
ಇತ್ತೀಚಿನ ದಿನಗಳಲ್ಲಿ ಕುತ್ತಿಗೆ ನೋವು (Neck Pain) ಸಾಮಾನ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಇದಕ್ಕೆ ಕಾರಣಗಳು ಹಲವಾರಿರಬಹುದು. ಆದರೆ ಈ ರೀತಿ ಕುತ್ತಿಗೆ ನೋವಿನ ಜೊತೆಗೆ ತಲೆ ನೋವು ಮತ್ತು ಭುಜಗಳಲ್ಲಿ ಬಿಗಿತ ನಿರಂತರವಾಗಿ ಕಂಡುಬರುತ್ತಿದ್ದರೆ, ಅದನ್ನು ಹಗುರವಾಗಿ ಪರಿಗಣಿಸಬೇಡಿ. ಹೌದು, ಆರೋಗ್ಯ ತಜ್ಞರು ಹೇಳುವ ಪ್ರಕಾರ, ಇದು ಸರ್ವಿಕಲ್ ಸ್ಪಾಂಡಿಲೋಸಿಸ್ (Cervical Spondylosis) ಎಂಬ ಕಾಯಿಲೆಯ ಲಕ್ಷಣವಾಗಿರಬಹುದು. ಘಂಟೆಗಟ್ಟಲೆ ಒಂದೇ ಜಾಗದಲ್ಲಿ ಕುಳಿತು ಕೆಲಸ ಮಾಡುವುದು ಮತ್ತು ಮೊಬೈಲ್ ಫೋನ್‌ಗಳ ವ್ಯಾಪಕ ಬಳಕೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಕಳೆದ ಕೆಲವು ವರ್ಷಗಳಿಂದ, ಈ ಸಮಸ್ಯೆ ಗಮನಾರ್ಹವಾಗಿ ಹೆಚ್ಚುತ್ತಿದ್ದು ಯುವಜನತೆಯಲ್ಲಿ ಹೆಚ್ಚೆಚ್ಚು ವರದಿಯಾಗುತ್ತಿವೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಲು ಇದರ ಬಗ್ಗೆ ಸರಿಯಾಗಿ ತಿಳಿದಿರುವುದು ಬಹಳ ಮುಖ್ಯವಾಗಿದೆ. ಹಾಗಾದರೆ ಸರ್ವಿಕಲ್ ಸ್ಪಾಂಡಿಲೋಸಿಸ್ ಎಂದರೇನು, ಲಕ್ಷಣಗಳು ಹೇಗಿರುತ್ತವೆ, ಇದನ್ನು ತಡೆಯಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಇತ್ತೀಚಿನ ವರ್ಷಗಳಲ್ಲಿ ಸರ್ವಿಕಲ್ ಸ್ಪಾಂಡಿಲೋಸಿಸ್ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚಾಗಿದ್ದು ಒಂದೇ ಜಾಗದಲ್ಲಿ ಘಂಟೆಗಟ್ಟಲೆ ಕುಳಿತು ಕೆಲಸ ಮಾಡುವವರ ಮೇಲೆ ಇದು ಹೆಚ್ಚಾಗಿ ಪರಿಣಾಮ ಬೀರುತ್ತಿದೆ. ಜನರ ಫೋನ್ ಬಳಕೆ ಹೆಚ್ಚಾಗಿದ್ದು, ಫೋನ್‌ಗಳನ್ನು ಗಂಟೆಗಟ್ಟಲೆ ನೋಡುತ್ತಾ ಸಮಯ ಕಳೆಯುತ್ತಾರೆ, ಇದು ಕುತ್ತಿಗೆಯ ಮೂಳೆಗಳ ಮೇಲೆ ಪರಿಣಾಮ ಬೀರುತ್ತದೆ. ಅಷ್ಟು ಮಾತ್ರವಲ್ಲ, ಕಳವಳಕಾರಿ ವಿಷಯವೆಂದರೆ ಈ ಸಮಸ್ಯೆ ಎಲ್ಲಾ ವಯಸ್ಸಿನವರಲ್ಲಿಯೂ ಕಂಡುಬರುತ್ತಿದೆ. 20 ರಿಂದ 30 ವರ್ಷ ವಯಸ್ಸಿನವರು ಸಹ ಈ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಮುಖ್ಯ ಕಾರಣ ಸರಿಯಾಗಿ ಕುಳಿತುಕೊಳ್ಳದಿರುವುದಾಗಿದೆ.
ತುಂಬಾ ಸಮಯ ಒಂದೇ ಭಂಗಿಯಲ್ಲಿ ಕುಳಿತಿರುವುದು ಅಥವಾ ಸರಿಯಾಗಿ ಕುಳಿತುಕೊಳ್ಳದಿದ್ದರೆ ನಮಗೆ ತಿಳಿಯದಂತೆ ಕುತ್ತಿಗೆಯ ಮೂಳೆಗಳು ಮತ್ತು ಅವುಗಳ ನಡುವಿನ ಡಿಸ್ಕ್‌ಗಳಲ್ಲಿ ಸವೆತ ಉಂಟಾಗುತ್ತದೆ. ಇದು ಜೀವನಶೈಲಿಯನ್ನು ಸರಿಯಾಗಿ ಇಟ್ಟುಕೊಳ್ಳದಿದ್ದರೆ ಅಥವಾ ವಯಸ್ಸಾಗುವುದರಿಂದ ಮತ್ತು ದೇಹದಲ್ಲಿನ ಪೌಷ್ಟಿಕಾಂಶದ ಕೊರತೆಯಿಂದಲೂ ಸಂಭವಿಸಬಹುದು. ಈ ಸವೆತದಿಂದಾಗಿ, ಡಿಸ್ಕ್‌ಗಳು ತೆಳುವಾಗಲು ಪ್ರಾರಂಭಿಸುತ್ತವೆ. ಕೆಲವರಲ್ಲಿ, ಮೂಳೆ ಸ್ಪರ್ಸ್ ಸಹ ಬೆಳೆಯಬಹುದು. ಈ ಸ್ಥಿತಿಯನ್ನು ಸರಿಪಡಿಸಿಕೊಳ್ಳದಿದ್ದರೆ, ಇದು ಬೆನ್ನುಮೂಳೆಯ ಮೇಲೂ ಪರಿಣಾಮ ಬೀರಬಹುದು.
ಇದನ್ನೂ ಓದಿ: ಸಣ್ಣ ತಲೆನೋವು ಎಂದು ನಿರ್ಲಕ್ಷ್ಯ ಮಾಡಿದರೆ ದೃಷ್ಟಿ ಕಳೆದುಕೊಳ್ಳಬೇಕಾದೀತು ಎಚ್ಚರ!
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ