Sign In

By signing in or creating an account, you agree with Associated Broadcasting Company's Terms & Conditions and Privacy Policy.

Garlic Health Benefits: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸಿ ,ಹಲವಾರು ಪ್ರಯೋಜನಗಳನ್ನು ಪಡೆಯಿರಿ

ಬೆಳ್ಳುಳ್ಳಿಯು ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಹಲವಾರು ಗುಣಗಳನ್ನು ಹೊಂದಿದೆ. ಅಂತಹ ಬೆಳ್ಳುಳ್ಳಿಯನ್ನು ವಿಶೇಷವಾಗಿ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ತುಂಬಾ ಒಳ್ಳೆಯದು. ಅದರ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.

Garlic Health Benefits: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸಿ ,ಹಲವಾರು ಪ್ರಯೋಜನಗಳನ್ನು ಪಡೆಯಿರಿ
Consume garlic Image Credit source: Pinterest
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Oct 06, 2023 | 6:26 AM

ಬೆಳ್ಳುಳ್ಳಿಯು ಹಲವಾರು ಔಷಧೀಯ ಗುಣಗಳಿಂದ ಕೂಡಿದ ಮಸಾಲ ಪದಾರ್ಥವಾಗಿದೆ. ಸಾಮಾನ್ಯವಾಗಿ ಇದನ್ನು ಎಲ್ಲಾ ಅಡುಗೆಗಳಲ್ಲೂ ಬಳಸಲಾಗುತ್ತದೆ. ಆದರೆ ಸರಳವಾಗಿ ಕಾಣುವ ಈ ಬೆಳ್ಳುಳ್ಳಿಯು  ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾದ ಹಲವಾರು ಅದ್ಭುತ ಗುಣಗಳನ್ನು ಹೊಂದಿದೆ. ಕಬ್ಬಿಣಾಂಶ, ಕ್ಯಾಲ್ಸಿಯಂ, ಮತ್ತು ಪೊಟ್ಯಾಸಿಯಂ ಮುಂತಾದ ಪೋಷಕಾಂಶಗಳು ಬೆಳ್ಳುಳ್ಳಿಯಲ್ಲಿ ಕಂಡುಬರುತ್ತವೆ. ಇದರೊಂದಿಗೆ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಗುಣಗಳು ಬೆಳ್ಳುಳ್ಳಿಯಲ್ಲಿವೆ. ಅಲ್ಲದೆ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಅನೇಕ ರೀತಿಯ ಖನಿಜಗಳು, ಜೀವಸತ್ವಗಳು ಮತ್ತು ಹಲವಾರು ಪೋಷಕಾಂಶಗಳು ಬೆಳ್ಳುಳ್ಳಿಯಲ್ಲಿ ಕಂಡುಬರುತ್ತದೆ. ಹಾಗಾಗಿ ಬೆಳ್ಳುಳ್ಳಿಯ ಸೇವನೆಯಿಂದ ಅನೇಕ ಅಪಾಯಕಾರಿ ಕಾಯಿಲೆಗಳನ್ನು ಗುಣಪಡಿಸಬಹುದು ಎಂದು ವೈಜ್ಞಾನಿಕ ಅಧ್ಯಯನಗಳು ತೋರಿಸಿವೆ. ಇದು ದೇಹದಲ್ಲಿ ಸಂಗ್ರಹವಾಗುವ ವಿಷವನ್ನು ತೆಗೆದುಹಾಕುವುದಲ್ಲದೆ ರಕ್ತವನ್ನು ಶುದ್ಧೀಕರಿಸಲು ಮತ್ತು ಖಿನ್ನತೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗಾದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಎಸಳನ್ನು ಸೇವಿಸುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ.

ಪ್ರತಿದಿನ  ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವನೆ ಮಾಡುವುದರಿಂದ ಲಭಿಸುವ ಪ್ರಯೋಜನಗಳು:

ಬೆಳ್ಳುಳ್ಳಿಯು  ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಹಲವಾರು ಗುಣಗಳನ್ನು ಹೊಂದಿದೆ. ಆದರೆ ಈ ಗುಣಗಳ ಗರಿಷ್ಠ ಪ್ರಯೋಜನವನ್ನು ಪಡೆಯಲು ಬೆಳ್ಳುಳ್ಳಿಯನ್ನು ಸರಿಯಾದ ರೀತಿಯಲ್ಲಿ ಮತ್ತು ಸರಿಯಾದ ಸಮಯದಲ್ಲಿ ತಿನ್ನಬೇಕು. ತಜ್ಞರ ಪ್ರಕಾರ, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದು ಹೆಚ್ಚು ಪ್ರಯೋಜನಕಾರಿಯಾಗಿದೆ. ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ಅದರ ಅಂಶಗಳು ದೇಹದಲ್ಲಿ ಸುಲಭವಾಗಿ ಹೀರಲ್ಪಡುತ್ತವೆ. ಮತ್ತು ಗರಿಷ್ಠ ಪ್ರಯೋಜನವನ್ನು ನೀಡುತ್ತವೆ. ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದಲ್ಲದೆ, ಹಲವಾರು ಹೊಟ್ಟೆ ಸಂಬಂಧಿ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಆದ್ದರಿಂದ ನೀವು ನಿಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಲು ಬಯಸಿದರೆ, ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದರಿಂದ ಎರಡು ಎಸಳು ಬೆಳ್ಳುಳ್ಳಿಯನ್ನು ತಿನ್ನಿರಿ.

ತೂಕ ನಿಯಂತ್ರಿಸಲು ಸಹಕಾರಿ:

ಬದಲಾಗುತ್ತಿರುವ ಜೀವನಶೈಲಿಯ ಕಾರಣ ಅನೇಕ ಜನರು ಸ್ಥೂಲಕಾಯತೆ ಅಥವಾ ದೇಹ ತೂಕ ಹೆಚ್ಚಾಗುವಂತಹ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೆಚ್ಚುತ್ತಿರುವ ದೇಹ ತೂಕದಿಂದ ನೀವು ಸಹ ತೊಂದರೆಗೊಳಗಾಗಿದ್ದರೆ, ಬೆಳಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿಯನ್ನು ಸೇವಿಸಿ. ಇದು ತೂಕವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.

ಇದನ್ನೂ ಓದಿ: ಮಧುಮೇಹಿಗಳು ಏಕೆ ಬೆಂಡೆಕಾಯಿ ಸೇವನೆ ಮಾಡಬೇಕು? ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು?

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ:

ನೀವು ಮಲಬದ್ಧತೆ, ಗ್ಯಾಸ್, ಅಸಿಡಿಟಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ, ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವನೆ ಮಾಡಿ. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ನಿಮ್ಮ ಹೊಟ್ಟೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ:

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬಹುದು. ಬೆಳ್ಳುಳ್ಳಿಯಲ್ಲಿ ಉತ್ಕರ್ಷಣ ನಿರೋಧಕಗಳಿದ್ದು, ಇದು ರಕ್ತದೊತ್ತಡವನ್ನು ಸ್ಥಿರವಾಗಿಡಲು ಸಹಕಾರಿಯಾಗಿದೆ. ಅಲ್ಲದೆ ಇದು ರಕ್ತ ಹೆಪ್ಪುಗಟ್ಟುವಿಕೆಯ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.

ತ್ವಚೆಯ ಆರೋಗ್ಯವನ್ನು ಸುಧಾರಿಸುತ್ತದೆ:

ಬೆಳ್ಳುಳ್ಳಿಯನ್ನು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳು ಕಂಡುಬರುತ್ತವೆ, ಇದು ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ತ್ವಚೆಯ ತೇವಾಂಶವನ್ನು ಕಾಪಾಡಲು ಸಹಕಾರಿಯಾಗಿದೆ.

ಕೊಲೆಸ್ಟ್ರಾಲ್ ಮತ್ತು ಹೃದ್ರೋಗಿಗಳಿಗೂ ಪ್ರಯೋಜನಕಾರಿಯಾಗಿದೆ:

ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಹಕಾರಿಯಾಗಿದೆ. ಬೆಳ್ಳುಳ್ಳಿಯು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದ್ದು, ಅದು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ