AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಗ್ಗರಣೆ ಸೊಪ್ಪು ಆರೋಗ್ಯಕ್ಕೆ ಒಳ್ಳೆಯದು ಆದ್ರೆ ತಿನ್ನುವ ಮುನ್ನ ಈ ವಿಷಯಗಳು ತಿಳಿದಿರಲೇಬೇಕು!

ಒಗ್ಗರಣೆ ಸೊಪ್ಪು ಅಡುಗೆಯ ರುಚಿ ಮತ್ತು ಪರಿಮಳ ಹೆಚ್ಚಿಸುವುದಷ್ಟೇ ಅಲ್ಲ, ಹಲವು ಪೋಷಕಾಂಶಗಳನ್ನು ಹೊಂದಿದೆ. ಇದು ಬಹುತೇಕ ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದು ಎಲ್ಲರಿಗೂ ಒಳ್ಳೆಯದಲ್ಲ ಎಂಬುದು ನಿಮಗೆ ತಿಳಿದಿದೆಯೇ? ಹೌದು.ಒಳ್ಳೆಯದಾದರೂ ಕೂಡ ಇದನ್ನು ತಿನ್ನುವ ಮುನ್ನ ಕೆಲವು ವಿಷಯಗಳು ನಿಮಗೆ ತಿಳಿದಿರಬೇಕಾಗುತ್ತದೆ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ ಮತ್ತು ಯಾಕೆ ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಒಗ್ಗರಣೆ ಸೊಪ್ಪು ಆರೋಗ್ಯಕ್ಕೆ ಒಳ್ಳೆಯದು ಆದ್ರೆ ತಿನ್ನುವ ಮುನ್ನ ಈ ವಿಷಯಗಳು ತಿಳಿದಿರಲೇಬೇಕು!
Curry Leaves Side EffectsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Sep 24, 2026 | 6:15 PM

Share

ಒಗ್ಗರಣೆ ಸೊಪ್ಪು ನಮ್ಮ ಅಡುಗೆ ಮನೆಯಲ್ಲಿರುವ ಪ್ರಮುಖ ಪದಾರ್ಥಗಳಲ್ಲಿ ಒಂದು. ಸಾಂಬಾರ್, ಪಲ್ಯ, ಚಟ್ನಿ ಸೇರಿದಂತೆ ಹಲವು ಖಾದ್ಯಗಳಿಗೆ ಇದರ ಬಳಕೆ ಸಾಮಾನ್ಯ. ಇದರಿಂದ ಒಗ್ಗರಣೆ ಬೀಳದಿದ್ದರೆ ಆ ಡಿಶ್ ಕಂಪ್ಲೀಟ್ ಆಗುವುದಕ್ಕೆ ಸಾಧ್ಯವೇ ಇಲ್ಲ. ಅಷ್ಟು ಮಾತ್ರವಲ್ಲ ಇದು ಹೇರಳವಾದ ಪೋಷಕಾಂಶಗಳು ಮತ್ತು ಸಸ್ಯ ಸಂಯುಕ್ತಗಳನ್ನು ಹೊಂದಿರುವುದರಿಂದ ಸಾಮಾನ್ಯ ಆಹಾರದ ಭಾಗವಾಗಿ ಇದನ್ನು ಬಳಸಬಹುದು. ಆದರೆ ಆರೋಗ್ಯಕ್ಕೆ ಒಳ್ಳೆಯದು ಎಂದ ಮಾತ್ರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪ್ರತಿದಿನ ಸೇವಿಸುವುದು ಸೂಕ್ತ ಎಂದು ಅರ್ಥವಲ್ಲ. ವಿಶೇಷವಾಗಿ ಕೆಲವು ಆರೋಗ್ಯ ಸಮಸ್ಯೆ ಇರುವವರು ಒಗ್ಗರಣೆ ಸೊಪ್ಪನ್ನು ಔಷಧಿಯಂತೆ, ಕಷಾಯ ಅಥವಾ ಪುಡಿ ರೂಪದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವ ಮುನ್ನ ವೈದ್ಯರ ಸಲಹೆ ಪಡೆಯುವುದು ಉತ್ತಮ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ ಮತ್ತು ಯಾಕೆ ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ

ಕಿಡ್ನಿ ಸಮಸ್ಯೆ ಇರುವವರು ಎಚ್ಚರ ವಹಿಸಬೇಕು:

ಸಾಮಾನ್ಯವಾಗಿ ಕಿಡ್ನಿ ಸಂಬಂಧಿಸಿದ ಕಾಯಿಲೆ ಅಥವಾ ಕೆಲವು ರೀತಿಯ ಕಿಡ್ನಿ ಕಲ್ಲಿನ ಸಮಸ್ಯೆ ಇರುವವರು ಆಹಾರದಲ್ಲಿನ ಪೊಟ್ಯಾಸಿಯಂ ಸೇರಿದಂತೆ ಕೆಲವು ಖನಿಜಗಳ ಪ್ರಮಾಣದ ಬಗ್ಗೆ ವೈದ್ಯರ ಸಲಹೆ ಪಡೆಯಬೇಕಾಗಬಹುದು. ಆದ್ದರಿಂದ ಒಗ್ಗರಣೆ ಸೊಪ್ಪಿನ ರಸ ಅಥವಾ ಪುಡಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದನ್ನು ತಪ್ಪಿಸುವುದು ಉತ್ತಮ.

ಕಡಿಮೆ ಬಿಪಿ ಇರುವವರಿಗೆ ಒಳ್ಳೆಯದಲ್ಲ:

ಒಗ್ಗರಣೆ ಸೊಪ್ಪು ರಕ್ತದೊತ್ತಡದ ಮೇಲೆ ಪರಿಣಾಮ ಬೀರಬಹುದು ಎಂಬ ಮಾಹಿತಿಗಳಿವೆ. ಈಗಾಗಲೇ ಕಡಿಮೆ ಬಿಪಿ ಇರುವವರು ಅಥವಾ ಬಿಪಿ ಕಡಿಮೆ ಮಾಡುವ ಔಷಧ ಸೇವಿಸುವವರು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವ ಮುನ್ನ ವೈದ್ಯರ ಸಲಹೆ ಪಡೆಯಬೇಕು. ತಲೆತಿರುಗುವಿಕೆ, ದೌರ್ಬಲ್ಯ ಅಥವಾ ಮಸುಕಾದ ದೃಷ್ಟಿಯಂತಹ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ.

ಇದನ್ನೂ ಓದಿ: ಮೆಂತೆ ಸೊಪ್ಪು ತಿನ್ನುವುದರಿಂದ ಶುಗರ್ ಕಂಟ್ರೋಲ್ ಆಗುತ್ತಾ? ಇಲ್ಲಿದೆ ಆರೋಗ್ಯ ತಜ್ಞರು ನೀಡಿರುವ ಮಾಹಿತಿ

ಮಧುಮೇಹ ಇದ್ದರೆ ಸೇವಿಸುವ ಪ್ರಮಾಣ ಬಹಳ ಮುಖ್ಯ:

ಒಗ್ಗರಣೆ ಸೊಪ್ಪು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್ಸುಲಿನ್ ಅಥವಾ ಮಧುಮೇಹದ ಔಷಧಗಳನ್ನು ತೆಗೆದುಕೊಳ್ಳುವವರು ಇದನ್ನು ಹೆಚ್ಚಿನ ಪ್ರಮಾಣದಲ್ಲಿ ರಸ ಅಥವಾ ಪುಡಿ ರೂಪದಲ್ಲಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚು ಕಡಿಮೆಯಾಗುವ ಸಾಧ್ಯತೆ ಇರಬಹುದು ಹಾಗಾಗಿ ಈ ಬಗ್ಗೆ ಎಚ್ಚರಿಕೆ ಅಗತ್ಯ. ಆದರೆ ಇದರರ್ಥ ಮಧುಮೇಹ ಇರುವವರು ಒಗ್ಗರಣೆ ಸೊಪ್ಪನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದಲ್ಲ. ಸಾಮಾನ್ಯ ಅಡುಗೆಯಲ್ಲಿ ಬಳಸುವ ಪ್ರಮಾಣದಲ್ಲಿ ಎಚ್ಚರವಹಿಸಬೇಕು ಅಷ್ಟೇ.

ರಕ್ತ ತೆಳುವಾಗಿಸುವ ಔಷಧ ಸೇವಿಸುತ್ತಿದ್ದವರು ಎಚ್ಚರ ವಹಿಸಿ

ವಾರ್ಫರಿನ್‌ನಂತಹ ರಕ್ತ ಹೆಪ್ಪುಗಟ್ಟುವಿಕೆಯನ್ನು ನಿಯಂತ್ರಿಸುವ ಔಷಧಗಳನ್ನು ಸೇವಿಸುವವರು ಆಹಾರದಲ್ಲಿನ ವಿಟಮಿನ್ ಕೆ ಪ್ರಮಾಣದಲ್ಲಿ ಆಗುವ ಬದಲಾವಣೆಗಳ ಬಗ್ಗೆ ವೈದ್ಯರೊಂದಿಗೆ ಚರ್ಚಿಸುವುದು ಮುಖ್ಯ. ಒಗ್ಗರಣೆ ಸೊಪ್ಪನ್ನು ಔಷಧಿಯಂತೆ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಲು ಆರಂಭಿಸುವ ಮೊದಲು ವೈದ್ಯರ ಸಲಹೆ ಪಡೆಯಿರಿ.

ಗ್ಯಾಸ್, ಆಮ್ಲತೆ ಇದ್ದರೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಡಿ

ಕೆಲವರಿಗೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕಚ್ಚಾ ಒಗ್ಗರಣೆ ಸೊಪ್ಪು ಅಥವಾ ಅದರ ರಸ ಸೇವಿಸುವುದರಿಂದ ಹೊಟ್ಟೆಯ ಅಸ್ವಸ್ಥತೆ ಉಂಟಾಗಬಹುದು. ಎದೆಉರಿ, ವಾಕರಿಕೆ, ಗ್ಯಾಸ್ ಅಥವಾ ಅಜೀರ್ಣದಂತಹ ಸಮಸ್ಯೆಗಳು ಕಂಡುಬಂದರೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದನ್ನು ನಿಲ್ಲಿಸಿ ತಜ್ಞರ ಸಲಹೆ ಪಡೆಯಿರಿ.

ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಿ

ಗರ್ಭಾವಸ್ಥೆಯಲ್ಲಿ ಸಾಮಾನ್ಯ ಅಡುಗೆಯಲ್ಲಿ ಬಳಸುವ ಸ್ವಲ್ಪ ಪ್ರಮಾಣದ ಒಗ್ಗರಣೆ ಸೊಪ್ಪು ಮತ್ತು ಹೆಚ್ಚಿನ ಪ್ರಮಾಣದಲ್ಲಿ ರಸ ಅಥವಾ ಕಷಾಯ ಸೇವಿಸುವುದನ್ನು ಒಂದೇ ರೀತಿಯಾಗಿ ನೋಡಬಾರದು. ಗರ್ಭಿಣಿಯರು ಯಾವುದೇ ಸೊಪ್ಪು ಅಥವಾ ಗಿಡಮೂಲಿಕೆಯನ್ನು ಔಷಧಿಯಂತೆ ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವ ಮೊದಲು ವೈದ್ಯರ ಸಲಹೆ ಪಡೆಯುವುದು ಸುರಕ್ಷಿತ.

ಮುಖ್ಯವಾಗಿ: ಒಗ್ಗರಣೆ ಸೊಪ್ಪು ಆರೋಗ್ಯಕರ ಆಹಾರದ ಭಾಗವಾಗಬಹುದು. ಆದರೆ ಯಾವುದೇ ನೈಸರ್ಗಿಕ ಆಹಾರವನ್ನು ಔಷಧಿಗೆ ಪರ್ಯಾಯವಾಗಿ ಬಳಸಬಾರದು. ವೈದ್ಯರು ಸೂಚಿಸಿರುವ ಮಧುಮೇಹ, ಬಿಪಿ ಅಥವಾ ಇತರ ಔಷಧಗಳನ್ನು ನಿಲ್ಲಿಸಬೇಡಿ ಅಥವಾ ಪ್ರಮಾಣ ಬದಲಿಸಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬೆಂಗಳೂರಿನಲ್ಲಿ ಧರ್ಮಸ್ಥಳ ದೇವಸ್ಥಾನದ ಮಾದರಿಯಲ್ಲಿ ಗಣಪನ ಪ್ರತಿಷ್ಠಾಪನೆ
ಬೆಂಗಳೂರಿನಲ್ಲಿ ಧರ್ಮಸ್ಥಳ ದೇವಸ್ಥಾನದ ಮಾದರಿಯಲ್ಲಿ ಗಣಪನ ಪ್ರತಿಷ್ಠಾಪನೆ
ಚೀನಾ ಅಧ್ಯಕ್ಷರಿಗೆ ಸ್ವಾಗತ ಕೋರುವಾಗ ಮುಖ ಸಿಂಡರಿಸಿದ ಡೊನಾಲ್ಡ್ ಟ್ರಂಪ್
ಚೀನಾ ಅಧ್ಯಕ್ಷರಿಗೆ ಸ್ವಾಗತ ಕೋರುವಾಗ ಮುಖ ಸಿಂಡರಿಸಿದ ಡೊನಾಲ್ಡ್ ಟ್ರಂಪ್
3 ದಿನ ಕರ್ನಾಟಕದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
3 ದಿನ ಕರ್ನಾಟಕದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
ನ್ಯಾಯ ಕೇಳಲು ಬಂದ ಜನರಿಗೆ ದೊಡ್ಡಬಳ್ಳಾಪುರ ಇನ್ಸ್‌ಪೆಕ್ಟರ್ ಆವಾಜ್
ನ್ಯಾಯ ಕೇಳಲು ಬಂದ ಜನರಿಗೆ ದೊಡ್ಡಬಳ್ಳಾಪುರ ಇನ್ಸ್‌ಪೆಕ್ಟರ್ ಆವಾಜ್
ಬೆಂಗಳೂರು ಕಸ ಸಾಗಾಣಿಕೆ ಟೆಂಡರ್‌ನಲ್ಲಿ ಭಾರಿ ಅಕ್ರಮ ಆರೋಪ: ಇಡಿಗೆ ದೂರು
ಬೆಂಗಳೂರು ಕಸ ಸಾಗಾಣಿಕೆ ಟೆಂಡರ್‌ನಲ್ಲಿ ಭಾರಿ ಅಕ್ರಮ ಆರೋಪ: ಇಡಿಗೆ ದೂರು
ಬರ ಪಟ್ಟಿಗೆ ಹೊಸದಾಗಿ 29 ತಾಲೂಕುಗಳ ಸೇರ್ಪಡೆ
ಬರ ಪಟ್ಟಿಗೆ ಹೊಸದಾಗಿ 29 ತಾಲೂಕುಗಳ ಸೇರ್ಪಡೆ
LIVE: ವಿಧಾನ ಪರಿಷತ್​​ ಕಲಾಪದ ನಾಲ್ಕನೇ ದಿನದ ನೇರಪ್ರಸಾರ
LIVE: ವಿಧಾನ ಪರಿಷತ್​​ ಕಲಾಪದ ನಾಲ್ಕನೇ ದಿನದ ನೇರಪ್ರಸಾರ
ಮಿಡ್ ವೀಕ್ ಎಲಿಮಿನೇಷನ್​ನಲ್ಲಿ ಬಿಗ್ ಬಾಸ್ ಮನೆಯಿಂದ ಹೊರಹೋಗಿದ್ದು ಯಾರು?
ಮಿಡ್ ವೀಕ್ ಎಲಿಮಿನೇಷನ್​ನಲ್ಲಿ ಬಿಗ್ ಬಾಸ್ ಮನೆಯಿಂದ ಹೊರಹೋಗಿದ್ದು ಯಾರು?
ಮಾತಿಗಿಂತ ಕ್ರಿಯೆ ಮುಖ್ಯ, ಸೇವೆಯೇ ನಮ್ಮ ಪರಮ ಧರ್ಮ: ನರೇಂದ್ರ ಮೋದಿ
ಮಾತಿಗಿಂತ ಕ್ರಿಯೆ ಮುಖ್ಯ, ಸೇವೆಯೇ ನಮ್ಮ ಪರಮ ಧರ್ಮ: ನರೇಂದ್ರ ಮೋದಿ
ಗಿರಿನಗರದಲ್ಲಿ ಕಾಂಪೌಂಡ್ ಗೋಡೆ ಕುಸಿತ: ಅದೃಷ್ಟವಶಾತ್ ತಪ್ಪಿದ ದೊಡ್ಡ ದುರಂತ
ಗಿರಿನಗರದಲ್ಲಿ ಕಾಂಪೌಂಡ್ ಗೋಡೆ ಕುಸಿತ: ಅದೃಷ್ಟವಶಾತ್ ತಪ್ಪಿದ ದೊಡ್ಡ ದುರಂತ