AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes: ಪ್ರತಿದಿನ ಬೆಳಿಗ್ಗೆ ಈ ಚಹಾ ಕುಡಿಯುವುದರಿಂದ ಮಧುಮೇಹವನ್ನು ತಡೆಯಬಹುದು

ದೀರ್ಘಕಾಲದ ಕಾಯಿಲೆಗಳಲ್ಲಿ ಮಧುಮೇಹವೂ ಒಂದು. ಒಮ್ಮೆ ನೀವು ಈ ಮಧುಮೇಹದ ದಾಳಿಗೆ ಒಳಗಾದರೆ, ನಿಮ್ಮ ಜೀವನದುದ್ದಕ್ಕೂ ನೀವು ಅನುಭವಿಸಬೇಕಾಗುತ್ತದೆ. ಬಂದ ತನಕ ನಿಯಂತ್ರಿಸುವುದನ್ನು ಬಿಟ್ಟರೆ ಅದಕ್ಕೆ ಔಷಧವಿಲ್ಲ. ಆದ್ದರಿಂದ ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಪ್ರತಿದಿನ ಬೆಳಿಗ್ಗೆ ಈ ಚಹಾ ಕುಡಿಯಿರಿ.

Diabetes: ಪ್ರತಿದಿನ ಬೆಳಿಗ್ಗೆ ಈ ಚಹಾ ಕುಡಿಯುವುದರಿಂದ ಮಧುಮೇಹವನ್ನು ತಡೆಯಬಹುದು
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Dec 12, 2023 | 12:52 PM

Share

ದೀರ್ಘಕಾಲದ ಕಾಯಿಲೆಗಳಲ್ಲಿ ಮಧುಮೇಹವೂ ಒಂದು. ಒಮ್ಮೆ ನೀವು ಈ ಮಧುಮೇಹದ ದಾಳಿಗೆ ಒಳಗಾದರೆ, ನಿಮ್ಮ ಜೀವನದುದ್ದಕ್ಕೂ ನೀವು ಅನುಭವಿಸಬೇಕಾಗುತ್ತದೆ. ಬಂದ ತನಕ ನಿಯಂತ್ರಣದಲ್ಲಿರಿಸುವುದನ್ನು ಬಿಟ್ಟರೆ ಅದಕ್ಕೆ ಸಂಪೂರ್ಣ ಗುಣಪಡಿಸುವ ಔಷಧವಿಲ್ಲ. ಭಾರತದಲ್ಲಿ ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಅನೇಕ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ.

ಇತ್ತೀಚಿನ ಅಧ್ಯಯನದ ಪ್ರಕಾರ, ಪ್ರತಿದಿನ ಬ್ಲ್ಯಾಕ್ ಟೀ ಕುಡಿಯುವವರಲ್ಲಿ ಮಧುಮೇಹದ ಅಪಾಯವು ಕಡಿಮೆಯಾಗುತ್ತದೆ ಎಂದು ತಿಳಿದುಬಂದಿದೆ. ಬ್ಲ್ಯಾಕ್ ಟೀ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದಲ್ಲದೇ ಹೊಟ್ಟೆಯ ಆರೋಗ್ಯವನ್ನು ಕಾಪಾಡುವ ಪೋಷಕಾಂಶಗಳೂ ಇದರಲ್ಲಿವೆ. ಪ್ರತಿದಿನ ಬೆಳಿಗ್ಗೆ ಕುಡಿಯುವುದರಿಂದ 50 ರಷ್ಟು ಮಧುಮೇಹದ ಸಾಧ್ಯತೆ ಕಡಿಮೆಯಾಗುತ್ತದೆ ಎಂದು ತಿಳಿದುಬಂದಿದೆ.

ಬ್ಲ್ಯಾಕ್ ಟೀಯ ಅದ್ಭುತ ಪ್ರಯೋಜನಗಳು:

ಸುಮಾರು ಒಂದು ಮಿಲಿಯನ್ ವಯಸ್ಕರ ಮೇಲೆ ಅಧ್ಯಯನವನ್ನು ನಡೆಸಿ, ಅವರಿಗೆ ವಿವಿಧ ರೀತಿಯ ಚಹಾವನ್ನು ನೀಡಲಾಯಿತು. ಆ ಚಹಾಗಳ ಪ್ರಭಾವ ಪರಿಶೀಲಿಸಲು, ಈ ಅನುಕ್ರಮದಲ್ಲಿ, ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ಪರೀಕ್ಷಿಸಲಾಯಿತು. ಇತರ ಚಹಾಗಳಿಗೆ ಹೋಲಿಸಿದರೆ, ಬ್ಲ್ಯಾಕ್ ಟೀ ಕುಡಿಯುವವರಲ್ಲಿ ರಕ್ತದಲ್ಲಿನ ಸಕ್ಕರೆಯ ಕಡಿಮೆ ಎಂದು ಕಂಡುಹಿಡಿದಿದ್ದಾರೆ.

ಇದನ್ನೂ ಓದಿ: ಮಧುಮೇಹ ಆರಂಭವಾಗುವ ಲಕ್ಷಣಗಳು ಹೀಗಿರುತ್ತವೆ, ಎಚ್ಚರವಹಿಸಿ!

ಗ್ರೀನ್​ ಟೀಯಿಂದ ಮಧುಮೇಹ ನಿಯಂತ್ರಣ:

ಬ್ಲ್ಯಾಕ್ ಟೀ ಮಾತ್ರವಲ್ಲ, ಗ್ರೀನ್ ಟೀ ಕೂಡ ಮಧುಮೇಹವನ್ನು ತಡೆಯುವ ಗುಣವಿದೆ ಎಂದು ತಿಳಿದುಬಂದಿದೆ. ಮತ್ತೊಂದು ಅಧ್ಯಯನದಲ್ಲಿ 10 ಲಕ್ಷ ಜನರಿಗೆ ಗ್ರೀನ್​ ಟೀ ಕುಡಿಯಲು ಹೇಳಲಾಯಿತು. ಈ ಸಂಶೋಧನೆಯಲ್ಲಿ ಟೈಪ್ 2 ಡಯಾಬಿಟಿಸ್ ಬರುವ ಸಾಧ್ಯತೆ ಶೇ.17ರಷ್ಟು ಕಡಿಮೆಯಾಗಿದೆ. ಹಾಗಾಗಿ ಗ್ರೀನ್ ಟೀ ಕೂಡ ಸಕ್ಕರೆ ನಿಯಂತ್ರಣದಲ್ಲಿ ಸಹಾಯ ಮಾಡುತ್ತದೆ ಎಂದು ತಿಳಿದುಬಂದಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ