AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4th Dose Vaccination: ಚೀನಾದಲ್ಲಿ ಕೊರೊನಾ ಸೋಂಕು ತೀವ್ರಗೊಂಡ ಬೆನ್ನಲ್ಲೇ ಭಾರತದಲ್ಲಿ 4ನೇ ಡೋಸ್ ಲಸಿಕೆ ಬಗ್ಗೆ ಚಿಂತನೆ ಆರಂಭ

ಮೂಗಿನ ಮೂಲಕ ಕೊಡುವ ಲಸಿಕೆಗಳಿಗೆ ಆದ್ಯತೆ ಕೊಡಬೇಕು ಎಂದು ಹೇಳಲಾಗುತ್ತಿದೆ.

4th Dose Vaccination: ಚೀನಾದಲ್ಲಿ ಕೊರೊನಾ ಸೋಂಕು ತೀವ್ರಗೊಂಡ ಬೆನ್ನಲ್ಲೇ ಭಾರತದಲ್ಲಿ 4ನೇ ಡೋಸ್ ಲಸಿಕೆ ಬಗ್ಗೆ ಚಿಂತನೆ ಆರಂಭ
ಮೂಗಿನ ಮೂಲಕ ನೀಡಬಹುದಾದ ಲಸಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 25, 2022 | 8:26 AM

Share

ಬೆಂಗಳೂರು: ಚೀನಾದಲ್ಲಿ ಕೊರೊನಾ ವೈರಸ್​ ಸೋಂಕು (Coronavirus) ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ 4ನೇ ಡೋಸ್ ಲಸಿಕೆ ವಿತರಣೆ ಬಗ್ಗೆ ಚರ್ಚೆ ಆರಂಭವಾಗಿದೆ. ಮೂಗಿನ ಮೂಲಕ ಕೊಡುವ ಲಸಿಕೆ (Nasal Vaccine) ಸಾಕೇ ಅಥವಾ ನಾಲ್ಕನೇ ಡೋಸ್ ಬೇಕೆ ಎನ್ನುವ ಬಗ್ಗೆಯೂ ಚರ್ಚೆಗಳು ಆರಂಭವಾಗಿವೆ. ‘ನೇಸಲ್ ವ್ಯಾಕ್ಸಿನ್’ಗೆ ‘ಮ್ಯುಕೋಸಲ್ ಇಮ್ಯುನಿಟಿ’ (ಶ್ವಾಸಕೋಶ ಸೇರಿಧಂತೆ ಅತಿಮುಖ್ಯ ಅಂಗಳಲ್ಲಿ ರೋಗನಿರೋಧಕ ಶಕ್ತಿ) ಬೆಳೆಸುವ ಶಕ್ತಿ ಇದೆ ಎಂಬ ಕಾರಣಕ್ಕೆ ಭಾರತದ ವೈದ್ಯಕೀಯ ತಜ್ಞರು ಈ ಚಿಂತನೆ ನಡೆಸುತ್ತಿದ್ದಾರೆ. ಈ ಲಸಿಕೆಯನ್ನು ಸುಲಭವಾಗಿ ಕೊಡಬಹುದು. ಇದರಿಂದ ಅಡ್ಡಪರಿಣಾಮಗಳೂ ಇರುವುದಿಲ್ಲ. ಹೀಗಾಗಿ ಮೂಗಿನ ಮೂಲಕ ಕೊಡುವ ಲಸಿಕೆಗಳಿಗೆ ಆದ್ಯತೆ ಕೊಡಬೇಕು ಎಂದು ಹೇಳಲಾಗುತ್ತಿದೆ.

ಆದರೆ ಈ ಲಸಿಕೆಗಳು ಎಷ್ಟರಮಟ್ಟಿಗೆ ಪರಿಣಾಮಕಾರಿ ಎಂಬ ಬಗ್ಗೆ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು ಕೆಲ ತಜ್ಞರು ಅನುಮಾನ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಚೀನಾ, ಅಮೆರಿಕಾ, ಕೊರಿಯಾ, ರಷ್ಯಾ, ಬ್ರೆಜಿಲ್ ಮತ್ತು ಫ್ರಾನ್ಸ್ ದೇಶಗಳಲ್ಲಿ ಈ ಲಸಿಕೆಗಳನ್ನು ಜನರಿಗೆ ನೀಡಲಾಗಿದೆ. ಪರಿಣಾಮಕಾರಿಯಾಗಿವೆ ಎಂಬ ಮಾತುಗಳೂ ತಜ್ಞರ ವಲಯದಲ್ಲಿ ಕೇಳಿಬಂದಿದೆ.

ಈಗ ಭಾರತದಲ್ಲಿ ಹರಡುತ್ತಿರುವ ಕೊರೊನಾ ಸೋಂಕಿಗೆ ರೂಪಾಂತರಿ ಒಮಿಕ್ರಾನ್ BF7 ಕಾರಣ ಎಂದು ಹೇಳಲಾಗುತ್ತಿದೆ. ಇದರ ನಿಯಂತ್ರಣಕ್ಕಾಗಿ ತಜ್ಞರು ಸ್ಟ್ರಿಂಗ್ ಬೂಸ್ಟರ್ ನೀಡುವ ಬಗ್ಗೆ ಚರ್ಚೆ ಆರಂಭಿಸಿದ್ದಾರೆ. ಪ್ಲೂ ಬದಲಾದ ಹಾಗೆ (ಜ್ವರದ ಲಕ್ಷಣ) ಲಸಿಕೆಯನ್ನೂ ಬದಲಿಸಬೇಕು ಎಂಬ ವಾದವನ್ನು ಹಲವರು ಮುಂದಿಟ್ಟಿದ್ದಾರೆ. ಈಗ ಒಮಿಕ್ರಾನ್​ ವೈರಾಣುವಿನ ರೂಪಾಂತರವು ಬದಲಾಗಿದೆ. ಹೀಗಾಗಿ ಅಮೇರಿಕ ಹಾಗೂ ಇತರ ದೇಶಗಳಲ್ಲಿ ವೈರಾಣುಗಳ ಸ್ವರೂಪಕ್ಕೆ ತಕ್ಕಂತೆ ಲಸಿಕೆ ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರತಿ ಎರಡು ವರ್ಷಕ್ಕೊಂದು ಲಸಿಕೆ ಬೇಕಾಗಬಹುದು ಎಂದು ಹಲವರು ಪ್ರತಿಪಾದಿಸುತ್ತಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಒಮಿಕ್ರಾನ್​ ನಿಯಂತ್ರಣಕ್ಕೆ ಬಳಕೆಯಾಗುವ ಲಸಿಕೆ ಅಭಿವೃದ್ಧಿಪಡಿಸಲು ಚಿಂತನೆ ಆರಂಭವಾಗಿದೆ. ಭಾರತದಲ್ಲಿ ನೀಡಿರುವ ಲಸಿಕೆಗಳು ಈವರೆಗೆ ಪರಿಣಾಮಕಾರಿಯಾಗಿ ಕೆಲಸ ಮಾಡಿವೆ. ಜನರಲ್ಲಿ ರೋಗ ನಿರೋಧಕ ಶಕ್ತಿಯೂ ವೃದ್ಧಿಯಾಗಿದೆ. ಹೀಗಾಗಿ ನಾಲ್ಕನೇ ಡೋಸ್ ಅನಗತ್ಯ ಎಂಬ ಅಭಿಪ್ರಾಯವನ್ನೂ ಕೆಲವರು ವ್ಯಕ್ತಪಡಿಸಿದ್ದಾರೆ.

ಕೊರೊನಾ ಸೋಂಕಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 am, Sun, 25 December 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ