AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Child Health: ಮಕ್ಕಳ ಕೆಮ್ಮು ಕಡಿಮೆ ಆಗ್ತಿಲ್ವಾ? ಈ ಮನೆಮದ್ದು ಟ್ರೈ ಮಾಡಿ

ಕೆಮ್ಮು, ನೆಗಡಿಯಂತಹ ಸಮಸ್ಯೆಗಳು ಮಕ್ಕಳಲ್ಲಿ ಕಾಣಿಸಿಕೊಂಡರೆ, ಅದು ವೇಗವಾಗಿ ಕಡಿಮೆಯಾಗುವುದಿಲ್ಲ. ಆದ್ದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಪದೇ ಪದೇ ಕಾಡುವ ಸೋಂಕುಗಳಿಂದ ಮುಕ್ತಿ ಪಡೆಯಲು ಈ ಸಿಂಪಲ್​​ ಮನೆಮದ್ದು ಅನುಸರಿಸಿ.

Child Health: ಮಕ್ಕಳ ಕೆಮ್ಮು ಕಡಿಮೆ ಆಗ್ತಿಲ್ವಾ? ಈ ಮನೆಮದ್ದು ಟ್ರೈ ಮಾಡಿ
Child Health
ಅಕ್ಷತಾ ವರ್ಕಾಡಿ
|

Updated on: Jun 19, 2024 | 7:55 PM

Share

ಚಳಿಗಾಲದ ಋತು ಪ್ರಾರಂಭವಾಗುತ್ತಿದ್ದಂತೆ, ಅನೇಕ ಆರೋಗ್ಯ ಸಮಸ್ಯೆಗಳು ಹರಡಲು ಪ್ರಾರಂಭವಾಗುತ್ತದೆ. ಜ್ವರ, ನೆಗಡಿ ಮತ್ತು ಕೆಮ್ಮಿನಂತಹ ಸೋಂಕುಗಳು ಮಕ್ಕಳು ಮತ್ತು ವಯಸ್ಕರಲ್ಲಿ ವೇಗವಾಗಿ ಹರಡುತ್ತದೆ. ಇದಕ್ಕೆ ಪ್ರಮುಖ ಕಾರಣ ಶೀತ ಋತುವಿನಲ್ಲಿ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುವುದು. ಕೆಮ್ಮು, ನೆಗಡಿಯಂತಹ ಸಮಸ್ಯೆಗಳು ಮಕ್ಕಳಲ್ಲಿ ಕಾಣಿಸಿಕೊಂಡರೆ, ಅದು ವೇಗವಾಗಿ ಕಡಿಮೆಯಾಗುವುದಿಲ್ಲ. ಆದ್ದರಿಂದ ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಪದೇ ಪದೇ ಕಾಡುವ ಸೋಂಕುಗಳಿಂದ ಮುಕ್ತಿ ಪಡೆಯಲು ಈ ಸಿಂಪಲ್​​ ಸಲಹೆಯನ್ನು ಅನುಸರಿಸಿ.

ಚಳಿಗಾಲದಲ್ಲಿ ಕಾಡುವ ಸೋಂಕುಗಳಿಂದ ಮುಕ್ತಿ ಪಡೆಯಲು ಈ ಸಿಂಪಲ್​​  ಮನೆಮದ್ದು:

ತುಳಸಿ:

ತುಳಸಿ ಗಿಡ ಎಲ್ಲರ ಮನೆಯಲ್ಲೂ ಸಾಮಾನ್ಯ. ಹಿಂದೂ ಸಂಪ್ರದಾಯದಲ್ಲಿ ತುಳಸಿಗೆ ತುಂಬಾ ಪ್ರಮುಖ್ಯತೆ ಇದೆ. ಇದರ ಜೊತೆಗೆ ತುಳಸಿ ಎಲೆಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನಿಮ್ಮ ಮಕ್ಕಳು ಕೆಮ್ಮಿನಿಂದ ಬಳಲುತ್ತಿದ್ದರೆ, ತುಳಸಿ ಎಲೆಯ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿನ್ನಲು ಕೊಡಿ. ಈ ರೀತಿ ತುಳಸಿ ಎಲೆ ಜಗಿಯುವುದರಿಂದ ಪದೇ ಪದೇ ಕಾಡುವ ಕೆಮ್ಮಿನ ಸಮಸ್ಯೆ ನಿವಾರಣೆಯಾಗುತ್ತದೆ. ಇದು ಗಂಟಲು ನೋವನ್ನು ಸಹ ಕಡಿಮೆ ಮಾಡುತ್ತದೆ.

ನೀಲಗಿರಿ ಎಣ್ಣೆ:

ನೀಲಗಿರಿ ಎಣ್ಣೆ ಇಂದು ಮಾರುಕಟ್ಟೆಯಲ್ಲಿ ವ್ಯಾಪಕವಾಗಿ ಲಭ್ಯವಿದೆ. ನಿಮ್ಮ ಮಕ್ಕಳು ನೆಗಡಿ ಮತ್ತು ಕೆಮ್ಮಿನಿಂದ ಬಳಲುತ್ತಿದ್ದರೆ, ಮಲಗುವ ಮುನ್ನ ಎರಡು ಹನಿ ನೀಲಗಿರಿ ಎಣ್ಣೆಯನ್ನು ದಿಂಬಿಗೆ ಹಾಕಿ. ಈರೀತಿ ನಿಲಗಿರಿ ಎಣ್ಣೆಯ ಸುವಾಸನೆಯೊಂದಿಗೆ ದೀರ್ಘ ಉಸಿರು ತೆಗೆದುಕೊಳ್ಳುವುದರಿಂದ ಮೂಗು ಕಟ್ಟುವ ಸಮಸ್ಯೆ ಮಾತ್ರವಲ್ಲದೇ ಪದೇ ಪದೇ ಕಾಡುವ ಕೆಮ್ಮಿನ ಸಮಸ್ಯೆ ನಿವಾರಣೆಯಾಗುತ್ತದೆ.

ಇದನ್ನೂ ಓದಿ: ಮಕ್ಕಳಲ್ಲಿ ಬಾಯಿಯ ಹುಣ್ಣು ಉಂಟಾಗದಂತೆ ತಡೆಯುವುದು ಹೇಗೆ?

ಅರಶಿನ:

ಅರಿಶಿನವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಬೆಚ್ಚನೆಯ ಹಾಲಿಗೆ ಚಿಟಿಕೆ ಅರಿಶಿನ ಬೆರೆಸಿ ಕುಡಿದರೆ ಗಂಟಲು ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ. ಜೊತೆಗೆ ದೇಹದಲ್ಲಿ ರೋಗನಿರೋಧಕ ಶಕ್ತಿಯೂ ಸುಧಾರಿಸುತ್ತದೆ. ಇದು ಇತರ ಆರೋಗ್ಯ ಸಮಸ್ಯೆಗಳು ಮತ್ತು ಋತುಮಾನದ ಕಾಯಿಲೆಗಳನ್ನು ತಡೆಯುತ್ತದೆ.

ಬೆಳ್ಳುಳ್ಳಿ:

ಬೆಳ್ಳುಳ್ಳಿ ಮತ್ತು ಜೇನುತುಪ್ಪವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಒಂದು ಎಸಳು ಬೆಳ್ಳುಳ್ಳಿಯನ್ನು ನುಣ್ಣಗೆ ಕತ್ತರಿಸಿ ಜೇನುತುಪ್ಪದೊಂದಿಗೆ ಸೇವಿಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: