AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ಬದಲಾವಣೆಯಿಂದ ರೋಗನಿರೋಧಕ ಶಕ್ತಿ ಕುಂದದಂತೆ ನೋಡಿಕೊಳ್ಳಲು ಈ ಸಲಹೆಯನ್ನು ತಪ್ಪದೆ ಪಾಲಿಸಿ

ದೇಶದ ಹಲವಾರು ರಾಜ್ಯಗಳಲ್ಲಿ, ಕಳೆದ ಕೆಲವು ದಿನಗಳಿಂದ ಹವಾಮಾನವು ನಿರಂತರವಾಗಿ ಬದಲಾಗುತ್ತಿದೆ, ಇದು ರೋಗನಿರೋಧಕ ಶಕ್ತಿಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಬದಲಾಗುತ್ತಿರುವ ಹವಾಮಾನದ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿ ಪರಿಣಮಿಸಿರುತ್ತದೆ. ಹಾಗಾಗಿ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಸಾಲುವುದಿಲ್ಲ. ಹಾಗಾದ್ರೆ ಇಮ್ಯುನಿಟಿ ಕಡಿಮೆಯಾದಾಗ ದೇಹದಲ್ಲಿ ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ, ಈ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹವಾಮಾನ ಬದಲಾವಣೆಯಿಂದ ರೋಗನಿರೋಧಕ ಶಕ್ತಿ ಕುಂದದಂತೆ ನೋಡಿಕೊಳ್ಳಲು ಈ ಸಲಹೆಯನ್ನು ತಪ್ಪದೆ ಪಾಲಿಸಿ
Changing Weather And ImmunityImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 09, 2026 | 10:10 PM

Share

ದೇಶದ ಹಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ತೀವ್ರ ಬಿಸಿಲು, ಮತ್ತೊಮ್ಮೆ ಮಳೆ ಮತ್ತು ತಣ್ಣನೆಯ ಗಾಳಿ ದೇಹದ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಆರೋಗ್ಯ ತಜ್ಞರ ಪ್ರಕಾರ, ಇಂತಹ ಹವಾಮಾನ ಬದಲಾವಣೆಗಳಿಂದ ದೇಹದ ರೋಗನಿರೋಧಕ ಶಕ್ತಿ (Immunity) ಕುಂದುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಶೀತ, ಕೆಮ್ಮು, ಜ್ವರ ಮತ್ತು ವಿವಿಧ ಸೋಂಕುಗಳ ಅಪಾಯ ಹೆಚ್ಚಾಗಬಹುದು. ವೈದ್ಯರ ಪ್ರಕಾರ, ಹವಾಮಾನ ಪದೇಪದೇ ಬದಲಾಗುವಾಗ ದೇಹವು ಹೊಸ ಪರಿಸ್ಥಿತಿಗೆ ಹೊಂದಿಕೊಳ್ಳಲು ಹೆಚ್ಚು ಶ್ರಮಪಡಬೇಕಾಗುತ್ತದೆ. ಇದರಿಂದ ಇಮ್ಯುನಿಟಿ ಶಕ್ತಿ ಮೇಲೆ ಒತ್ತಡ ಉಂಟಾಗಿ ದೇಹ ಬೇಗ ದುರ್ಬಲಗೊಳ್ಳಬಹುದು. ಸಾಕಷ್ಟು ನಿದ್ರೆ ಮಾಡದೇ ಇರುವುದು, ಕಡಿಮೆ ನೀರು ಕುಡಿಯುವುದು ಮತ್ತು ಪೌಷ್ಟಿಕ ಆಹಾರ ಸೇವಿಸದೇ ಇರುವುದು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು. ಹಾಗಾದರೆ ಇಮ್ಯುನಿಟಿ ಕಡಿಮೆಯಾದಾಗ ದೇಹದಲ್ಲಿ ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ, ಈ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಇಮ್ಯುನಿಟಿ ದುರ್ಬಲವಾದಾಗ ಕಾಣಿಸುವ ಲಕ್ಷಣಗಳು:

ತಜ್ಞರ ಪ್ರಕಾರ, ಪದೇಪದೇ ಶೀತ ಮತ್ತು ಕೆಮ್ಮು ಕಾಣಿಸಿಕೊಳ್ಳುವುದು, ಬೇಗ ದಣಿವಾಗುವುದು, ಗಂಟಲು ನೋವು ಹಾಗೂ ದೇಹದಲ್ಲಿ ನೋವು ಕಾಣಿಸುವುದು ದುರ್ಬಲ ರೋಗನಿರೋಧಕ ಶಕ್ತಿಯ ಲಕ್ಷಣಗಳಾಗಿರಬಹುದು. ಗಾಯ ನಿಧಾನವಾಗಿ ಗುಣಮುಖವಾಗುವುದು, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಂಡುಬರುವುದು ಮತ್ತು ದಿನಪೂರ್ತಿ ಸುಸ್ತಾಗಿರುವುದು ಕೂಡ ಗಮನಿಸಬೇಕಾದ ಸೂಚನೆಗಳಾಗಿವೆ.

ಇದನ್ನೂ ಓದಿ: ಆರೋಗ್ಯವಾಗಿರಲು ಮಾತ್ರೆ ತಗೋಳೋದು ಬಿಟ್ಟು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವತ್ತ ಗಮನಕೊಡಿ!

ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

  • ಬದಲಾಗುತ್ತಿರುವ ಹವಾಮಾನದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸಮತೋಲನ ಆಹಾರ ಸೇವನೆ ಅತ್ಯಗತ್ಯ. ತಾಜಾ ಹಣ್ಣು, ತರಕಾರಿ ಮತ್ತು ವಿಟಮಿನ್‌ ಸಮೃದ್ಧ ಆಹಾರ ದೇಹವನ್ನು ಬಲವಾಗಿಡಲು ಸಹಾಯ ಮಾಡುತ್ತದೆ. ದಿನದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಸರಿಯಾಗಿ ನಿದ್ರೆ ಮಾಡುವುದು ಅಗತ್ಯ.
  • ಇದರ ಜೊತೆಗೆ, ನಿಯಮಿತ ವ್ಯಾಯಾಮ, ಸ್ವಚ್ಛತೆ ಮತ್ತು ಹವಾಮಾನಕ್ಕೆ ತಕ್ಕ ಬಟ್ಟೆ ಧರಿಸುವುದು ಮುಖ್ಯ. ಅತಿಯಾಗಿ ಜಂಕ್ ಫುಡ್ ಸೇವನೆ ಮತ್ತು ಅಸಮರ್ಪಕ ದಿನಚರಿಯನ್ನು ತಪ್ಪಿಸುವುದು ಬಹಳ ಉತ್ತಮ.
  • ಆರೋಗ್ಯ ತಜ್ಞರ ಪ್ರಕಾರ, ಪದೇಪದೇ ಅನಾರೋಗ್ಯ ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಸರಿಯಾದ ಜೀವನಶೈಲಿ ಮತ್ತು ಆರೋಗ್ಯಕರ ಅಭ್ಯಾಸಗಳಿಂದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ