AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಿಶಿನವು ನೀವು ಅಂದುಕೊಂಡಷ್ಟು ಆರೋಗ್ಯಕರವಲ್ಲ! ಇದರ ದುಷ್ಪರಿಣಾಮಗಳ ಬಗ್ಗೆ ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ

ದಿನಕ್ಕೆ 500–2,000 ಮಿಲಿಗ್ರಾಂ ವರೆಗಿನ ಪ್ರಮಾಣದಲ್ಲಿ ಅರಿಶಿನವನ್ನು ಸೇವಿಸುವುದರಿಂದ ದೇಹಕ್ಕೆ ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂದು ಹಲವಾರು ಅಧ್ಯಯನಗಳು ಸೂಚಿಸಿವೆ. ಆದರೆ ಅರಶಿನದ ಅತಿಯಾದ ಸೇವನೆ ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಆರೋಗ್ಯ ತಜ್ಞರಾದ ಡಾ. ಸಿರಿಯಾಕ್ ಅಬ್ಬಿ ಫಿಲಿಪ್ಸ್ ಅವರು ಹಂಚಿಕೊಂಡಿರುವ ಪ್ರಮುಖ ಅಂಶಗಳು ಇಲ್ಲಿವೆ.

ಅರಿಶಿನವು ನೀವು ಅಂದುಕೊಂಡಷ್ಟು ಆರೋಗ್ಯಕರವಲ್ಲ! ಇದರ ದುಷ್ಪರಿಣಾಮಗಳ ಬಗ್ಗೆ ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ
Consuming TurmericImage Credit source: Pinterest
ಅಕ್ಷತಾ ವರ್ಕಾಡಿ
|

Updated on:Aug 29, 2023 | 11:54 AM

Share

ಅಡುಗೆ ಮನೆಯಲ್ಲಿ ಲಭ್ಯವಿರುವ ಅರಶಿನವು ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ ಎಂಬುದು ಇದೀಗಾಗಲೇ ತಿಳಿದಿರುವ ವಿಷಯ. ಈ ಕಾರಣದಿಂದಾಗಿ ಅನೇಕ ಜನರು ನೋವು ಮತ್ತು ಉರಿಯೂತವನ್ನು ಒಳಗೊಂಡಿರುವ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಅರಶಿನದ ಪುಡಿಯನ್ನು ಬಳಸುತ್ತಾರೆ. ಇದಲ್ಲದೆ ಜ್ವರ, ಖಿನ್ನತೆ, ಅಧಿಕ ಕೊಲೆಸ್ಟ್ರಾಲ್ ಹಾಗೂ ಯಕೃತ್ತಿನ ಕಾಯಿಲೆ ಮತ್ತು ತುರಿಕೆ ನಿವಾರಕವಾಗಿ ಅರಶಿನವನ್ನು ಔಷಧೀಯ ರೂಪವಾಗಿ ಬಳಸುವುದುಂಟು. ಆದರೆ ಅರಶಿನದ ಸೇವನೆ ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಆರೋಗ್ಯ ತಜ್ಞರಾದ ಡಾ. ಸಿರಿಯಾಕ್ ಅಬ್ಬಿ ಫಿಲಿಪ್ಸ್ ಅವರು ಫೈನಾನ್ಶಿಯಲ್ ಎಕ್ಸ್‌ಪ್ರೆಸ್​​ನ ಸಂದರ್ಶನವೊಂದರಲ್ಲಿ ವಿವರವಾಗಿ ಹಂಚಿಕೊಂಡಿದ್ದಾರೆ.

“ಅರಿಶಿನವು ಔಷಧವಲ್ಲ. ಇದು ಅಡುಗೆಯಲ್ಲಿ ಬಳಸುವ ಮಸಾಲೆಯಾಗಿದ್ದು ಅದು ಆಹಾರದ ರುಚಿ ಮತ್ತು ಬಣ್ಣ ನೀಡಲು ಸಹಾಯ ಮಾಡುತ್ತದೆ. ಆಂಟಿ ಫಂಗಲ್, ಆಂಟಿ ಬ್ಯಾಕ್ಟೀರಿಯಲ್, ಆಂಟಿ ವೈರಲ್, ಆಂಟಿ ಇನ್ಫ್ಲಮೇಟರಿ,ಆಂಟಿ-ಕ್ಯಾನ್ಸರ್ ಮತ್ತು ಇತರ ಅನೇಕ ಪ್ರಯೋಜನಕಾರಿ ಗುಣಗಳನ್ನು ಹೊಂದಿದೆ ಎಂದು ಹೇಳಿದರೂ ಕೂಡ ಯಾವುದೇ ಪ್ರಯೋಗಾಲಯದ ಪ್ರಯೋಗಗಳಲ್ಲಿ ಮಾತ್ರ ಮಾನವರಲ್ಲಿ ನಿರ್ಣಾಯಕವಾಗಿ ಸಾಬೀತಾಗಿಲ್ಲ ಎಂದು ಡಾ. ಫಿಲಿಪ್ಸ್ ಹೇಳುತ್ತಾರೆ. ಇದಲ್ಲದೇ ಹಾಲಿನಲ್ಲಿ ಒಂದು ಚಿಟಿಕೆ ಅರಿಶಿನ ಹಾಕಿದರೂ ಯಾರಿಗೂ ಪ್ರಯೋಜನವಾಗುವುದಿಲ್ಲ. ಇದು ಕೇವಲ ಬಿಳಿ ಹಾಲು ಹಳದಿ ಬಣ್ಣಕ್ಕೆ ತಿರುಗುವಂತೆ ಮಾಡುತ್ತದೆ. ಹಾಲಿನೊಂದಿಗೆ ಅರಿಶಿನವನ್ನು ನೇರವಾಗಿ ಸೇವಿಸಿದಾಗ, ಅದರಲ್ಲಿ ಶೇಕಡಾ 99 ರಷ್ಟು ಮಲದಲ್ಲಿ ಹೊರಹಾಕಲ್ಪಡುತ್ತದೆ. ಕೇವಲ ಶೇಕಡಾ 1ರಷ್ಟು ಮಾತ್ರ ದೇಹದಲ್ಲಿ ಹೀರಲ್ಪಡುತ್ತದೆ. ಇದರಿಂದ ದೇಹದೊಳಗೆ ಯಾವುದೇ ಪ್ರಯೋಜನ ಹೊಂದಲು ಸಾಧ್ಯವಿಲ್ಲ ಎಂದು ಅವರು ಸೇರಿಸುತ್ತಾರೆ.

ಇದನ್ನೂ ಓದಿ: ನೀವು ರಾತ್ರಿ ವೇಳೆ ಸಾಕ್ಸ್ ಧರಿಸಿ ಮಲಗುತ್ತೀರಾ? ಅಂದರೆ ನೀವು ಈ ಸಮಸ್ಯೆಗಳಿಗೆ ಹತ್ತಿರದಲ್ಲಿದ್ದೀರಿ!

ಅರಿಶಿನದ ದುಷ್ಪರಿಣಾಮಗಳೇನು?

  • ಅರಶಿನವನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ದೇಹದ ಮೇಲೆ ಸಾಕಷ್ಟು ಅಡ್ಡ ಪರಿಣಾಮವನ್ನುಂಟುಮಾಡಬಹುದು.
  • ಅರಿಶಿನವನ್ನು ಅತಿಯಾಗಿ ಸೇವಿಸುವುದರಿಂದ ಹೊಟ್ಟೆ ಸಮಸ್ಯೆ, ವಾಕರಿಕೆ, ತಲೆತಿರುಗುವಿಕೆ ಅಥವಾ ಅತಿಸಾರದಂತಹ ಸೌಮ್ಯ ಅಡ್ಡ ಪರಿಣಾಮಗಳಿಗೆ ಕಾರಣವಾಗಬಹುದು.
  • ಅರಿಶಿನವು ಸುಮಾರು 2 ಪ್ರತಿಶತದಷ್ಟು ಆಕ್ಸಲೇಟ್ ಅನ್ನು ಹೊಂದಿರುವುದರಿಂದ, ಹೆಚ್ಚು ತಿನ್ನುವುದು ಮೂತ್ರಪಿಂಡದ ಕಲ್ಲುಗಳಿಗೆ ಕಾರಣವಾಗಬಹುದು.
  • ಕೆಲವು ಅರಿಶಿನದ ಪುಡಿಗಳಲ್ಲಿ ಸೀಸದ ಅಂಶ ಹೆಚ್ಚಿರಬಹುದು, ಇದು ನರಮಂಡಲಕ್ಕೆ ಹೆಚ್ಚು ವಿಷಕಾರಿಯಾಗಿ ಪರಿಣಾಮವನ್ನುಂಟು ಮಾಡುತ್ತದೆ.
  • ಅರಿಶಿನ ಸಾರಗಳು ಪಿತ್ತಗಲ್ಲು ಹೊಂದಿರುವ ಜನರಲ್ಲಿ ಪಿತ್ತರಸದ ಕೊಲಿಕ್ (ಹೊಟ್ಟೆ ನೋವು) ಅನ್ನು ಪ್ರಚೋದಿಸಬಹುದು.

ಒಂದು ದಿನದಲ್ಲಿ ಒಬ್ಬ ವ್ಯಕ್ತಿ ಎಷ್ಟು ಪ್ರಮಾಣದಲ್ಲಿ  ಅರಿಶಿನ ಸೇವಿಸುವುದು ಉತ್ತಮ?

ದಿನಕ್ಕೆ 500–2,000 ಮಿಲಿಗ್ರಾಂ ವರೆಗಿನ ಪ್ರಮಾಣದಲ್ಲಿ ಅರಿಶಿನವನ್ನು ಸೇವಿಸುವುದು ಉತ್ತಮ  ಹಲವಾರು ಅಧ್ಯಯನಗಳು ಸೂಚಿಸುತ್ತವೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:53 am, Tue, 29 August 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ