Covid 19 Vaccine: ಭಾರತೀಯ ಕೊರೊನಾ ಲಸಿಕೆಗಳು ಹೊಸ ಪ್ರಬೇಧದ ವೈರಾಣುವನ್ನೂ ಮಣಿಸಬಲ್ಲವು

Corona Vaccine: ಭಾರತದಲ್ಲಿ ಲಭ್ಯವಿರುವ ಕೊರೊನಾ ಲಸಿಕೆಗಳು ಬ್ರಿಟನ್​, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್​ ದೇಶಗಳ ರೂಪಾಂತರಿ ಕೊರೊನಾವನ್ನು ತಡೆಗಟ್ಟಲು ಸಮರ್ಥವಾಗಿವೆ. ಹೀಗಾಗಿ ಈ ಲಸಿಕೆಗಳನ್ನು ತೆಗೆದುಕೊಂಡರೆ ಜನ ಹೊಸ ಬಗೆಯ ಕೊರೊನಾಕ್ಕೆ ಭಯಪಡಬೇಕಾದ ಅವಶ್ಯಕತೆ ಇಲ್ಲ.

Covid 19 Vaccine: ಭಾರತೀಯ ಕೊರೊನಾ ಲಸಿಕೆಗಳು ಹೊಸ ಪ್ರಬೇಧದ ವೈರಾಣುವನ್ನೂ ಮಣಿಸಬಲ್ಲವು
ಕೊರೊನಾ ಲಸಿಕೆ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 19, 2021 | 2:30 PM

ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗಿ ಭರ್ತಿ ಒಂದು ತಿಂಗಳಾಗಿದೆ. ಲಸಿಕೆ ತಯಾರಾಗುತ್ತಿದ್ದು ಎಂಬಲ್ಲಿಂದ ವಿತರಣೆ ಆರಂಭವಾದ ಮೇಲೂ ಕೊರೊನಾ ಲಸಿಕೆಯ ಕುರಿತಾಗಿ ದೇಶದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿದ್ದವು. ಹಲವು ಜನರು ಭಾರತದಲ್ಲಿ ತಯಾರಾದ ಕೊರೊನಾ ಲಸಿಕೆ ಬಗ್ಗೆ ಅನುಮಾನವನ್ನೂ ವ್ಯಕ್ತಪಡಿಸಿದ್ದರು. ಆದರೆ, ನಂತರದಲ್ಲಿ ಅನೇಕ ವರದಿಗಳು ಭಾರತೀಯ ಲಸಿಕೆಗಳು ಸುರಕ್ಷಿತವಾಗಿವೆ ಎಂದು ಅಧಿಕೃತವಾಗಿ ಹೇಳಿದ್ದವು. ಅಷ್ಟೇ ಅಲ್ಲದೇ ವಿದೇಶಗಳು ಸಹ ಭಾರತದ ಲಸಿಕೆಯನ್ನು ಆಮದು ಮಾಡಿಕೊಂಡಿದ್ದಾವೆ. ಈ ಎಲ್ಲಾ ಬೆಳವಣಿಗೆಗಳ ನಂತರ ಇದೀಗ ಭಾರತದಲ್ಲಿ ತಯಾರಾದ ಕೊರೊನಾ ಲಸಿಕೆಗಳ ಕುರಿತು ಮತ್ತೊಂದು ಅಧ್ಯಯನವಾಗಿದ್ದು, ಇವು ಹೊಸ ಬಗೆಯ ಕೊರೊನಾ ವೈರಾಣುವನ್ನು ಮಣಿಸುವಲ್ಲಿಯೂ ಶಕ್ತವಾಗಿವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ICMR) ತಿಳಿಸಿದೆ.

ಭಾರತದಲ್ಲಿ ಲಭ್ಯವಿರುವ ಕೊರೊನಾ ಲಸಿಕೆಗಳು ಬ್ರಿಟನ್​, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್​ ದೇಶಗಳ ರೂಪಾಂತರಿ ಕೊರೊನಾವನ್ನು ತಡೆಗಟ್ಟಲು ಸಮರ್ಥವಾಗಿವೆ. ಹೀಗಾಗಿ ಈ ಲಸಿಕೆಗಳನ್ನು ತೆಗೆದುಕೊಂಡರೆ ಜನ ಹೊಸ ಬಗೆಯ ಕೊರೊನಾಕ್ಕೆ ಭಯಪಡಬೇಕಾದ ಅವಶ್ಯಕತೆ ಇಲ್ಲ. ಇದು ನಮ್ಮ ವೈದ್ಯಕೀಯ ಕ್ಷೇತ್ರಕ್ಕೆ ನಿಜವಾಗಿಯೂ ಹೆಮ್ಮೆಯ ವಿಚಾರ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಹಂತದಲ್ಲಿ ಇವರೆಲ್ಲರೂ ಕೊರೊನಾ ಲಸಿಕೆ ಸ್ವೀಕರಿಸಲು ಅರ್ಹರಾಗಲಿದ್ದಾರೆ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಫ್ರಂಟ್​ಲೈನ್​ ವಾರಿಯರ್ಸ್​ ಕೊರೊನಾ ಲಸಿಕೆ ಸ್ವೀಕರಿಸಿದ ನಂತರ ಆರೋಗ್ಯ ಸಮಸ್ಯೆಯುಳ್ಳ ಹಿರಿಯ ನಾಗರೀಕರಿಗೂ ಲಸಿಕೆ ನೀಡಲಾಗುವುದೆಂದು ಸರ್ಕಾರ ಮೊದಲೇ ತಿಳಿಸಿತ್ತು. ಅದರಂತೆ ಈಗಾಗಲೇ ಕೊರೊನಾ ಲಸಿಕೆ ವಿತರಣೆ ಕಾರ್ಯಕ್ರಮ ನಡೆದುಕೊಂಡು ಬಂದಿದೆ. ಇದೀಗ ಸರ್ಕಾರ ಮತ್ತೊಂದು ಪಟ್ಟಿ ತಯಾರಿಸುತ್ತಿದ್ದು, ಮುಂದಿನ ಹಂತದಲ್ಲಿ ಆದ್ಯತೆಯ ಮೇರೆಗೆ ಯಾರಿಗೆಲ್ಲಾ ಲಸಿಕೆ ನೀಡಬೇಕೆಂದು ನಿರ್ಧರಿಸಲಾಗುತ್ತಿದೆ.

ಸರ್ಕಾರದ ಯೋಜನೆಯ ಪ್ರಕಾರ ಮುಂದಿನ ಹಂತದಲ್ಲಿ ಬೇರೆ ಬೇರೆ ಕಾಯಿಲೆಗಳಿಗೆ ತುತ್ತಾಗಿರುವ ಹಿರಿಯ ನಾಗರೀಕರನ್ನೇ ಆದ್ಯತೆಯನ್ನಾಗಿರಿಸಿಕೊಂಡು ಕೊರೊನಾ ಲಸಿಕೆ ನೀಡಲಾಗುವುದು. ಅದಕ್ಕಾಗಿಯೇ ಒಂದು ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು, ಆರೋಗ್ಯ ಸಮಸ್ಯೆಯುಳ್ಳ 50 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರು ವೈದ್ಯರಿಂದ ದೃಢೀಕರಣ ಪತ್ರ ಪಡೆದು ನಂತರ CoWIN ಆ್ಯಪ್​ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಅಂತಹವರಿಗೆ ಮಾರ್ಚ್​ನಿಂದ ಲಸಿಕೆ ನೀಡಲು ಸರ್ಕಾರ ತೀರ್ಮಾನಿಸಿದೆ. ಹೃದಯ ಸಂಬಂಧಿ ಕಾಯಿಲೆ, ಕಿಡ್ನಿ ಸಮಸ್ಯೆ, ಕ್ಯಾನ್ಸರ್ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುವುದು.

ಇದರಲ್ಲಿ ಒಟ್ಟು 25 ಕೋಟಿಗೂ ಅಧಿಕ ಮಂದಿ ಒಳಗೊಳ್ಳುವ ಸಾಧ್ಯತೆ ಇದ್ದು, ಅವರೆಲ್ಲರಿಗೂ ಲಸಿಕೆ ವಿತರಣೆ ಆಗಲಿದೆ. ಅಂತೆಯೇ ಈಗಾಗಲೇ ಒಂದು ಹಂತದಲ್ಲಿ ಪಟ್ಟಿ ಸಿದ್ಧವಾಗಿದ್ದು, ಅದನ್ನು ಅತಿ ಶೀಘ್ರದಲ್ಲಿಯೇ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ. ಜೊತೆಗೆ, ಇದಕ್ಕೆ ಸಂಬಂಧಿಸಿದ ವಿವರಗಳನ್ನು ರಾಜ್ಯ ಸರ್ಕಾರಗಳೊಂದಿಗೂ ಹಂಚಿಕೊಳ್ಳಲಾಗಿದೆ ಎಂದು ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿನಿಂದ ಆರ್ಥಿಕ ಸಂಕಷ್ಟ; ಮನೋವೈದ್ಯರ ಭೇಟಿಯಾಗುವುದಕ್ಕೆ ಜನರ ಸರತಿಸಾಲು

Published On - 2:29 pm, Fri, 19 February 21

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ