ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬುಧವಾರ ಸಾಯಂಕಾಲ ದೊರೆತಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹೊಸದಾಗಿ 415 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 12,244 ಮರಣಿಸಿದ್ದು ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 9,43,627ಕ್ಕೇರಿದೆ.
ಸೋಂಕಿತರ ಪೈಕಿ 9,25,489 ಜನ ಗುಣಮುಖರಾಗಿ ಡಿಸ್ಚಾರ್ಜ್ ಅಗಿದ್ದಾರೆ, ಮಿಕ್ಕಿದ 5,875 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಇದನ್ನೂ ಓದಿ: Covid-19 Origin | ಕೊರೊನಾ ವೈರಾಣು ಹುಟ್ಟಿದ್ದು ಚೀನಾದ ಲ್ಯಾಬ್ನಲ್ಲಿ ಅಲ್ಲ: WHO ತಜ್ಞರು
ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದು ಹೊಸದಾಗಿ 208 ಜನರಿಗೆ ಸೋಂಕು ತಗುಲಿದೆ. ನಗರದಲ್ಲಿ ಕೊವಿಡ್-19 ವ್ಯಾಧಿಯಿಂದ ಈವರೆಗೆ 4,411 ಜನ ಸತ್ತಿದ್ದಾರೆ ಮತ್ತು ಸೋಂಕು ಪೀಡಿತರ ಒಟ್ಟು ಸಂಖ್ಯೆ 4,01,095ಕ್ಕೇರಿದೆ.
ಸೋಂಕಿತರ ಪೈಕಿ 3,92,857 ಜನರು ಗುಣಮುಖರಾಗಿದ್ದಾರೆ ಮತ್ತು ಉಳಿದ 3,826 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿ ತಿಳಿಸುತ್ತದೆ.