AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಳಾತಿವಿರಳ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ಕೊನೆಗೂ ಸಾವು; ಏನಿದು ಅಪರೂಪದ ಕಾಯಿಲೆ?

ತೀರಾ ಅಪರೂಪ ಮತ್ತು ವಿರಳ ಕಾಯಿಲೆಯಿಂದ ಬಳಲುತ್ತಿದ್ದ ಮಂಗಳೂರಿನ ಚಾಂದಿನಿ ಕೊನೆಗೂ ಉಸಿರು ಚೆಲ್ಲಿದ್ದಾರೆ. ಇವರಿಗಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲೇ ಆರೋಗ್ಯ ಇಲಾಖೆಗೆ ಬಹಳ ಸಮಯ ಹಿಡಿದಿತ್ತು. ಅಂತಿಮವಾಗಿ ಇದೊಂದು ವಿರಳಾತಿವಿರಳ ಕಾಯಿಲೆ ಎಂಬುದು ಗೊತ್ತಾಗಿದ್ದು, ಇದಕ್ಕೆ ಹೈದರಾಬಾದ್​ನ ಆಸ್ಪತ್ರೆಯೊಂದರಲ್ಲಿ ಚಾಂದಿನಿಯವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಮುಂದಿದ್ದ ಅಗತ್ಯ ಚಿಕಿತ್ಸೆಗೆ ಸರ್ಕಾರ ಸಕಾಲದಲ್ಲಿ ಹಣ ಬಿಡುಗಡೆ ಮಾಡದೆ ನಿರ್ಲಕ್ಷ್ಯ ವಹಿಸಿದ ಕಾರಣ ಅವರು ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಿರಳಾತಿವಿರಳ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ಕೊನೆಗೂ ಸಾವು; ಏನಿದು ಅಪರೂಪದ ಕಾಯಿಲೆ?
ಮೃತ ಚಾಂದಿನಿ
TV9 Web
| Updated By: ಪ್ರಸನ್ನ ಹೆಗಡೆ|

Updated on: Oct 20, 2025 | 9:12 AM

Share

ಮಂಗಳೂರು, ಅಕ್ಟೋಬರ್​ 20: ವಿರಳ ಹಾಗೂ ತೀರ ಅಪರೂಪದ ಖಾಯಿಲೆ Hyper IGE Mediated Mast cell activation syndromeನಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ (Mangaluru) ಸುಳ್ಯ ಗಾಂಧಿನಗರ ನಿವಾಸಿ ಚಾಂದಿನಿ ಕೊನೆಗೂ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಇವರಿಗಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳ ಸಮಯ ಹಿಡಿದಿತ್ತು. ಅಂತಿಮವಾಗಿ ಇವರಿಗೆ ಇದ್ದಿದ್ದು ಬಹಳ ಅಪರೂಪದ ಕಾಯಿಲೆ ಎಂದು ಗೊತ್ತಾಗಿ, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲೆಯೊಂದರಲ್ಲಿ ನೃತ್ಯ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಚಾಂದಿನಿ ಆರೋಗ್ಯ ತೀರಾ ಹದಗೆಟ್ಟಿತ್ತು. ಒಂದಲ್ಲ ಒಂದು ಕಾಯಿಲೆಯಿಂದ ಬಳಲ್ತಿದ್ದ ಚಾಂದಿನಿಗೆ ತನಗಿರುವ ಈ ಅಪರೂಪದ ಕಾಯಿಲೆ ಬಗ್ಗೆ ಗೊತ್ತೇ ಇರಲಿಲ್ಲ. ಹೀಗಾಗಿ ಸುಳ್ಯ, ಮಂಗಳೂರು ಸೇರಿದಂತೆ ಹಲವೆಡೆ ಚಿಕಿತ್ಸೆ ಪಡೆದಿದ್ರೂ ಕೂಡ ಗುಣಮುಖರಾಗಿರಲಿಲ್ಲ. ಚಾಂದಿನಿ ಅವರು ಬಳಲುತ್ತಿದ್ದ Hyper IGE Mediated Mast cell activation syndromeಗೆ ಜಿಲ್ಲಾ ಮಟ್ಟದಲ್ಲಿ ಚಿಕಿತ್ಸಾ ಸೌಲಭ್ಯ ಇಲ್ಲ ಎಂದು ಆರೋಗ್ಯ ಇಲಾಖೆ ಹೇಳಿದ್ದ ಕಾರಣ, ಹೈದರಾಬಾದ್​ ನ AIG ಆಸ್ಪತ್ರೆಗೆ ಚಾಂದಿನಿ ಅವರನ್ನು ದಾಖಲಿಸಲಾಗಿತ್ತು. ಖಾಯಿಲೆಯನ್ನೂ ಅದೇ ಆಸ್ಪತ್ರೆ ಪತ್ತೆ ಮಾಡಿದ್ದು, ಆ ವರದಿಯನ್ನ ಕರ್ನಾಟಕ ಸರ್ಕಾರಕ್ಕೆ ಚಾಂದಿನಿ ನೀಡಿದ್ದರು. ಆದ್ರೆ ಚಿಕಿತ್ಸೆಗೆ ಸರ್ಕಾರ ಸಕಾಲದಲ್ಲಿ ಹಣ ಬಿಡುಗಡೆ ಮಾಡದ ಕಾರಣ ನಿಗದಿತ ಆಸ್ಪತ್ರೆಗಳಲ್ಲಿ ಚಾಂದಿನಿ ಅವರಿಗೆ ಸರಿಯಾಗಿ ಚಿಕಿತ್ಸೆ ಸಿಗಲಿಲ್ಲ ಎನ್ನಲಾಗಿದೆ. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ನಿನ್ನೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಅವರು ಸಾವನ್ನಪ್ಪಿದ್ದಾರೆ. ಸರಕಾರದ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಊಟದ ನಂತರ ಏಲಕ್ಕಿ ಜಗಿಯುವುದ್ರಿಂದ ಇದೆ ಆರೋಗ್ಯ ಪ್ರಯೋಜನಗಳು

ತೀರ ಅಪರೂಪದ ಈ ಕಾಯಿಲೆಯ ಲಕ್ಷಣ ಏನು?

ಹೈಪರ್-IgE ಸಿಂಡ್ರೋಮ್‌ ನಿಂದ ಬಳಲುತ್ತಿರುವವರಲ್ಲಿ ಚರ್ಮದ ಸಮಸ್ಯೆ ಸೇರಿ ಜೀರ್ಣಾಂಗ, ಉಸಿರಾಟದ ತೊಂದರೆ ಮತ್ತು ನರ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಚರ್ಮ ಕೆಂಪಾಗುವುದು, ಉಬ್ಬಸ, ಮಲಬದ್ಧತೆ, ಹೊಟ್ಟೆ ನೋವು, ಬ್ರೇನ್​ ಫಾಗ್​, ಹಲ್ಲಿನ ಸಮಸ್ಯೆಗಳು ಸೇರಿ ಹತ್ತು ಹಲವು ಲಕ್ಷಣಗಳು ಕಂಡುಬರುತ್ತವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ