AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತ್ತಿಗೆಯ ಭಾಗದಲ್ಲಿ ನೋವು ಬಂದು ತಲೆ ಭಾರವೆನಿಸುವುದು ಸರ್ವಿಕಲ್ ಸ್ಪಾಂಡಿಲೋಸಿಸ್‌ನ ಆರಂಭವಾಗಿರಬಹುದು ಎಚ್ಚರ!

Cervical Spondylosis: ಗಂಟೆಗಳ ಕಾಲ ಒಂದೇ ಕಡೆ ಕುಳಿತು ಕೆಲಸ ಮಾಡುವುದು, ಬಿಡುವಿನ ವೇಳೆಯಲ್ಲಿ ಫೋನ್‌ ನೋಡುವುದು ಆರೋಗ್ಯಕ್ಕೆ ದೊಡ್ಡ ಹೊಡೆತ ನೀಡಬಹುದು. ಹೌದು, ಇತ್ತೀಚಿನ ದಿನಗಳಲ್ಲಿ ಭುಜ ಮತ್ತು ಕುತ್ತಿಗೆ ನೋವು ಕೆಲವರಲ್ಲಿ ತಲೆನೋವು ಕಾಣಿಸಿಕೊಳ್ಳುತ್ತಿದೆ. ಇದು ಸಾಮಾನ್ಯ ಸಮಸ್ಯೆಯಲ್ಲ, ಬದಲಾಗಿ ಸರ್ವಿಕಲ್ ಸ್ಪಾಂಡಿಲೋಸಿಸ್‌ನ ಸಂಕೇತವೂ ಆಗಿರಬಹುದು. ಹಾಗಾದರೆ ಸರ್ವಿಕಲ್ ಸ್ಪಾಂಡಿಲೋಸಿಸ್‌ ಎಂದರೇನು, ಲಕ್ಷಣಗಳು ಹೇಗಿರುತ್ತವೆ, ಇದನ್ನು ತಡೆಯಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕುತ್ತಿಗೆಯ ಭಾಗದಲ್ಲಿ ನೋವು ಬಂದು ತಲೆ ಭಾರವೆನಿಸುವುದು ಸರ್ವಿಕಲ್ ಸ್ಪಾಂಡಿಲೋಸಿಸ್‌ನ ಆರಂಭವಾಗಿರಬಹುದು ಎಚ್ಚರ!
Cervical Spondylosis Prevention Tips
ಪ್ರೀತಿ ಭಟ್​, ಗುಣವಂತೆ
|

Updated on: Jan 06, 2026 | 6:06 PM

Share

ಇತ್ತೀಚಿನ ದಿನಗಳಲ್ಲಿ ಕುತ್ತಿಗೆ ನೋವು (Neck Pain) ಸಾಮಾನ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಇದಕ್ಕೆ ಕಾರಣಗಳು ಹಲವಾರಿರಬಹುದು. ಆದರೆ ಈ ರೀತಿ ಕುತ್ತಿಗೆ ನೋವಿನ ಜೊತೆಗೆ ತಲೆ ನೋವು ಮತ್ತು ಭುಜಗಳಲ್ಲಿ ಬಿಗಿತ ನಿರಂತರವಾಗಿ ಕಂಡುಬರುತ್ತಿದ್ದರೆ, ಅದನ್ನು ಹಗುರವಾಗಿ ಪರಿಗಣಿಸಬೇಡಿ. ಹೌದು, ಆರೋಗ್ಯ ತಜ್ಞರು ಹೇಳುವ ಪ್ರಕಾರ, ಇದು ಸರ್ವಿಕಲ್ ಸ್ಪಾಂಡಿಲೋಸಿಸ್ (Cervical Spondylosis) ಎಂಬ ಕಾಯಿಲೆಯ ಲಕ್ಷಣವಾಗಿರಬಹುದು. ಘಂಟೆಗಟ್ಟಲೆ ಒಂದೇ ಜಾಗದಲ್ಲಿ ಕುಳಿತು ಕೆಲಸ ಮಾಡುವುದು ಮತ್ತು ಮೊಬೈಲ್ ಫೋನ್‌ಗಳ ವ್ಯಾಪಕ ಬಳಕೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಕಳೆದ ಕೆಲವು ವರ್ಷಗಳಿಂದ, ಈ ಸಮಸ್ಯೆ ಗಮನಾರ್ಹವಾಗಿ ಹೆಚ್ಚುತ್ತಿದ್ದು ಯುವಜನತೆಯಲ್ಲಿ ಹೆಚ್ಚೆಚ್ಚು ವರದಿಯಾಗುತ್ತಿವೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಲು ಇದರ ಬಗ್ಗೆ ಸರಿಯಾಗಿ ತಿಳಿದಿರುವುದು ಬಹಳ ಮುಖ್ಯವಾಗಿದೆ. ಹಾಗಾದರೆ ಸರ್ವಿಕಲ್ ಸ್ಪಾಂಡಿಲೋಸಿಸ್‌ ಎಂದರೇನು, ಲಕ್ಷಣಗಳು ಹೇಗಿರುತ್ತವೆ, ಇದನ್ನು ತಡೆಯಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಇತ್ತೀಚಿನ ವರ್ಷಗಳಲ್ಲಿ ಸರ್ವಿಕಲ್ ಸ್ಪಾಂಡಿಲೋಸಿಸ್ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚಾಗಿದ್ದು ಒಂದೇ ಜಾಗದಲ್ಲಿ ಘಂಟೆಗಟ್ಟಲೆ ಕುಳಿತು ಕೆಲಸ ಮಾಡುವವರ ಮೇಲೆ ಇದು ಹೆಚ್ಚಾಗಿ ಪರಿಣಾಮ ಬೀರುತ್ತಿದೆ. ಜನರ ಫೋನ್ ಬಳಕೆ ಹೆಚ್ಚಾಗಿದ್ದು, ಫೋನ್‌ಗಳನ್ನು ಗಂಟೆಗಟ್ಟಲೆ ನೋಡುತ್ತಾ ಸಮಯ ಕಳೆಯುತ್ತಾರೆ, ಇದು ಕುತ್ತಿಗೆಯ ಮೂಳೆಗಳ ಮೇಲೆ ಪರಿಣಾಮ ಬೀರುತ್ತದೆ. ಅಷ್ಟು ಮಾತ್ರವಲ್ಲ, ಕಳವಳಕಾರಿ ವಿಷಯವೆಂದರೆ ಈ ಸಮಸ್ಯೆ ಎಲ್ಲಾ ವಯಸ್ಸಿನವರಲ್ಲಿಯೂ ಕಂಡುಬರುತ್ತಿದೆ. 20 ರಿಂದ 30 ವರ್ಷ ವಯಸ್ಸಿನವರು ಸಹ ಈ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಮುಖ್ಯ ಕಾರಣ ಸರಿಯಾಗಿ ಕುಳಿತುಕೊಳ್ಳದಿರುವುದಾಗಿದೆ.

ಸರ್ವಿಕಲ್ ಸ್ಪಾಂಡಿಲೋಸಿಸ್ ಎಂದರೇನು?

ತುಂಬಾ ಸಮಯ ಒಂದೇ ಭಂಗಿಯಲ್ಲಿ ಕುಳಿತಿರುವುದು ಅಥವಾ ಸರಿಯಾಗಿ ಕುಳಿತುಕೊಳ್ಳದಿದ್ದರೆ ನಮಗೆ ತಿಳಿಯದಂತೆ ಕುತ್ತಿಗೆಯ ಮೂಳೆಗಳು ಮತ್ತು ಅವುಗಳ ನಡುವಿನ ಡಿಸ್ಕ್‌ಗಳಲ್ಲಿ ಸವೆತ ಉಂಟಾಗುತ್ತದೆ. ಇದು ಜೀವನಶೈಲಿಯನ್ನು ಸರಿಯಾಗಿ ಇಟ್ಟುಕೊಳ್ಳದಿದ್ದರೆ ಅಥವಾ ವಯಸ್ಸಾಗುವುದರಿಂದ ಮತ್ತು ದೇಹದಲ್ಲಿನ ಪೌಷ್ಟಿಕಾಂಶದ ಕೊರತೆಯಿಂದಲೂ ಸಂಭವಿಸಬಹುದು. ಈ ಸವೆತದಿಂದಾಗಿ, ಡಿಸ್ಕ್‌ಗಳು ತೆಳುವಾಗಲು ಪ್ರಾರಂಭಿಸುತ್ತವೆ. ಕೆಲವರಲ್ಲಿ, ಮೂಳೆ ಸ್ಪರ್ಸ್ ಸಹ ಬೆಳೆಯಬಹುದು. ಈ ಸ್ಥಿತಿಯನ್ನು ಸರಿಪಡಿಸಿಕೊಳ್ಳದಿದ್ದರೆ, ಇದು ಬೆನ್ನುಮೂಳೆಯ ಮೇಲೂ ಪರಿಣಾಮ ಬೀರಬಹುದು.

ಇದನ್ನೂ ಓದಿ: ಸಣ್ಣ ತಲೆನೋವು ಎಂದು ನಿರ್ಲಕ್ಷ್ಯ ಮಾಡಿದರೆ ದೃಷ್ಟಿ ಕಳೆದುಕೊಳ್ಳಬೇಕಾದೀತು ಎಚ್ಚರ!

ಸರ್ವಿಕಲ್ ಸ್ಪಾಂಡಿಲೋಸಿಸ್ ನ ಆರಂಭಿಕ ಲಕ್ಷಣಗಳು:

  • ನಿರಂತರ ಕುತ್ತಿಗೆ ನೋವು
  • ಕುತ್ತಿಗೆಯಲ್ಲಿ ಬಿಗಿತ
  • ತಲೆ ಭಾರವಾದ ಭಾವನೆ ಅಥವಾ ತಲೆನೋವು, ಬೆನ್ನು ನೋವು
  • ಭುಜಗಳು ಮತ್ತು ತೋಳುಗಳಲ್ಲಿ ನೋವು
  • ಕೈಗಳಲ್ಲಿ ಜುಮ್ಮೆನಿಸುವಿಕೆ ಅಥವಾ ಮರಗಟ್ಟುವಿಕೆ

ಸರ್ವಿಕಲ್ ಸ್ಪಾಂಡಿಲೋಸಿಸ್ ತಡೆಗಟ್ಟಲು ಸಲಹೆಗಳು:

  • ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಿರಿ.
  • ಪ್ರತಿದಿನ ಲಘು ವ್ಯಾಯಾಮಗಳನ್ನು ಮಾಡಿ.
  • ಹೆಚ್ಚು ಹೊತ್ತು ಒಂದೇ ಭಂಗಿಯಲ್ಲಿ ಕುಳಿತುಕೊಳ್ಳಬೇಡಿ.
  • ಕೆಲಸ ಮಾಡುವಾಗ ಕಂಪ್ಯೂಟರ್‌ನ ಪರದೆ ಕಣ್ಣಿನ ಮಟ್ಟದಲ್ಲಿರಲಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ