AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯಸ್ಸಾದವರು ಮನೆಯಲ್ಲಿದ್ದಾರಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆಗಳು ಬರದಂತೆ ಎಚ್ಚರಿಕೆ ವಹಿಸಿ

ಕಳೆದ ಕೆಲವು ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಹವಾಮಾನ ನಿರಂತರವಾಗಿ ಬದಲಾಗುತ್ತಿದ್ದು, ಇದು ವೃದ್ಧರ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಅವರ ಆರೋಗ್ಯವನ್ನು ಹೇಗೆ ಕಾಳಜಿ ವಹಿಸಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಅದರಲ್ಲಿಯೂ ಮಧುಮೇಹ, ಹೈ ಬಿಪಿ, ಅಸ್ತಮಾ ಅಥವಾ ಹೃದಯ ಸಂಬಂಧಿ ಸಮಸ್ಯೆಗಳಿರುವ ಹಿರಿಯರು ಹೆಚ್ಚು ಜಾಗ್ರತೆ ವಹಿಸಬೇಕು ಎಂದು ವೈದ್ಯರು ಎಚ್ಚರಿಸಿದ್ದಾರೆ. ಹಾಗಿದ್ರೆ ಹಿರಿಯರ ಆರೋಗ್ಯ ಕಾಪಾಡಲು ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ವಯಸ್ಸಾದವರು ಮನೆಯಲ್ಲಿದ್ದಾರಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆಗಳು ಬರದಂತೆ ಎಚ್ಚರಿಕೆ ವಹಿಸಿ
Elderly HealthImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 13, 2026 | 9:34 PM

Share

ದೇಶದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ನಿರಂತರ ಬದಲಾವಣೆ ಕಾಣಿಸುತ್ತಿದ್ದು, ಇದರ ಪರಿಣಾಮ ಹಿರಿಯರ ಆರೋಗ್ಯದ (Elderly Health) ಮೇಲೆ ಹೆಚ್ಚು ಪರಿಣಾಮ ಬೀಳಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಬೇಸಿಗೆಯ ನಡುವೆ ಮಳೆ, ತಣ್ಣನೆಯ ಗಾಳಿ ಹಾಗೂ ತಾಪಮಾನದಲ್ಲಿ ಏರುಪೇರು ಕಾಣಿಸಿಕೊಳ್ಳುವುದರಿಂದ ದೇಹಕ್ಕೆ ಹೊಸ ಪರಿಸ್ಥಿತಿಗೆ ಹೊಂದಿಕೊಳ್ಳುವುದು ಕಷ್ಟವಾಗಬಹುದು. ವಯಸ್ಸು ಹೆಚ್ಚಾದಂತೆ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ವೈರಲ್ ಸೋಂಕು, ಜ್ವರ, ಶೀತ, ಉಸಿರಾಟದ ತೊಂದರೆ ಮತ್ತು ನೋವುಗಳ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಅದರಲ್ಲಿಯೂ ಮಧುಮೇಹ, ಹೈ ಬಿಪಿ, ಅಸ್ತಮಾ ಅಥವಾ ಹೃದಯ ಸಂಬಂಧಿ ಸಮಸ್ಯೆಗಳಿರುವ ಹಿರಿಯರು ಹೆಚ್ಚು ಜಾಗ್ರತೆ ವಹಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಯಾವ ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ಹವಾಮಾನ ಬದಲಾವಣೆಯ ಸಮಯದಲ್ಲಿ ಹಿರಿಯರಲ್ಲಿ ಶೀತ-ಜ್ವರ, ವೈರಲ್ ಇನ್ಫೆಕ್ಷನ್, ಉಸಿರಾಟದ ತೊಂದರೆ, ಸಂಧಿವಾತದ ನೋವು ಹಾಗೂ ದೌರ್ಬಲ್ಯದಂತಹ ಸಮಸ್ಯೆಗಳು ಹೆಚ್ಚಾಗಿ ಕಾಣಿಸಬಹುದು. ಕೆಲವರಲ್ಲಿ ರಕ್ತದೊತ್ತಡ ಏರುಪೇರು, ದೇಹದಲ್ಲಿ ನೀರಿನ ಕೊರತೆ, ಹಸಿವು ಕಡಿಮೆಯಾಗುವುದು ಹಾಗೂ ಹೆಚ್ಚು ಆಯಾಸ ಕಾಣಿಸಬಹುದು. ಹವಾಮಾನದಲ್ಲಿನ ತೀವ್ರ ಬದಲಾವಣೆಗಳಿಂದ ದೇಹದ ರೋಗನಿರೋಧಕ ಶಕ್ತಿ ಕುಂದಿ ಸೋಂಕುಗಳು ಬೇಗ ತಗುಲುವ ಸಾಧ್ಯತೆ ಹೆಚ್ಚುತ್ತದೆ.

ಇದನ್ನೂ ಓದಿ: ಜೆರಿಯಾಟ್ರಿಕ್ ಕಿಟ್ ಎಂದರೇನು? 60 ವರ್ಷ ಮೇಲ್ಪಟ್ಟವರು ಮನೆಯಲ್ಲಿದ್ದರೆ ಈ ಕಿಟ್ ಯಾಕೆ ಮುಖ್ಯ?

ಹಿರಿಯರ ಆರೋಗ್ಯದ ಕಡೆ ಹೇಗೆ ಗಮನ ಕೊಡಬೇಕು?

ಸಾಮಾನ್ಯವಾಗಿ ಹಿರಿಯರು ಹವಾಮಾನಕ್ಕೆ ತಕ್ಕ ಬಟ್ಟೆ ಧರಿಸುವುದು ಮುಖ್ಯ. ಸಾಕಷ್ಟು ನೀರು ಕುಡಿಯುವಂತೆ ನೋಡಿಕೊಳ್ಳಬೇಕು. ಆಹಾರದಲ್ಲಿ ಹಣ್ಣು, ತರಕಾರಿ, ಪ್ರೋಟೀನ್ ಹಾಗೂ ಪೌಷ್ಟಿಕಾಂಶ ಇರುವ ಪದಾರ್ಥಗಳನ್ನು ಸೇರಿಸಬೇಕು. ಮನೆಯೊಳಗಿನ ತಾಪಮಾನ ಸಮತೋಲನದಲ್ಲಿರಬೇಕು ಮತ್ತು ಅತಿಯಾದ ಚಳಿ ಅಥವಾ ಬಿಸಿ ಗಾಳಿಯಿಂದ ದೂರ ಇರುವಂತೆ ನೋಡಿಕೊಳ್ಳಬೇಕು. ಸಮಯಕ್ಕೆ ಸರಿಯಾಗಿ ಔಷಧಿ ತೆಗೆದುಕೊಳ್ಳುವುದು, ಸಾಕಷ್ಟು ವಿಶ್ರಾಂತಿ ಪಡೆಯುವುದು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಕೂಡ ಮುಖ್ಯ. ಕೈ ತೊಳೆಯುವ ಅಭ್ಯಾಸ ಮತ್ತು ಸ್ವಚ್ಛ ಆಹಾರ ಸೇವನೆಯಿಂದ ಸೋಂಕಿನ ಅಪಾಯ ಕಡಿಮೆ ಮಾಡಬಹುದು.

ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು?

ತೀವ್ರ ಜ್ವರ, ಉಸಿರಾಟದ ತೊಂದರೆ, ಎದೆನೋವು, ಅತಿಯಾದ ದೌರ್ಬಲ್ಯ, ತಲೆಸುತ್ತು ಅಥವಾ ಗೊಂದಲದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಸಮಯಕ್ಕೆ ಸರಿಯಾದ ಚಿಕಿತ್ಸೆ ಪಡೆದರೆ ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ