್, ನಿಯಮಿತ ತಪಾಸಣೆ ಮತ್ತು ಜೀವನಶೈಲಿಯ ಆಯ್ಕೆಗಳ ಸುತ್ತ ಕೇಂದ್ರೀಕೃತವಾಗಿದೆ. ಗರ್ಭಕಂಠದ ಕ್ಯಾನ್ಸರ್‌ನಿಂದ ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ (Poonam Pandey) ಇದ್ದಕ್ಕಿದ್ದಂತೆ ಸಾವನ್ನಪ್ಪಿದ ಬಳಿಕ ಮಹಿಳೆಯರಲ್ಲಿ ಈ ಕ್ಯಾನ್ಸರ್ ಆತಂಕ ಹೆಚ್ಚಾಗಿದೆ. ಏಷ್ಯನ್ ದೇಶಗಳಲ್ಲಿ ಗರ್ಭಕಂಠದ ಕ್ಯಾನ್ಸರ್‌ಗೆ (Cervical Cancer Symptoms) ಸಾಮಾನ್ಯ ಕಾರಣವೆಂದರೆ HPV ಸೋಂಕು. ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಕ್ಯಾನ್ಸರ್ ಆಗಿದೆ. ಗ್ರಾಮೀಣ ಜನಸಂಖ್ಯೆಯಲ್ಲಿ ಮಾತ್ರವಲ್ಲದೆ ನಗರ ಜನಸಂಖ್ಯೆಯ ಮಹಿಳೆಯರಲ್ಲಿಯೂ ಸಹ ಈ ಕ್ಯಾನ್ಸರ್ ಹೆಚ್ಚಾಗುತ್ತಿದೆ. ಈ ಕ್ಯಾನ್ಸರ್ ಪುರುಷರಿಗೂ ಉಂಟಾಗುತ್ತದೆಯಾದರೂ ಮಹಿಳೆಯರಲ್ಲಿ ಈ ಕ್ಯಾನ್ಸರ್ ಅಪಾಯ ಹೆಚ್ಚು.

ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟುವ ಪರಿಣಾಮಕಾರಿ ಕ್ರಮವೆಂದರೆ ಹ್ಯೂಮನ್ ಪ್ಯಾಪಿಲೋಮವೈರಸ್ (ಎಚ್‌ಪಿವಿ) ಲಸಿಕೆ. ಇದು ಗರ್ಭಕಂಠಕ್ಕೆ ಕಾರಣವಾದ ವೈರಸ್‌ನ ಮುಖ್ಯ ತಳಿಗಳ ವಿರುದ್ಧ ನಮ್ಮ ದೇಹವನ್ನು ರಕ್ಷಿಸುತ್ತದೆ. 9ರಿಂದ 26 ವರ್ಷ ವಯಸ್ಸಿನ ಎಲ್ಲಾ ಮಹಿಳೆಯರು ಈ ಲಸಿಕೆಯನ್ನು ಹಾಕಿಸಿಕೊಳ್ಳುವುದು ಉತ್ತಮ. ಪ್ಯಾಪ್ ಸ್ಮೀಯರ್‌ಗಳು ಅಥವಾ HPV ಪರೀಕ್ಷೆಗಳಂತಹ ತಪಾಸಣೆಗಳು ಅಸಹಜ ಕೋಶ ಬದಲಾವಣೆಗಳನ್ನು ಮೊದಲೇ ಪತ್ತೆಹಚ್ಚಲು ಅವಶ್ಯಕವಾಗಿದೆ. ಇದು ಆರಂಭಿಕ ಹಂತದ ಕ್ಯಾನ್ಸರ್‌ಗಳನ್ನು ಗುರುತಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಕ್ಯಾನ್ಸರ್ ವಿರುದ್ಧ ಹೋರಾಡಿ ಗೆದ್ದ ಬಾಲಿವುಡ್ ನಟ-ನಟಿಯರಿವರು

ಗರ್ಭಕಂಠದ ಕ್ಯಾನ್ಸರ್​ಗೆ ಅಸುರಕ್ಷಿತ ಲೈಂಗಿಕ ಕ್ರಿಯೆಯೂ ಒಂದು ಮುಖ್ಯ ಕಾರಣ. ಸುರಕ್ಷಿತ ಲೈಂಗಿಕ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಸಾಧ್ಯವಾಗುತ್ತದೆ. ಲೈಂಗಿಕ ಕ್ರಿಯೆ ವೇಳೆ ಕಾಂಡೋಮ್ ಬಳಕೆಯು HPV ಸೋಂಕು ಹರಡುವ ಅಪಾಯವನ್ನು ಕಡಿಮೆ ಮಾಡುತ್ತದೆ. ಹಲವು ಜನರೊಂದಿಗೆ ಲೈಂಗಿಕ ಕ್ರಿಯೆ ನಡೆಸುವವರು ಹೆಚ್ಚು ಎಚ್ಚರ ವಹಿಸುವುದು ಉತ್ತಮ.

ಗರ್ಭಕಂಠದ ಕ್ಯಾನ್ಸರ್‌ಗೆ ಧೂಮಪಾನವು ಮತ್ತೊಂದು ಪ್ರಮುಖ ಅಪಾಯಕಾರಿ ಅಂಶವಾಗಿದೆ. ತಂಬಾಕಿನ ಹೊಗೆಯಲ್ಲಿನ ವಿಷವು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಇದು ಸೆಲ್ಯುಲಾರ್ ಡಿಎನ್‌ಎಗೆ ಹಾನಿ ಮಾಡುತ್ತದೆ. ಇವೆರಡೂ ಕ್ಯಾನ್ಸರ್ ಬೆಳವಣಿಗೆಗೆ ಕಾರಣವಾಗಬಹುದು. ಹಣ್ಣುಗಳು ಮತ್ತು ತರಕಾರಿಗಳು ಸಮೃದ್ಧವಾಗಿರುವ ಸಮತೋಲಿತ ಆಹಾರದೊಂದಿಗೆ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ತೂಕ ಕಾಪಾಡಿಕೊಳ್ಳುವುದು ಗರ್ಭಕಂಠದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Mouth Cancer: ಧೂಮಪಾನ ಮಾಡದವರಿಗೂ ಬಾಯಿಯ ಕ್ಯಾನ್ಸರ್ ಬರಲು ಕಾರಣ ಇಲ್ಲಿದೆ

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುವ ಜೀವನಶೈಲಿಯ ಬದಲಾವಣೆಗಳು ಇಲ್ಲಿವೆ:

1. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು.

2. ಬಹಳಷ್ಟು ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳನ್ನು ಸೇವಿಸುವುದು.

3. ಸಂಸ್ಕರಿಸಿದ ಆಹಾರ, ಸಂಸ್ಕರಿಸಿದ ಕಾರ್ಬೋಹೈಡ್ರೇಟ್‌ಗಳು, ಕೊಬ್ಬು, ಕೆಂಪು ಮಾಂಸದ ಸೇವನೆಯನ್ನು ಕಡಿಮೆ ಮಾಡುವುದು.

4. ಆಲ್ಕೋಹಾಲ್ ಸೇವನೆಯನ್ನು ಮಿತಿಗೊಳಿಸುವುದು.

5. ದೈಹಿಕವಾಗಿ ಸಕ್ರಿಯರಾಗಿರುವುದು. ವಾರಕ್ಕೆ ಕನಿಷ್ಠ 5 ಬಾರಿ 30 ನಿಮಿಷಗಳ ವ್ಯಾಯಾಮ ಮಾಡುವುದು.

6. ಅಸುರಕ್ಷಿತ ಲೈಂಗಿಕತೆಯನ್ನು ತಡೆಯುವುದು. ಲೈಂಗಿಕವಾಗಿ ಹರಡುವ ರೋಗಗಳನ್ನು ತಡೆಗಟ್ಟಲು ಕಾಂಡೋಮ್​ಗಳನ್ನು ಬಳಸುವುದು.

7. ಒಬ್ಬರೇ ವ್ಯಕ್ತಿಯ ಜೊತೆ ಲೈಂಗಿಕ ಕ್ರಿಯೆ ನಡೆಸುವುದು.

8. ಧೂಮಪಾನವನ್ನು ತಪ್ಪಿಸುವುದು.

9. 18ರಿಂದ 20 ವರ್ಷ ದಾಟಿದ ನಂತರವೇ ಲೈಂಗಿಕ ಕ್ರಿಯೆ ನಡೆಸುವುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:51 am, Sat, 3 February 24