Start Fruit Benefits: ಮಲಬದ್ಧತೆಯಿಂದ ತೂಕ ಇಳಿಕೆವರೆಗೆ, ಸ್ಟಾರ್​ಫ್ರೂಟ್​ನ ಪ್ರಯೋಜನಗಳ ತಿಳಿಯಿರಿ

ಮಲಬದ್ಧತೆಯನ್ನು ಹೋಗಲಾಡಿಸುವುದರಿಂದ ಹಿಡಿದು ತೂಕ ಇಳಿಕೆವರೆಗೂ ಸ್ಟಾರ್ ಫ್ರೂಟ್​ ಅನೇಕ ಪ್ರಯೋಜನಗಳನ್ನು ನೀಡುತ್ತದೆ.

Start Fruit Benefits: ಮಲಬದ್ಧತೆಯಿಂದ ತೂಕ ಇಳಿಕೆವರೆಗೆ, ಸ್ಟಾರ್​ಫ್ರೂಟ್​ನ ಪ್ರಯೋಜನಗಳ ತಿಳಿಯಿರಿ
Star Fruit
Follow us
TV9 Web
| Updated By: ನಯನಾ ರಾಜೀವ್

Updated on: Nov 01, 2022 | 8:00 AM

ಮಲಬದ್ಧತೆಯನ್ನು ಹೋಗಲಾಡಿಸುವುದರಿಂದ ಹಿಡಿದು ತೂಕ ಇಳಿಕೆವರೆಗೂ ಸ್ಟಾರ್ ಫ್ರೂಟ್​ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಕ್ಯಾರಂಬೋಲಾ ಅಥಾವಾ ಸ್ಟಾರ್ ಫ್ರೂಟ್ ಅಥವಾ ಕಮ್ರಖ್ ಎಂದು ಕೂಡ ಇದನ್ನು ಕರೆಯುತ್ತಾರೆ. ಇದು ಹುಳಿಮಿಶ್ರಿತ ಸಿಹಿ ಹಣ್ಣಾಗಿದ್ದು, ಈ ಹಣ್ಣಿನಲ್ಲಿ ಅನೇಕ ಪೋಷಕಾಂಶಗಳಿವೆ.

ನಿಮ್ಮ ರೋಗ ನಿರೋಧಕ ಶಕ್ತಿಯು ಕಡಿಮೆಯಾಗಿ ಅನೇಕ ರೋಗಗಳು ನಿಮ್ಮನ್ನು ಆವರಿಸುವ ಸಾಧ್ಯತೆ ಹೆಚ್ಚಿದೆ. ನಿಮ್ಮಲ್ಲಿ ಶಕ್ತಿಯನ್ನು ತುಂಬಿ ಚೈತನ್ಯವನ್ನು ಮರಳುವಂತೆ ಮಾಡುವ ಹಣ್ಣುಗಳಲ್ಲಿ ಸ್ಟಾರ್ ಫ್ರೂಟ್ ಕೂಡಾ ಒಂದು.

ಈ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಇದ್ದು, ಹಾಗೆಯೇ ಹೆಚ್ಚಿನ ಫೈಬರ್ ಅಂಶ ಕಂಡು ಬರುತ್ತವೆ. ಅದೇ ರೀತಿ ವಿಟಮಿನ್ ಬಿ, ವಿಟಮಿನ್ ಸಿ, ಸೋಡಿಯಂ, ಪೊಟ್ಯಾಸಿಯಮ್, ಕಬ್ಬಿಣ ಮತ್ತು ಅನೇಕ ಪ್ರಮುಖ ಉತ್ಕರ್ಷಣ ನಿರೋಧಕಗಳಿಂದ ಈ ಹಣ್ಣು ಸಮೃದ್ಧವಾಗಿದೆ. ಈ ಹಣ್ಣಿನ ಸೇವನೆಯಿಂದ ಸಿಗುವ ಕೆಲ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ.

ಉಸಿರಾಟವನ್ನು ಸುಗಮಗೊಳಿಸುತ್ತದೆ: ಗಂಟಲು ನೋವು ಕಡಿಮೆ ಮಾಡಿ, ಉಸಿರಾಟ ವ್ಯವಸ್ಥೆಯನ್ನು ಸುಗಮಗೊಳಿಸಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಸುಧಾರಿಸುತ್ತದೆ: ಈ ಹಣ್ಣು ನಿಮ್ಮ ದೇಹದಲ್ಲಿ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಬಹಳಷ್ಟು ಫೈಬರ್ ಇದ್ದು, ಇದು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ನಿಮ್ಮ ಮಲಬದ್ಧತೆಯ ಸಮಸ್ಯೆಯನ್ನು ಪರಿಹರಿಸಲು ಇದು ಸಹಕಾರಿಯಾಗಿದೆ.

ಸೋಂಕಿನ ವಿರುದ್ಧ ಹೋರಾಡಲು ಸಹಕಾರಿ: ಈ ಹಣ್ಣು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗೆಯೇ ಹೃದಯವನ್ನು ಜೋಪಾನವಾಗಿಡುತ್ತದೆ.

ತೂಕ ಇಳಿಕೆಗೆ ಸಹಕಾರಿ: ಈ ಸ್ಟಾರ್ ಫ್ರೂಟ್​ನಲ್ಲಿ ಕ್ಯಾಲೊರಿ ಕಡಿಮೆ ಇರುವ ಕಾರಣ ತೂಕ ಇಳಿಕೆಗೆ ಸಹಾಯ ಮಾಡುತ್ತದೆ.

ಉರಿಯೂತ ಕಡಿಮೆ ಮಾಡುತ್ತದೆ: ಸ್ಟಾರ್​ ಫ್ರೂಟ್​ ವಿಟಮಿನ್ ಸಿ ಯ ಉತ್ತಮ ಮೂಲವಾಗಿದೆ. ಜ್ವರ ಮತ್ತು ನೆಗಡಿಯ ಸಮಸ್ಯೆಯನ್ನು ದೂರ ಮಾಡುತ್ತದೆ. ವಿಟಮಿನ್ ಸಿ ದೇಹದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಹಾಗೆಯೇ ಇದು ಚರ್ಮದ ಉರಿಯೂತವನ್ನು ಕಡಿಮೆ ಮಾಡಲು ಸಹಾಯಕ.

ಹೃದಯ ಆರೊಗ್ಯ ಕಾಪಾಡುತ್ತೆ: ಸ್ಟಾರ್ ಹಣ್ಣು ರಕ್ತದೊತ್ತಡವನ್ನು ನಿಯಂತ್ರಿಸುವ ಸೋಡಿಯಂ ಮತ್ತು ಪೊಟ್ಯಾಸಿಯಮ್ನಂತಹ ಪ್ರಮುಖ ಖನಿಜಗಳಿಂದ ಸಮೃದ್ಧವಾಗಿದೆ. ಇದು ಕ್ಯಾಲ್ಸಿಯಂ ಅನ್ನು ಸಹ ಹೊಂದಿದ್ದು, ಹೃದಯಕ್ಕೆ ತುಂಬಾ ಪ್ರಯೋಜನಕಾರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ