ಕೋವಿಡ್ ನಿಯಂತ್ರಣಕ್ಕಾಗಿ ಪಡೆದುಕೊಂಡವರು ಕೋವಿಶೀಲ್ಡ್ ಲಸಿಕೆ ಪಡೆದವರು ಥ್ರೊಂಬೋಸಿಸ್ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸುದ್ದಿಯು ಲಸಿಕೆ ಪಡೆದವರಲ್ಲಿ ಆತಂಕಕ್ಕೆ ಕಾರಣವಾಗಿದೆ. ಯಶೋದಾ ಆಸ್ಪತ್ರೆಯ ವೈದ್ಯರಾದ ಡಾ ವಿಶ್ವೇಶ್ವರನ್ ಬಿ ಯವರು, ‘ಲಸಿಕೆ ತೆಗೆದುಕೊಂಡ ಪ್ರತಿಯೊಬ್ಬರ ಮೇಲೆ ಪರಿಣಾಮ ಬೀರುವುದಿಲ್ಲ. ಆದ್ದರಿಂದ, ಪ್ಯಾನಿಕ್ ರಿಯಾಕ್ಷನ್ ಅಗತ್ಯವಿಲ್ಲ, ಆದರೆ ಸಿಂಡ್ರೋಮ್‌ಗೆ ಸಂಬಂಧಿಸಿದ ಯಾವುದೇ ರೋಗಲಕ್ಷಣಗಳು ಕಂಡು ಬಂದರೆ ಜಾಗರೂಕರಾಗಿರಿ’ ಎಂದಿದ್ದಾರೆ.
‘ನಿರಂತರವಾದ ರೋಗಿಯ ಮೇಲ್ವಿಚಾರಣೆಯಿಂದ ಸರಿಯಾದ ವೈದ್ಯಕೀಯ ಅಥವಾ ಶಸ್ತ್ರಚಿಕಿತ್ಸೆಯಿಂದ ರೋಗಿಯನ್ನು ಬದುಕುಳಿಸಬಹುದಾಗಿದೆ. ಲಸಿಕೆ ಪಡೆದವರಲ್ಲಿ ಹೆಚ್ಚಾಗಿ ಸಣ್ಣ ವಯಸ್ಸಿನವರಲ್ಲಿ ಹಾಗೂ ಮೊದಲ ಡೋಸ್ ಸ್ವೀಕರಿಸುವವರಲ್ಲಿ ಈ ರೋಗಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕೆಲವೊಮ್ಮೆ ರಕ್ತಸ್ರಾವದಿಂದ ಕಾಣಿಸಿಕೊಳ್ಳಬಹುದು’ ಎಂದಿದ್ದಾರೆ.
ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ದೇಹದಲ್ಲಿ ರಕ್ತದ ಹೆಪ್ಪುಗಟ್ಟುವಿಕೆಯನ್ನು ಉಂಟು ಮಾಡುತ್ತದೆ. ರಕ್ತ ಹೆಪ್ಪುಗಟ್ಟುವಿಕೆಯ ಪರಿಣಾಮವಾಗಿ ಪಾರ್ಶ್ವವಾಯು, ಹೃದಯಘಾತವಾಗುವ ಸಾಧ್ಯತೆಯು ಅಧಿಕವಾಗಿದೆ. ಅದಲ್ಲದೇ ಪ್ಲೇಟ್ಲೆಟ್ಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ.
ಇದನ್ನೂ ಓದಿ: ಹೆಚ್ಚುತ್ತಿದೆ ಹಕ್ಕಿ ಜ್ವರದ ಹಾವಳಿ; ಯಾವ ಆಹಾರ ಸೇವಿಸಬೇಕು? ಏನು ತಿನ್ನಬಾರದು?
* ಆಂತರಿಕ ರಕ್ತಸ್ರಾವ
* ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ಜಠರಗಳಲ್ಲಿ ರಕ್ತಸ್ರಾವ ಅಥವಾ ಮೆದುಳಿನಲ್ಲಿ ರಕ್ತಸ್ರಾವವನ್ನು ಉಂಟುಮಾಡುತ್ತದೆ.
* ಹೃದಯಾಘಾತ
* ಹೃದಯಕ್ಕೆ ರಕ್ತದ ಹರಿವಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ