AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covishield vaccine side-effects: ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರಿಗೆ ಶುರುವಾಯಿತು ಚಿಂತೆ? ತಜ್ಞರು ಹೇಳುವುದೇನು?

ಬ್ರಿಟಿಷ್ ಫಾರ್ಮಾ ಅಸ್ಟ್ರಾಜೆನೆಕಾ ತನ್ನ ಕೋವಿಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎನ್ನುವುದು ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಲಸಿಕೆ ತಯಾರಕರು, ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್​ಗೆ ಕಾರಣವಾಗಬಹುದೆಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

Covishield vaccine side-effects: ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರಿಗೆ ಶುರುವಾಯಿತು ಚಿಂತೆ? ತಜ್ಞರು ಹೇಳುವುದೇನು?
ಸಾಯಿನಂದಾ
| Edited By: |

Updated on: May 01, 2024 | 3:42 PM

Share

ಕೋವಿಡ್‌ ನಿಯಂತ್ರಣಕ್ಕಾಗಿ ಪಡೆದುಕೊಂಡವರು ಕೋವಿಶೀಲ್ಡ್‌ ಲಸಿಕೆ ಪಡೆದವರು ಥ್ರೊಂಬೋಸಿಸ್‌ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸುದ್ದಿಯು ಲಸಿಕೆ ಪಡೆದವರಲ್ಲಿ ಆತಂಕಕ್ಕೆ ಕಾರಣವಾಗಿದೆ. ಯಶೋದಾ ಆಸ್ಪತ್ರೆಯ ವೈದ್ಯರಾದ ಡಾ ವಿಶ್ವೇಶ್ವರನ್ ಬಿ ಯವರು, ‘ಲಸಿಕೆ ತೆಗೆದುಕೊಂಡ ಪ್ರತಿಯೊಬ್ಬರ ಮೇಲೆ ಪರಿಣಾಮ ಬೀರುವುದಿಲ್ಲ. ಆದ್ದರಿಂದ, ಪ್ಯಾನಿಕ್ ರಿಯಾಕ್ಷನ್ ಅಗತ್ಯವಿಲ್ಲ, ಆದರೆ ಸಿಂಡ್ರೋಮ್‌ಗೆ ಸಂಬಂಧಿಸಿದ ಯಾವುದೇ ರೋಗಲಕ್ಷಣಗಳು ಕಂಡು ಬಂದರೆ ಜಾಗರೂಕರಾಗಿರಿ’ ಎಂದಿದ್ದಾರೆ.

‘ನಿರಂತರವಾದ ರೋಗಿಯ ಮೇಲ್ವಿಚಾರಣೆಯಿಂದ ಸರಿಯಾದ ವೈದ್ಯಕೀಯ ಅಥವಾ ಶಸ್ತ್ರಚಿಕಿತ್ಸೆಯಿಂದ ರೋಗಿಯನ್ನು ಬದುಕುಳಿಸಬಹುದಾಗಿದೆ. ಲಸಿಕೆ ಪಡೆದವರಲ್ಲಿ ಹೆಚ್ಚಾಗಿ ಸಣ್ಣ ವಯಸ್ಸಿನವರಲ್ಲಿ ಹಾಗೂ ಮೊದಲ ಡೋಸ್ ಸ್ವೀಕರಿಸುವವರಲ್ಲಿ ಈ ರೋಗಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕೆಲವೊಮ್ಮೆ ರಕ್ತಸ್ರಾವದಿಂದ ಕಾಣಿಸಿಕೊಳ್ಳಬಹುದು’ ಎಂದಿದ್ದಾರೆ.

ಟಿಟಿಎಸ್ ಸಿಂಡ್ರೋಮ್ ಎಂದರೇನು?

ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ದೇಹದಲ್ಲಿ ರಕ್ತದ ಹೆಪ್ಪುಗಟ್ಟುವಿಕೆಯನ್ನು ಉಂಟು ಮಾಡುತ್ತದೆ. ರಕ್ತ ಹೆಪ್ಪುಗಟ್ಟುವಿಕೆಯ ಪರಿಣಾಮವಾಗಿ ಪಾರ್ಶ್ವವಾಯು, ಹೃದಯಘಾತವಾಗುವ ಸಾಧ್ಯತೆಯು ಅಧಿಕವಾಗಿದೆ. ಅದಲ್ಲದೇ ಪ್ಲೇಟ್​ಲೆಟ್​ಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ಹೆಚ್ಚುತ್ತಿದೆ ಹಕ್ಕಿ ಜ್ವರದ ಹಾವಳಿ; ಯಾವ ಆಹಾರ ಸೇವಿಸಬೇಕು? ಏನು ತಿನ್ನಬಾರದು?

ಟಿಟಿಎಸ್ ನಿಂದ ಉಂಟಾಗುವ ತೊಡಕುಗಳು

* ಆಂತರಿಕ ರಕ್ತಸ್ರಾವ

* ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ಜಠರಗಳಲ್ಲಿ ರಕ್ತಸ್ರಾವ ಅಥವಾ ಮೆದುಳಿನಲ್ಲಿ ರಕ್ತಸ್ರಾವವನ್ನು ಉಂಟುಮಾಡುತ್ತದೆ.

* ಹೃದಯಾಘಾತ

* ಹೃದಯಕ್ಕೆ ರಕ್ತದ ಹರಿವಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ