ಕೆಮ್ಮಿನ ಸಿರಪ್‌ ಪ್ರಕರಣ: ವೈದ್ಯರ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಭಾರತೀಯ ವೈದ್ಯಕೀಯ ಸಂಘ

ಕೆಮ್ಮಿನ ಸಿರಪ್ ವಿವಾದಕ್ಕೆ ಸಂಬಂಧಿಸಿದಂತೆ ವೈದ್ಯರನ್ನು ಬಂಧಿಸಿದ್ದಕ್ಕೆ ಭಾರತೀಯ ವೈದ್ಯಕೀಯ ಸಂಘವು ಆಕ್ಷೇಪ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ. ಕೆಮ್ಮಿನ ಸಿರಪ್ ತಯಾರಿಸುವ ಕಂಪನಿಗೆ ಕ್ಲೀನ್ ಚಿಟ್ ನೀಡುವುದರ ಹಿಂದಿನ ಕಾರಣವನ್ನು ಪ್ರಶ್ನೆ ಮಾಡಿದ್ದು, ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೆಮ್ಮಿನ ಸಿರಪ್‌ ಪ್ರಕರಣ: ವೈದ್ಯರ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಭಾರತೀಯ ವೈದ್ಯಕೀಯ ಸಂಘ
ಸಾಂದರ್ಭಿಕ ಚಿತ್ರ
Image Credit source: Pinterest

Updated on: Oct 06, 2025 | 7:05 PM

ಮಧ್ಯಪ್ರದೇಶದಲ್ಲಿ(Madhya Pradesh) ಕೆಮ್ಮಿನ ಸಿರಪ್ (Cough Syrup Deaths) 11 ಮಕ್ಕಳನ್ನು ಬಲಿ ಪಡೆದಿದೆ. ಈ ಕೆಮ್ಮಿನ ಸಿರಪ್ ಪ್ರಕರಣದಲ್ಲಿ ಭಾಗಿಯಾಗಿರುವ ವೈದ್ಯ ಡಾ. ಪ್ರವೀಣ್ ಸೋನಿ ಎಂಬವರನ್ನು ಈಗಾಗಲೇ ಬಂಧಿಸಲಾಗಿದೆ. ಈ ಬಂಧನದ ಬಳಿಕ ಔಷಧೀಯ ಕಂಪನಿಗೆ ಕ್ಲೀನ್ ಚಿಟ್ ನೀಡುವ ಸರ್ಕಾರದ ನಿರ್ಧಾರವನ್ನು ವೈದ್ಯಕೀಯ ಸಂಸ್ಥೆಯೂ ಪ್ರಶ್ನೆ ಮಾಡಿದೆ. ಹೌದು, ಭಾರತೀಯ ವೈದ್ಯಕೀಯ ಸಂಘ (IMA) ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಮಾತುಕತೆ ನಡೆಸುವುದಾಗಿ ಘೋಷಿಸಿದೆ ಎಂದು ಮೂಲವೊಂದು ಇಂಡಿಯಾ ಟುಡೇಗೆ ತಿಳಿಸಿದೆ.

ಡಾ. ಪ್ರವೀಣ್ ಸೋನಿ ಬಂಧನಕ್ಕೆ ಭಾರತೀಯ ವೈದ್ಯಕೀಯ ಸಂಘ ಆಕ್ಷೇಪ ವ್ಯಕ್ತಪಡಿಸಿದ್ದು, ವೈದ್ಯರ ಮೇಲೆ ಆರೋಪ ಹೊರಿಸಬಾರದು ಹಾಗೂ ಚಿಕಿತ್ಸಾ ಶಿಷ್ಟಾಚಾರಗಳನ್ನು ಅನುಸರಿಸಲಾಗಿದೆ ಎಂದು ತಿಳಿಸಿದೆ. ಡಾ. ಸೋನಿಯ ಬಿಡುಗಡೆಗೆ ಒತ್ತಾಯಿಸಲು ಸಂಘವು ದೃಢನಿಶ್ಚಯ ಹೊಂದಿದೆ. ಈಗಾಗಲೇ ಸತ್ಯಶೋಧನಾ ತಂಡವನ್ನು ಚಿಂದ್ವಾರಕ್ಕೆ ಕಳುಹಿಸಲಾಗಿದ್ದು, ಸ್ಥಳೀಯ ಅಧಿಕಾರಿಗಳನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ನಿರ್ಣಯಿಸಲು ಮುಂದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:ಯಾವುದೇ ಔಷಧ ಕಲಬೆರಕೆ ಎಂದು ಗೊತ್ತಾದಲ್ಲಿ ಎಲ್ಲ ರಾಜ್ಯಗಳಿಗೂ ತ್ವರಿತವಾಗಿ ಮಾಹಿತಿ ರವಾನೆಯಾಗಬೇಕು: ಕೇಂದ್ರಕ್ಕೆ ಗುಂಡೂರಾವ್ ಆಗ್ರಹ

ಇದನ್ನೂ ಓದಿ
ಔಷಧ ಕಲಬೆರಕೆ, ಎಲ್ಲ ರಾಜ್ಯಗಳಿಗೂ ತ್ವರಿತ ಮಾಹಿತಿ ಸಿಗಬೇಕು: ಗುಂಡೂರಾವ್
ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳಲ್ಲಿ ಗಣನೀಯ ಇಳಿಕೆ
2 ವರ್ಷದೊಳಗಿನ ಮಕ್ಕಳಿಗೆ ಶೀತ, ಕೆಮ್ಮಿನ ಸಿರಪ್ ನೀಡಬೇಡಿ; ಸರ್ಕಾರ ಎಚ್ಚರಿಕೆ
ವೆದರ್​ಗೆ ಹೈರಾಣಾದ ಬೆಂಗಳೂರಿನ ಜನ: ಜ್ವರ, ಡೆಂಗ್ಯೂ, ಚಿಕನ್ ಗುನ್ಯಾ ಉಲ್ಬಣ 

ಅಕ್ರಮ ಸಿರಪ್ ವಿತರಣೆ:ಡಾ. ಪ್ರವೀಣ್ ಸೋನಿ ಬಂಧನ

ಕೆಮ್ಮಿನ ಸಿರಪ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎಸ್‌ಪಿ ನೇತೃತ್ವದ ವಿಶೇಷ ತಂಡದಿಂದ ಪರಾಸಿಯಾ ಸಿವಿಲ್ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಪ್ರವೀಣ್ ಸೋನಿ ಎಂಬವರನ್ನು ಬಂಧಿಸಿದ್ದಾರೆ. ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಮತ್ತು ಡಾ. ಸೋನಿ ಅಕ್ರಮವಾಗಿ ಸಿರಪ್ ವಿತರಿಸಿದ್ದಾರೆ ಎನ್ನಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ 276, 105 ಮತ್ತು ಔಷಧಗಳು ಮತ್ತು ಸೌಂದರ್ಯವರ್ಧಕ ಕಾಯ್ದೆಯ 27A ಅಡಿಯಲ್ಲಿ ರಾಜ್‌ಪಾಲ್ ಚೌಕ್‌ನ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು, ಔಷಧ ಕಂಪನಿ ಮತ್ತು ಡಾ. ಪ್ರವೀಣ್​ ಸೋನಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Mon, 6 October 25