ಕೊವಿಡ್-19: ರಾಜ್ಯದಲ್ಲಿಂದು 12 ಸಾವು ಮತ್ತು 1,505 ಹೊಸ ಪ್ರಕರಣಗಳು

ಕೊವಿಡ್-19: ರಾಜ್ಯದಲ್ಲಿಂದು 12 ಸಾವು ಮತ್ತು 1,505 ಹೊಸ ಪ್ರಕರಣಗಳು
ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಂಬಂಧಿಸಿದ ಸಾವು ಮತ್ತು ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಇಂದು 12 ಸಾವು ಸಂಭವಿಸಿವೆ ಮತ್ತು 1,505 ಹೊಸ ಪ್ರಕರಣಗಳು ಪತ್ತೆಯಾಗಿವೆ.

Arun Belly

|

Nov 26, 2020 | 10:46 PM

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಸಿಕ್ಕಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 12 ಜನ ಸಾವನ್ನಪ್ಪಿದ್ದಾರೆ ಮತ್ತು ಹೊಸದಾಗಿ 1,505 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 11,726 ಜನ ಸಾವನ್ನಪ್ಪಿದ್ದಾರೆ ಮತ್ತು ಸೋಂಕಿತರ ಸಂಖ್ಯೆ 8,79,560ಕ್ಕೇರಿದೆ.

ಸೋಂಕಿತರ ಪೈಕಿ 8,42,499 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 25, 316 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 7 ಜನರ ಬಲಿಯಾಗಿದ್ದಾರೆ ಮತ್ತು ಇಂದು ಒಂದೇ ದಿನ 844 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 4,108 ಜನರ ಸಾವಾಗಿದೆ, ಸೋಂಕಿತರ ಸಂಖ್ಯೆ 3,67,077 ತಲುಪಿದೆ.

ಸೋಂಕಿತರ ಪೈಕಿ 3,44,138 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 18, 830 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿ ತಿಳಿಸುತ್ತದೆ.

Follow us on

Related Stories

Most Read Stories

Click on your DTH Provider to Add TV9 Kannada