AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cold Coffee Side Effects: ನಿಮಗೆ ನಿತ್ಯ ಕೋಲ್ಡ್​ ಕಾಫಿ ಕುಡಿಯುವ ಅಭ್ಯಾಸವಿದ್ದರೆ ಬಿಟ್ಟುಬಿಡಿ, ಈ ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಬಹುದು

ದೆಹಲಿ ಸೇರಿದಂತೆ ಭಾರತದ ಅನೇಕ ರಾಜ್ಯಗಳಲ್ಲಿ, ಈ ಸಮಯದಲ್ಲಿ ಶಾಖದ ಅಲೆಯು ಹೆಚ್ಚಾಗಿದೆ, ಏರುತ್ತಿರುವ ತಾಪಮಾನದಿಂದ ಜನರ ಸ್ಥಿತಿ ಶೋಚನೀಯವಾಗಿದೆ. ಬಿಸಿಲಿನ ತಾಪದಿಂದ ಮುಕ್ತಿ ಪಡೆಯಲು ಜನರು ಹಲವು ವಿಧಾನಗಳನ್ನು ಅನುಸರಿಸುತ್ತಿದ್ದಾರೆ.

Cold Coffee Side Effects: ನಿಮಗೆ ನಿತ್ಯ ಕೋಲ್ಡ್​ ಕಾಫಿ ಕುಡಿಯುವ ಅಭ್ಯಾಸವಿದ್ದರೆ ಬಿಟ್ಟುಬಿಡಿ, ಈ ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಬಹುದು
ಕೋಲ್ಡ್​ ಕಾಫಿ
ನಯನಾ ರಾಜೀವ್
|

Updated on: May 23, 2023 | 9:00 AM

Share

ದೆಹಲಿ ಸೇರಿದಂತೆ ಭಾರತದ ಅನೇಕ ರಾಜ್ಯಗಳಲ್ಲಿ, ಈ ಸಮಯದಲ್ಲಿ ಶಾಖದ ಅಲೆಯು ಹೆಚ್ಚಾಗಿದೆ, ಏರುತ್ತಿರುವ ತಾಪಮಾನದಿಂದ ಜನರ ಸ್ಥಿತಿ ಶೋಚನೀಯವಾಗಿದೆ. ಬಿಸಿಲಿನ ತಾಪದಿಂದ ಮುಕ್ತಿ ಪಡೆಯಲು ಜನರು ಹಲವು ವಿಧಾನಗಳನ್ನು ಅನುಸರಿಸುತ್ತಿದ್ದಾರೆ. ಜನರು ವಿಶೇಷವಾಗಿ ಈ ಋತುವಿನಲ್ಲಿ ತಮ್ಮ ಆಹಾರದಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಆರೋಗ್ಯವಾಗಿರುತ್ತಾರೆ. ಬೇಸಿಗೆಯಲ್ಲಿ ಹೆಚ್ಚಿನವರು ಇಂತಹ ಆಹಾರ ಪದಾರ್ಥಗಳನ್ನು ತಮ್ಮ ಆಹಾರದಲ್ಲಿ ಸೇರಿಸುತ್ತಾರೆ.

ಇವುಗಳಲ್ಲಿ ಕೋಲ್ಡ್​ ಕಾಫಿ ಕೂಡ ಒಂದು, ಅನೇಕ ಮಂದಿ ಬೇಸಿಗೆಯಲ್ಲಿ ಹೆಚ್ಚಾಗಿ ಕೋಲ್ಡ್​ ಕಾಫಿ ಕುಡಿಯುತ್ತಾರೆ. ಆದರೆ ಈ ಕೋಲ್ಡ್​ ಕಾಫಿ ಆರೋಗ್ಯಕ್ಕೆ ಎಷ್ಟು ಮಾರಕ ಎಂಬುದು ನಿಮಗೆ ತಿಳಿದಿದೆಯೇ?.

ಸೆಕೆಯಿಂದ ಉಪಶಮನ ನೀಡುವ ಕೋಲ್ಡ್ ಕಾಫಿ ಅನೇಕರಿಗೆ ಪ್ರಿಯವಾಗಿದೆ. ಇದನ್ನು ಟೇಸ್ಟಿ ಮಾಡಲು, ಅದರಲ್ಲಿ ಹೆಚ್ಚಿನ ಪ್ರಮಾಣದ ಸಕ್ಕರೆಯನ್ನು ಬಳಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಕೋಲ್ಡ್ ಕಾಫಿಯನ್ನು ಅತಿಯಾಗಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಬಹುದು, ಇದು ಟೈಪ್ 2 ಮಧುಮೇಹಕ್ಕೆ ಕಾರಣವಾಗಬಹುದು.

ಕೋಲ್ಡ್ ಕಾಫಿಯಲ್ಲಿರುವ ಕೆಫೀನ್ ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುತ್ತಿದ್ದರೆ, ನಿಮ್ಮ ನಿದ್ರೆಯ ಚಕ್ರವು ಹದಗೆಡಬಹುದು ಮತ್ತು ನಿದ್ರೆಯ ಕೊರತೆಯು ಅನೇಕ ರೋಗಗಳಿಗೆ ಕಾರಣವಾಗಬಹುದು.

ನೀವು ಪ್ರತಿದಿನ ಸಾಕಷ್ಟು ಕೋಲ್ಡ್ ಕಾಫಿ ಕುಡಿಯುತ್ತಿದ್ದರೆ, ನೀವು ಆತಂಕಕ್ಕೆ ಬಲಿಯಾಗಬಹುದು. ನೀವು ನಿಯಮಿತವಾಗಿ ಕೋಲ್ಡ್ ಕಾಫಿ ಕುಡಿಯುತ್ತಿದ್ದರೆ, ನೀವು ತಲೆನೋವು ಮತ್ತು ತಲೆತಿರುಗುವಿಕೆಯ ಬಗ್ಗೆ ದೂರು ನೀಡಬಹುದು. ಅಲ್ಲದೆ, ಇದರ ಅತಿಯಾದ ಸೇವನೆಯಿಂದ, ನೀವು ಸದಾ ಸುಸ್ತಾಗಿರುವಂತೆ ಭಾಸವಾಗುವುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್