Health Tips: ಮುಟ್ಟಿನ ಸಮಯದಲ್ಲಿ ಮೊಸರು ತಿನ್ನಬಾರದೇ? ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ

ಹಲವರು ಮುಟ್ಟಿನ ಸಮಯದಲ್ಲಿ ಮೊಸರು ತಿನ್ನುವುದರಿಂದ ಋತುಚಕ್ರದ ಹರಿವಿನಲ್ಲಿ ಸಮಸ್ಯೆಯಾಗುತ್ತದೆ ಎಂದು ನಂಬುತ್ತಾರೆ. ಆದರೆ ಇದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ. ಮೊಸರು ಪ್ರೋಬಯಾಟಿಕ್‌ಗಳು, ಕ್ಯಾಲ್ಸಿಯಂ, ಮತ್ತು ಪ್ರೋಟೀನ್‌ಗಳನ್ನು ಹೊಂದಿದೆ, ಇದು ಆರೋಗ್ಯಕ್ಕೆ ಉತ್ತಮ. ಆದಾಗ್ಯೂ, ಆಮ್ಲೀಯತೆ ಅಥವಾ ಹಾಲಿನ ಅಲರ್ಜಿ ಇರುವವರು ಮೊಸರು ಸೇವನೆಯನ್ನು ತಪ್ಪಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

Health Tips: ಮುಟ್ಟಿನ ಸಮಯದಲ್ಲಿ ಮೊಸರು ತಿನ್ನಬಾರದೇ? ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ
Curd During Periods
Follow us
ಅಕ್ಷತಾ ವರ್ಕಾಡಿ
|

Updated on:Dec 03, 2024 | 3:11 PM

ಮುಟ್ಟಿನ ಸಮಯದಲ್ಲಿ ಮೊಸರು ತಿನ್ನುವುದರಿಂದ ಋತುಚಕ್ರದ ಹರಿವಿನಲ್ಲಿ ಸಮಸ್ಯೆ ಉಂಟಾಗುತ್ತದೆ ಎಂದು ಹಲವರು ನಂಬುತ್ತಾರೆ. ಆದರೆ ಯಾವುದೇ ಆಹಾರವು ಮುಟ್ಟಿನ ಹರಿವಿನ ಮೇಲೆ ಪರಿಣಾಮ ಬೀರುತ್ತದೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. ಆದಾಗ್ಯೂ, ಕೆಲವು ಆಹಾರ ಪದಾರ್ಥಗಳು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಅಥವಾ ಕಡಿಮೆ ಹಾರ್ಮೋನ್ ಮಟ್ಟದ ಮೇಲೆ ಪರಿಣಾಮ ಬೀರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಆದರೆ ನಿಮ್ಮ ಮುಟ್ಟಿನ ಮೊದಲು ನೀವು ಆಮ್ಲೀಯತೆ ಸಮಸ್ಯೆಯಿಂದ ಬಳಲುತ್ತಿದ್ದರೆ ಮೊಸರು ಸೇವನೆಯನ್ನು ಕಡಿಮೆ ಮಾಡಬೇಕು. ಯಾಕೆಂದರೆ ಮೊಸರು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಉಬ್ಬುವುದು ಹೆಚ್ಚಾಗಬಹುದು. ಇದಲ್ಲದೇ ಕೆಲವರಿಗೆ ಹಾಲಿಗೆ ಅಲರ್ಜಿ ಇರುತ್ತದೆ, ಅಂತವರು ಮೊಸರನ್ನು ತಪ್ಪಿಸಬೇಕು.

ಇದನ್ನೂ ಓದಿ: ಬೆಳಿಗ್ಗೆ ಎದ್ದು ಜೇನುತುಪ್ಪಕ್ಕೆ ಈ ಬೀಜಗಳನ್ನು ಸೇರಿಸಿ ಸೇವನೆ ಮಾಡಿ, ಹೃದಯ ಆರೋಗ್ಯವಾಗಿರುತ್ತೆ

ಪ್ರೋಬಯಾಟಿಕ್‌ಗಳು, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಹಾಲಿನ ಕೊಬ್ಬನ್ನು ಒಳಗೊಂಡಿರುವ ಕಾರಣ ಮೊಸರು ನಿಮ್ಮ ಮುಟ್ಟಿನ ಸಮಯದಲ್ಲಿ ತಿನ್ನಲು ಉತ್ತಮ ಆಹಾರವಾಗಿದೆ. ಮೊಸರಿನಲ್ಲಿ ಇರುವ ಕ್ಯಾಲ್ಸಿಯಂ ಆತಂಕ, ಮನಸ್ಥಿತಿ ಬದಲಾವಣೆ ಮತ್ತು ಖಿನ್ನತೆಯ ಭಾವನೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೇ ಮೊಸರಿನಲ್ಲಿ ಕಬ್ಬಿಣಾಂಶ ಹೇರಳವಾಗಿದ್ದು ರಕ್ತಹೀನತೆಯ ವಿರುದ್ಧ ಹೋರಾಡಲು ಸಹಾಯಕವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:10 pm, Tue, 3 December 24