AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Control Diabetes: ಮಧುಮೇಹ ಶಾಶ್ವತವಾಗಿ ಹತೋಟಿಯಲ್ಲಿಟ್ಟುಕೊಳ್ಳಲು ನೀವು ಮಾಡಬೇಕಾಗಿರುವುದು ಇಷ್ಟೇ!

ಮಧುಮೇಹದಿಂದ ಬಳಲುತ್ತಿರುವ ವ್ಯಕ್ತಿಗೆ ಆತನ ಆಹಾರಕ್ರಮ ಯಾವ ರೀತಿ ಇರಬೇಕು ಎಂಬುದು ಬಹಳ ಮುಖ್ಯವಾಗಿರುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಕೆಲವು ಆಹಾರಗಳನ್ನು ಸೇವಿಸುವ ಮೂಲಕ ಮಧುಮೇಹವನ್ನು ಶಾಶ್ವತವಾಗಿ ಹತೋಟಿಯಲ್ಲಿಟ್ಟುಕೊಳ್ಳಬಹುದು. ಹಾಗೆಯೇ ಯಾವ ಆಹಾರವನ್ನು ಮಧುಮೇಹಿಗಳು ತಿನ್ನಬಾರದು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.

Control Diabetes: ಮಧುಮೇಹ  ಶಾಶ್ವತವಾಗಿ ಹತೋಟಿಯಲ್ಲಿಟ್ಟುಕೊಳ್ಳಲು ನೀವು ಮಾಡಬೇಕಾಗಿರುವುದು ಇಷ್ಟೇ!
Control DiabetesImage Credit source: Pinterest
ಅಕ್ಷತಾ ವರ್ಕಾಡಿ
|

Updated on: Nov 10, 2023 | 3:49 PM

Share

ಮಧುಮೇಹದಿಂದ ಬಳಲುತ್ತಿರುವ ವ್ಯಕ್ತಿಗೆ ಆತನ ಆಹಾರಕ್ರಮ ಯಾವ ರೀತಿ ಇರಬೇಕು ಎಂಬುದು ಬಹಳ ಮುಖ್ಯವಾಗಿರುತ್ತದೆ. ವಿಶೇಷವಾಗಿ ಬೆಳಗಿನ ಉಪಹಾರ. ನೀವು ಸೇವಿಸುವ ಉಪಹಾರ ಆರೋಗ್ಯಕರವಾಗಿದ್ದರೆ, ದಿನಪೂರ್ತಿ ಆರೋಗ್ಯದಿಂದಿರಬಹುದು. ಸಾಮಾನ್ಯವಾಗಿ ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದ ಮಧುಮೇಹ ಇತ್ತೀಚಿನ ದಿನಗಳಲ್ಲಿ ಯುವ ಜನತೆಯನ್ನು ತೀವ್ರವಾಗಿ ಬಾಧಿಸುತ್ತಿದೆ. ಆದ್ದರಿಂದ ಮಧುಮೇಹಿಗಳು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಶಾಶ್ವತವಾಗಿ ನಿಯಂತ್ರಣದಲ್ಲಿಡಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕಾದ ಮತ್ತು ತಪ್ಪಿಸಬೇಕಾದ ಕೆಲವು ಆಹಾರಗಳು ಕುರಿತು ಮಾಹಿತಿ ಇಲ್ಲಿದೆ.

ಮಧುಮೇಹಿಗಳು ಬೆಳಗಿನ ಉಪಾಹಾರದಲ್ಲಿ ಈ ಆಹಾರಗಳನ್ನು ಸೇವಿಸಬೇಡಿ:

  • ಹೆಚ್ಚು ಉಪ್ಪು ಸೇವಿಸಬೇಡಿ
  • ತಂಪು ಪಾನೀಯಗಳನ್ನು ಸೇವಿಸಬಾರದು.
  • ಸಕ್ಕರೆ, ಸಂಸ್ಕರಿಸಿದ ಸಕ್ಕರೆಯನ್ನು ತಿನ್ನಬಾರದು.
  • ಜಂಕ್ ಫುಡ್ ಮತ್ತು ಫಾಸ್ಟ್ ಫುಡ್ ತಿನ್ನಬಾರದು.
  • ಆಲ್ಕೋಹಾಲ್ ಸಂಬಂಧಿತ ಪಾನೀಯಗಳನ್ನು ತೆಗೆದುಕೊಳ್ಳಬಾರದು.

ಮಧುಮೇಹಿಗಳು ಖಾಲಿ ಹೊಟ್ಟೆಯಲ್ಲಿ ಯಾವ ಆಹಾರ ಸೇವಿಸಬೇಕು:

ನಿಂಬೆ ರಸವನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿಯಿರಿ:

ಮಧುಮೇಹದಿಂದ ಬಳಲುತ್ತಿರುವವರು ಮುಂಜಾನೆ ನಿಂಬೆ ನೀರನ್ನು ಕುಡಿಯಬಹುದು. 1 ಗ್ಲಾಸ್ ಬಿಸಿ ನೀರಿನಲ್ಲಿ ಒಂದು ನಿಂಬೆಹಣ್ಣಿನ ರಸವನ್ನು ಹಿಂಡಿ ಮತ್ತು ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಕುಡಿಯಿರಿ. ಇದನ್ನು ಕುಡಿಯುವುದರಿಂದ ನಮ್ಮ ದೇಹವನ್ನು ನಿರ್ವಿಷಗೊಳಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ. ಇದು ತೂಕವನ್ನು ಕಳೆದುಕೊಳ್ಳಲು ಸಹ ಸಹಾಯ ಮಾಡುತ್ತದೆ.

ಇದನ್ನೂ ಓದಿ: ನೀವು ಹೆಚ್ಚು ಉಪ್ಪು ಸೇವಿಸುತ್ತೀರಾ?; ಈ ಅಪಾಯಗಳ ಬಗ್ಗೆಯೂ ತಿಳಿದಿರಲಿ

ಮೆಂತ್ಯ ನೀರು:

1 ಚಮಚ ಮೆಂತ್ಯ ಕಾಳುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿ ಮತ್ತು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ನೆನೆಸಿದ ಮೆಂತ್ಯವನ್ನು ಹಾಗೆಯೇ ಅಗಿಯಿರಿ.ಇದು ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ನೀವು ಅದರಿಂದ ಅನೇಕ ಪ್ರಯೋಜನಗಳನ್ನು ಪಡೆಯುತ್ತೀರಿ.

ನೆಲ್ಲಿಕಾಯಿ ರಸ:

ನೆಲ್ಲಿಕಾಯಿ ರಸದಲ್ಲಿ ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದ್ದು, ಒಟ್ಟಾರೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಸಾಕಷ್ಟು ವಿಟಮಿನ್ ಸಿ ಸೇವನೆಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನವು ಬಹಿರಂಗಪಡಿಸಿದೆ. ಆದ್ದರಿಂದ, ಮಧುಮೇಹಿಗಳು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿಯಬೇಕು.

ಜೀರಿಗೆ ಚಹಾ:

1 ಲೋಟ ನೀರಿಗೆ 1 ಟೀಚಮಚ ಜೀರಿಗೆ ಸೇರಿಸಿ ಕುದಿಸಿ. ಈಗ ಇದನ್ನು ಸೋಸಿಕೊಂಡು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಜೀರಿಗೆ ಕೆಲವು ನೈಸರ್ಗಿಕ ಅಂಶಗಳನ್ನು ಒಳಗೊಂಡಿದೆ. ಅವು ನಮ್ಮ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತವೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ಟೀ ಕುಡಿಯುವುದರಿಂದ ನಮ್ಮ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ