AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತೆಕಾಯಿ ತಿನ್ನುವ ಮೊದಲು ನಿಮಗೆ ಈ ಆರೋಗ್ಯ ಸಮಸ್ಯೆ ಇದೆಯೋ, ಇಲ್ಲವೋ ತಿಳಿದುಕೊಳ್ಳಿ

ಸಾಮಾನ್ಯವಾಗಿ ಸೌತೆಕಾಯಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಆದರೆ ಆರೋಗ್ಯ ತಜ್ಞರು ಹಲವರಿಗೆ ಸೌತೆಕಾಯಿ ವಿಷಕ್ಕೆ ಸಮಾನ ಎನ್ನುತ್ತಾರೆ. ಹೌದು, ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದ್ದರೂ ಕೂಡ ಇದು ಕೆಲವರಿಗೆ ಒಳ್ಳೆಯದಲ್ಲ. ಇದು ಆಶ್ಚರ್ಯ ಉಂಟು ಮಾಡಿದರು ಸತ್ಯ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾಕೆ ಇವುಗಳನ್ನು ಸೇವನೆ ಮಾಡಬಾರದು? ಇದರಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸೌತೆಕಾಯಿ ತಿನ್ನುವ ಮೊದಲು ನಿಮಗೆ ಈ ಆರೋಗ್ಯ ಸಮಸ್ಯೆ ಇದೆಯೋ, ಇಲ್ಲವೋ ತಿಳಿದುಕೊಳ್ಳಿ
Cucumber Side Effects
ಪ್ರೀತಿ ಭಟ್​, ಗುಣವಂತೆ
|

Updated on: Jan 04, 2026 | 8:21 PM

Share

ಸೌತೆಕಾಯಿ (Cucumber) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ಹೆಚ್ಚಾಗಿ ಸಲಾಡ್, ರೈತಾ ಅಥವಾ ಜ್ಯೂಸ್ ರೂಪದಲ್ಲಿ ಸೇವನೆ ಮಾಡಲಾಗುತ್ತದೆ. ಇದರಲ್ಲಿ ಸುಮಾರು 95 ಪ್ರತಿಶತ ನೀರು ಇರುವುದರಿಂದ, ಇದು ದೇಹಕ್ಕೆ ಜಲಸಂಚಯನವನ್ನು ಒದಗಿಸುತ್ತದೆ. ಸೌತೆಕಾಯಿಗಳು ತೂಕ ಇಳಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಅದ್ಭುತವಾಗಿ ಕೆಲಸ ಮಾಡುತ್ತವೆ. ಇದಲ್ಲದೆ, ಇದು ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಆದರೆ ಇಷ್ಟೆಲ್ಲಾ ಪ್ರಯೋಜನಗಳಿದ್ದರೂ ಕೂಡ ಕೆಲವು ಆರೋಗ್ಯ ಸಮಸ್ಯೆಗಳಿರುವವರಿಗೆ ಒಳ್ಳೆಯದಲ್ಲ. ಇದು ಆರೋಗ್ಯವನ್ನು ಮತ್ತಷ್ಟು ಹದಗೆಡಿಸಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.

ಜೀರ್ಣಕಾರಿ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ;

ಆಯುರ್ವೇದದ ಪ್ರಕಾರ, ಸೌತೆಕಾಯಿ ತಿನ್ನುವುದರಿಂದ ಶೀತ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತದೆ. ಹಾಗಾಗಿ ಅಸ್ತಮಾ, ಶೀತ, ಕೆಮ್ಮು, ಕಫ, ಸೈನಸ್ ಅಥವಾ ಊತ ಸಮಸ್ಯೆ ಇರುವವರು ಸೌತೆಕಾಯಿ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು. ಅಲ್ಲದೆ, ಅತಿಯಾಗಿ ಸೌತೆಕಾಯಿ ಸೇವಿಸುವುದರಿಂದ ವಾತ ಹೆಚ್ಚಾಗುತ್ತದೆ. ಈಗಾಗಲೇ ಕೀಲು ನೋವು ಅಥವಾ ದೇಹದ ಉರಿಯೂತದಿಂದ ಬಳಲುತ್ತಿರುವವರು ಸೌತೆಕಾಯಿಯಿಂದ ದೂರವಿರಬೇಕು. ಶೆಂಗಾದಲ್ಲಿ ಫೈಬರ್ ಅಧಿಕವಾಗಿದ್ದರೂ, ಸೂಕ್ಷ್ಮ ಜೀರ್ಣಾಂಗ ವ್ಯವಸ್ಥೆ ಇರುವವರಿಗೆ ಇದು ಸ್ವಲ್ಪ ಅಸ್ವಸ್ಥತೆಯನ್ನು ಉಂಟುಮಾಡಬಹುದು. ಇದರಲ್ಲಿರುವ ಕುಕುರ್ಬಿಟಾಸಿನ್ ಎಂಬ ಸಂಯುಕ್ತವು ಜೀರ್ಣಕಾರಿ ಸಮಸ್ಯೆಗಳಿರುವವರಲ್ಲಿ ಅನಿಲ, ಉಬ್ಬುವುದು ಅಥವಾ ಅಜೀರ್ಣದಂತಹ ಲಕ್ಷಣಗಳನ್ನು ಉಂಟುಮಾಡಬಹುದು.

ಇದನ್ನೂ ಓದಿ: ಈ ಜ್ಯೂಸ್‌ ಕುಡಿಯಿರಿ, ನಿಮ್ಮ ಹೊಟ್ಟೆಯ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ

ಸೌತೆಕಾಯಿಯಲ್ಲಿ ನೀರಿನ ಅಂಶ ಹೆಚ್ಚಿರುವುದರಿಂದ, ಮೂತ್ರ ವಿಸರ್ಜನೆಯ ಸಮಸ್ಯೆಯಿಂದ ಬಳಲುತ್ತಿರುವರು ಈ ತರಕಾರಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವನೇ ಮಾಡುವುದರಿಂದ ಆಗಾಗ ಮೂತ್ರ ವಿಸರ್ಜನೆಗೆ ಹೋಗಬೇಕಾಗಿ ಬರಬಹುದು ಅಥವಾ ಕೆಲವರಲ್ಲಿ ಅಸ್ವಸ್ಥತೆ ಕಂಡುಬರಬಹುದು. ಸೌತೆಕಾಯಿಗಳನ್ನು ಸಾಮಾನ್ಯವಾಗಿ ಮಧುಮೇಹ ಇರುವವರಿಗೆ ಸುರಕ್ಷಿತವೆಂದು ಪರಿಗಣಿಸಲಾಗುತ್ತದೆ. ಆದರೆ ಸೌತೆಕಾಯಿ ಬೀಜಗಳನ್ನು ಇನ್ಸುಲಿನ್ ಅಥವಾ ಗ್ಲೂಕೋಸ್- ಕಡಿಮೆಗೊಳಿಸುವ ಔಷಧಿಗಳ ಸೇವನೆ ಮಾಡುವವರಿಗೆ ಸಮಸ್ಯೆ ಉಂಟುಮಾಡಬಹುದು. ಸೌತೆಕಾಯಿ ಬೀಜಗಳ ಅತಿಯಾದ ಸೇವನೆ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಕುಸಿತಕ್ಕೂ ಕಾರಣವಾಗಬಹುದು ಇದು ತಲೆತಿರುಗುವಿಕೆ ಮುಂತಾದ ಲಕ್ಷಣಗಳನ್ನು ಉಂಟುಮಾಡುತ್ತದೆ. ಹಾಗಾಗಿ ಆರೋಗ್ಯ ತಜ್ಞರು ಸಾಮಾನ್ಯವಾಗಿ ಊಟದ ನಂತರ ಸೌತೆಕಾಯಿಗಳನ್ನು ಸೇವನೆ ಮಾಡದಂತೆ ಸಲಹೆ ನೀಡುತ್ತಾರೆ, ಏಕೆಂದರೆ ಅವು ಜೀರ್ಣವಾಗಲು ಸಮಯ ತೆಗೆದುಕೊಳ್ಳುತ್ತದೆ. ಅಷ್ಟೇ ಅಲ್ಲ, ನಿದ್ರೆಗೂ ಭಂಗ ತರಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ