Heart Blockage: ಚಳಿಗಾಲದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಈ ಸಲಹೆಗಳನ್ನು ಅನುಸರಿಸಿ

ಕೆಟ್ಟ ಆಹಾರ ಪದ್ಧತಿ, ವ್ಯಾಯಾಮದ ಕೊರತೆ ಮತ್ತು ಜಂಕ್ ಫುಡ್ ಸೇವನೆಯು ನಿಮ್ಮನ್ನು ನಾನಾ ರೀತಿಯ ರೋಗಗಳಿಗೆ ಆಹ್ವಾನ ನೀಡುತ್ತಿದೆ. ಬಳಿಕ ಇವು ಹೃದಯ ಸಂಬಂಧಿತ ಸಮಸ್ಯೆಗೆ ಕಾರಣವಾಗುತ್ತದೆ. ಅಂದರೆ, ನಿಮ್ಮ ಜೀವನಶೈಲಿ ಹೃದಯಾಘಾತಕ್ಕೆ ಕಾರಣವಾಗುತ್ತದೆ. ಹಾಗಾಗಿ, ಇಂತಹ ಪರಿಸ್ಥಿತಿಯಲ್ಲಿ, ಆರೋಗ್ಯ ಕಾಪಾಡಿಕೊಳ್ಳಲು ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾಗಿದೆ. ಇದರಿಂದ ಹೃದಯವನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳಬಹುದು. ಹಾಗಾದರೆ ಜೀವನಶೈಲಿಯಲ್ಲಿ ಯಾವ ರೀತಿಯ ಬದಲಾವಣೆಗಳನ್ನು ಮಾಡಿಕೊಳ್ಳಬೇಕು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Heart Blockage: ಚಳಿಗಾಲದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಈ ಸಲಹೆಗಳನ್ನು ಅನುಸರಿಸಿ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 22, 2024 | 5:57 PM

ಚಳಿಗಾಲದ ಸಮಯದಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯು ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿರುವುದು ಬೆಳಕಿಗೆ ಬಂದಿದೆ. ತಜ್ಞರು ಕೂಡ ಆರೋಗ್ಯ ಕಾಪಾಡಿಕೊಳ್ಳುವಂತೆ ಅನೇಕ ರೀತಿಯ ಆರೋಗ್ಯ ಸಲಹೆಗಳನ್ನು ನೀಡುತ್ತಿದ್ದಾರೆ. ಈ ಹಿಂದೆ, ಸಾಮಾನ್ಯವಾಗಿ 50 ವರ್ಷದ ನಂತರದಲ್ಲಿ ಹೃದಯಾಘಾತ ಪ್ರಕರಣಗಳು ಕಂಡು ಬರುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಎಲ್ಲಾ ವಯಸ್ಸಿನವರಲ್ಲಿಯೂ ಈ ಹೃದಯಾಘಾತ ಪ್ರಕರಣಗಳು ಕಂಡು ಬರುತ್ತಿದೆ. ಹಾಗಾಗಿ ಆದಷ್ಟು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಅದರಲ್ಲಿಯೂ ಈ ಚಳಿಗಾಲದಲ್ಲಿ ಹೃದ್ರೋಗ ಸಮಸ್ಯೆಗಳು ವೇಗವಾಗಿ ಹೆಚ್ಚಾಗುತ್ತಿದ್ದು ನಮ್ಮ ಜೀವನಶೈಲಿಯಲ್ಲಿ ಹಲವಾರು ರೀತಿಯ ಸುಧಾರಣೆ ಮಾಡಿಕೊಳ್ಳಬೇಕಾಗಿದೆ.

ಕೆಟ್ಟ ಆಹಾರ ಪದ್ಧತಿ, ವ್ಯಾಯಾಮದ ಕೊರತೆ ಮತ್ತು ಜಂಕ್ ಫುಡ್ ಸೇವನೆಯು ನಿಮ್ಮನ್ನು ನಾನಾ ರೀತಿಯ ರೋಗಗಳಿಗೆ ಆಹ್ವಾನ ನೀಡುತ್ತಿದೆ. ಬಳಿಕ ಇವು ಹೃದಯ ಸಂಬಂಧಿತ ಸಮಸ್ಯೆಗೆ ಕಾರಣವಾಗುತ್ತದೆ. ಅಂದರೆ, ನಿಮ್ಮ ಜೀವನಶೈಲಿ ಹೃದಯಾಘಾತಕ್ಕೆ ಕಾರಣವಾಗುತ್ತದೆ. ಹಾಗಾಗಿ, ಇಂತಹ ಪರಿಸ್ಥಿತಿಯಲ್ಲಿ, ಆರೋಗ್ಯ ಕಾಪಾಡಿಕೊಳ್ಳಲು ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾಗಿದೆ. ಇದರಿಂದ ಹೃದಯವನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳಬಹುದು. ಹಾಗಾದರೆ ಜೀವನಶೈಲಿಯಲ್ಲಿ ಯಾವ ರೀತಿಯ ಬದಲಾವಣೆಗಳನ್ನು ಮಾಡಿಕೊಳ್ಳಬೇಕು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ನಡಿಗೆ: ಮೊದಲನೆಯದಾಗಿ, ನೀವು ಪ್ರತಿನಿತ್ಯ ವಾಕಿಂಗ್ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಿ. ನೀವು ಹೆಚ್ಚು ಕಷ್ಟಕರವಾದ ವ್ಯಾಯಾಮಗಳನ್ನು ಮಾಡುವುದು ಮುಖ್ಯವಲ್ಲ. ಆದರೆ ನೀವು ದಿನಕ್ಕೆ ಕನಿಷ್ಠ 8 ರಿಂದ 9 ಸಾವಿರ ಹೆಜ್ಜೆಗಳನ್ನು ನಡೆಯದಿದ್ದರೆ, ಅದು ನಿಮ್ಮ ಹೃದಯದ ಆರೋಗ್ಯಕ್ಕೆ ಹಾನಿ ಮಾಡುತ್ತದೆ ಎಂಬುದನ್ನು ಮರೆಯಬೇಡಿ. ಪ್ರತಿದಿನ ವ್ಯಾಯಾಮ ಮತ್ತು ವಾಕಿಂಗ್ ಮಾಡುವುದರಿಂದ ತೂಕ ಕಡಿಮೆ ಆಗುತ್ತದೆ ಜೊತೆಗೆ ಈ ಅಭ್ಯಾಸ ಹೃದ್ರೋಗ, ಪಾರ್ಶ್ವವಾಯು, ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಿಸುತ್ತದೆ.

ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಿ: ಬೊಜ್ಜು ಒಂದು ಅಥವಾ ಎರಡಲ್ಲ, ಇದು ನೂರಾರು ರೋಗಗಳಿಗೆ ಕಾರಣವಾಗುತ್ತದೆ. ಬೊಜ್ಜು ಮಧುಮೇಹ, ಅಧಿಕ ರಕ್ತದೊತ್ತಡದಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಈ ಸಮಯದಲ್ಲಿ ನಿಮ್ಮ ತೂಕವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ವಿಶೇಷವಾಗಿ, ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿಯೂ ಅನಗತ್ಯ ತೂಕ ಹೆಚ್ಚಳವಾಗುತ್ತಿರುವುದು ಮುಂದೆ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ನಿಮ್ಮ ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ಇರಲಿ.

ಇದನ್ನೂ ಓದಿ: ಸೂರ್ಯನ ಕಿರಣಗಳಿಂದ ವಿಟಮಿನ್ ಡಿ ಯಾವ ಸಮಯದಲ್ಲಿ ಹೆಚ್ಚು ಉತ್ಪತ್ತಿಯಾಗುತ್ತದೆ?

ಸಂಸ್ಕರಿಸಿದ ಆಹಾರ ಸೇವನೆ ಮಾಡುವುದನ್ನು ತಪ್ಪಿಸಿ: ನೀವು ಹೊರಗಿನ ಆಹಾರವನ್ನು ಹೆಚ್ಚು ಸೇವಿಸಿದರೆ, ನಿಮ್ಮ ಹೃದಯದ ಆರೋಗ್ಯ ಅಷ್ಟೇ ವೇಗವಾಗಿ ಹಾಳಾಗುತ್ತದೆ. ಕರಿದ ಆಹಾರಗಳು, ಸಾಸೇಜ್ಗಳು, ಬೆಣ್ಣೆ ಮತ್ತು ಕೇಕ್ಗಳಂತಹ ಕೊಬ್ಬಿನಿಂದ ತಯಾರಾದ ಆಹಾರಗಳು ಎಲ್ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ವೇಗವಾಗಿ ಹೆಚ್ಚಿಸುತ್ತವೆ, ಇದು ಹೃದಯದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ವಿರಾಮ ತೆಗೆದುಕೊಳ್ಳಿ: ನಿರಂತರವಾಗಿ ಕೆಲಸದಲ್ಲಿ ನಿರತರಾಗಬೇಡಿ. ರಜೆ ತೆಗೆದುಕೊಳ್ಳಿ, ಹೊರಗೆ ಹೋಗಿ ಮತ್ತು ನಿಮಗೆ ಇಷ್ಟವಾದದ್ದನ್ನು ಮಾಡಿ. ಹೀಗೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ