AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dates Benefits: ನೆನೆಸಿದ ಖರ್ಜೂರ ತಿನ್ನುವುದರಿಂದ ಹೃದಯಕ್ಕೆ ಒಳ್ಳೆಯದು

ಖರ್ಜೂರ ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ದಿನಕ್ಕೆ ಎರಡರಿಂದ ನಾಲ್ಕು ಖರ್ಜೂರಗಳನ್ನು ಸೇವಿಸುವುದು ತುಂಬಾ ಒಳ್ಳೆಯದು. ಇವು ಒಳ್ಳೆಯದಾದರೂ, ದೇಹವನ್ನು ಬಿಸಿ ಮಾಡುವ ಅಥವಾ ದೇಹವನ್ನು ಬೆಚ್ಚಗಿಡುವ ಶಕ್ತಿ ಇರುವುದರಿಂದ ಅವುಗಳನ್ನು ಸಾಮಾನ್ಯವಾಗಿ ಮಳೆಗಾಲ, ಚಳಿಗಾಲ ಅಥವಾ ತಂಪಾದ ಪ್ರದೇಶಗಳಲ್ಲಿ ಹೆಚ್ಚಾಗಿ ತಿನ್ನಲಾಗುತ್ತದೆ. ಖರ್ಜೂರ ತಿನ್ನುವುದರಿಂದ ಸಿಗುವ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

Dates Benefits: ನೆನೆಸಿದ ಖರ್ಜೂರ ತಿನ್ನುವುದರಿಂದ ಹೃದಯಕ್ಕೆ ಒಳ್ಳೆಯದು
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jun 10, 2024 | 4:56 PM

Share

ಪ್ರಾಚೀನ ಕಾಲದಿಂದ ಆಧುನಿಕ ಪೋಷಣೆಯವರೆಗೆ, ಖರ್ಜೂರವನ್ನು ಪ್ರಪಂಚದಾದ್ಯಂತ ಅನೇಕ ಪಾಕಪದ್ಧತಿಗಳಲ್ಲಿ ಪ್ರಧಾನವಾಗಿ ಬಳಸಲಾಗುತ್ತದೆ. ಈ ಒಣ ಹಣ್ಣುಗಳು ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ದಿನಕ್ಕೆ ಎರಡರಿಂದ ನಾಲ್ಕು ಖರ್ಜೂರಗಳನ್ನು ಸೇವಿಸುವುದು ತುಂಬಾ ಒಳ್ಳೆಯದು. ಇವು ಒಳ್ಳೆಯದಾದರೂ, ದೇಹವನ್ನು ಬಿಸಿ ಮಾಡುವ ಅಥವಾ ದೇಹವನ್ನು ಬೆಚ್ಚಗಿಡುವ ಶಕ್ತಿ ಇರುವುದರಿಂದ ಅವುಗಳನ್ನು ಸಾಮಾನ್ಯವಾಗಿ ಮಳೆಗಾಲ, ಚಳಿಗಾಲ ಅಥವಾ ತಂಪಾದ ಪ್ರದೇಶಗಳಲ್ಲಿ ಹೆಚ್ಚಾಗಿ ತಿನ್ನಲಾಗುತ್ತದೆ. ಖರ್ಜೂರ ತಿನ್ನುವುದರಿಂದ ಸಿಗುವ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

ಬೇಸಿಗೆಯಲ್ಲಿ ಖರ್ಜೂರ ತಿನ್ನಬೇಕೇ ಅಥವಾ ಬೇಡವೇ ಎಂಬ ಅನುಮಾನ ಅನೇಕ ಜನರಿಗೆ ಇದ್ದೆ ಇದೆ. ಆದರೆ ತಜ್ಞರು ಹೇಳುವ ಪ್ರಕಾರ ಇದನ್ನು ಯಾವ ಸಮಯದಲ್ಲಿಯೂ ಸೇವನೆ ಮಾಡಬಹುದು. ಈಗ ಮಳೆಗಾಲ ಆರಂಭವಾಗಿರುವುದರಿಂದ ಯಾವ ಕಾಲದಲ್ಲಿಯೂ ತೊಂದರೆ ಇಲ್ಲದೆ ಸೇವನೆ ಮಾಡಬಹುದು. ಆದರೆ ಹೆಚ್ಚು ತಿನ್ನಬೇಡಿ. 1-2 ಖರ್ಜೂರವನ್ನು ನೆನೆಸಿ ಪ್ರತಿದಿನ ತಿನ್ನಬಹುದು. ಇದು ಹೃದಯದ ಆರೋಗ್ಯದಿಂದ ಹಿಡಿದು ಚಯಾಪಚಯವನ್ನು ಹೆಚ್ಚಿಸುವವರೆಗೆ ಅನೇಕ ರೀತಿಯಲ್ಲಿ ಸಹಾಯ ಮಾಡುತ್ತದೆ. ಇವು ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಉಪಯುಕ್ತವಾಗಿವೆ.

ಇದನ್ನೂ ಓದಿ: ಈ ಎಲೆಯ ರಸವನ್ನು ಸ್ವಲ್ಪ ಕುಡಿದರೆ ಸಾಕು ಎಲ್ಲಾ ರೋಗಗಳು ದೂರವಾಗುತ್ತೆ

ಕೀಲು ನೋವಿಗೆ ಒಳ್ಳೆಯದು

ಖರ್ಜೂರದಲ್ಲಿರುವ ವಿಟಮಿನ್ ಬಿ 12 ದೇಹಕ್ಕೆ ಅಗತ್ಯವಿರುವ ಪ್ರಮುಖ ಪೋಷಕಾಂಶಗಳಲ್ಲಿ ಒಂದಾಗಿದೆ. ಇದು ಮೂಳೆಗಳು ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ. ಕೆಂಪು ರಕ್ತ ಕಣಗಳನ್ನು ಸಹ ಉತ್ಪಾದಿಸುತ್ತದೆ. ಇದಲ್ಲದೆ, ವಿಟಮಿನ್ ಬಿ 12 ಮಾನಸಿಕ ಆರೋಗ್ಯಕ್ಕೆ ಬಹಳ ಮುಖ್ಯವಾಗಿದೆ. ಖರ್ಜೂರದಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದೆ. ಆದ್ದರಿಂದ ನಿಮಗೆ ಮೂಳೆ ಸಮಸ್ಯೆಗಳು ಮತ್ತು ಕೀಲು ನೋವು ಇದ್ದರೆ ನೀವು ಪ್ರತಿದಿನ ಖರ್ಜೂರ ಸೇವನೆ ಮಾಡಬಹುದು. ಇದು ಮೂಳೆಗಳನ್ನು ಬಲಪಡಿಸುತ್ತದೆ. ಮೂಳೆ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮಲಬದ್ಧತೆ ಸಮಸ್ಯೆ ಇರುವವರು ತಮ್ಮ ಆಹಾರದಲ್ಲಿ ಖರ್ಜೂರವನ್ನು ಸೇರಿಸಿಕೊಳ್ಳಿ. ಇದರಲ್ಲಿ ಫೈಬರ್ ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಅದಕ್ಕಾಗಿಯೇ ಪ್ರತಿದಿನ ಬೆಳಿಗ್ಗೆ ನೆನೆಸಿದ ಖರ್ಜೂರವನ್ನು ತಿನ್ನುವುದರಿಂದ ಮಲಬದ್ಧತೆಯ ಸಮಸ್ಯೆ ಕಡಿಮೆಯಾಗುತ್ತದೆ ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?