AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲೇಕೆ ಖರ್ಜೂರವನ್ನು ಹೆಚ್ಚೆಚ್ಚು ಸೇವನೆ ಮಾಡಬೇಕು? ಇದರ ಹಿಂದಿದೆ ಮಹತ್ವದ ಕಾರಣ

ಖರ್ಜೂರ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು ತಿಳಿದ ವಿಚಾರ. ಇವುಗಳಲ್ಲಿ ಹಲವು ರೀತಿಯ ಪೋಷಕಾಂಶಗಳಿರುವುದರಿಂದ ನಿಯಮಿತವಾಗಿ ಸೇವಿಸಬಹುದು. ಅದರಲ್ಲಿಯೂ ಚಳಿಗಾಲದಲ್ಲಿ ಖರ್ಜೂರ ಸೇವನೆ ಮಾಡುವುದು ದೇಹಕ್ಕೆ ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಬೇರೆ ಸಮಯದಲ್ಲಿ ವಾರಕ್ಕೆ ಒಂದು, ಎರಡು ಖರ್ಜೂರ ಸೇವನೆ ಮಾಡುತ್ತಿದ್ದರೆ ಚಳಿಗಾಲದಲ್ಲಿ ದಿನಕ್ಕೆ ಒಂದಾದರೂ ತಿನ್ನಬೇಕು ಇದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಹಾಗಾದರೆ ಖರ್ಜೂರಕ್ಕೂ, ಚಳಿಗಾಲಕ್ಕೂ ಇರುವ ಸಂಬಂಧವೇನು, ಯಾಕೆ ಈ ಸಮಯದಲ್ಲಿ ಹೆಚ್ಚಾಗಿ ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಚಳಿಗಾಲದಲ್ಲೇಕೆ ಖರ್ಜೂರವನ್ನು ಹೆಚ್ಚೆಚ್ಚು ಸೇವನೆ ಮಾಡಬೇಕು? ಇದರ ಹಿಂದಿದೆ ಮಹತ್ವದ ಕಾರಣ
Dates In Winter
ಪ್ರೀತಿ ಭಟ್​, ಗುಣವಂತೆ
|

Updated on: Oct 30, 2025 | 4:33 PM

Share

ಖರ್ಜೂರ (Dates) ಸೇವನೆ ಮಾಡುವುದು ಆರೋಗ್ಯಕ್ಕೆ ವರದಾನವಿದ್ದಂತೆ. ಇವುಗಳಲ್ಲಿರುವ ಪೋಷಕಾಂಶಗಳು ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ನೀಡುವುದಕ್ಕೆ ಸಹಾಯ ಮಾಡುತ್ತದೆ. ಮಾತ್ರವಲ್ಲ, ಈ ಖರ್ಜೂರ ಗಳನ್ನು ದಿನನಿತ್ಯ ಸೇವನೆ ಮಾಡುವ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಕ್ಯಾಲೋರಿ, ಕಾರ್ಬೋಹೈಡ್ರೇಟ್‌, ಫೈಬರ್, ಪ್ರೋಟೀನ್, ಪೊಟ್ಯಾಸಿಯಮ್, ಮೆಗ್ನೀಸಿಯಮ್, ತಾಮ್ರ, ಮ್ಯಾಂಗನೀಸ್, ಕಬ್ಬಿಣ, ವಿಟಮಿನ್ ಬಿ6 ಮತ್ತು ಉತ್ಕರ್ಷಣ ನಿರೋಧಕಗಳನ್ನು ಪಡೆದುಕೊಳ್ಳಬಹುದು. ಮಾತ್ರವಲ್ಲ, ಡಾ. ಮೇಧಾವಿ ಗೌತಮ್ (Dr. Medhavi Gautam) ಅವರು ಹೇಳುವ ಪ್ರಕಾರ, ಚಳಿಗಾಲದಲ್ಲಿ ಖರ್ಜೂರವನ್ನು ಹೆಚ್ಚಾಗಿ ಸೇವನೆ ಮಾಡಬೇಕು. ಬೇರೆ ಸಮಯದಲ್ಲಿ ವಾರಕ್ಕೆ ಒಂದು, ಎರಡು ಸೇವನೆ ಮಾಡುತ್ತಿದ್ದರೆ ಚಳಿಗಾಲದಲ್ಲಿ ದಿನಕ್ಕೆ ಒಂದಾದರೂ ತಿನ್ನಬೇಕು ಇದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಹಾಗಾದರೆ ಖರ್ಜೂರಕ್ಕೂ ಚಳಿಗಾಲಕ್ಕೂ ಇರುವ ಸಂಬಂಧವೇನು, ಯಾಕೆ ಈ ಸಮಯದಲ್ಲಿ ಹೆಚ್ಚಾಗಿ ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಚಳಿಗಾಲದಲ್ಲಿ ಏಕೆ ಹೆಚ್ಚಾಗಿ ಸೇವನೆ ಮಾಡಬೇಕು?

ಡಾ. ಮೇಧಾವಿ ಗೌತಮ್ ಹೇಳುವ ಪ್ರಕಾರ, ಚಳಿಗಾಲದಲ್ಲಿ ಖರ್ಜೂರ ಸೇವನೆ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಕನಿಷ್ಠ ಪಕ್ಷ ನೀವು ವಾರದಲ್ಲಿ ಎರಡರಿಂದ ಮೂರು ಬಾರಿಯಾದರೂ ಖರ್ಜೂರವನ್ನು ಸೇವನೆ ಮಾಡಬೇಕು. ಇದು ಕೆಮ್ಮು ಮತ್ತು ಶೀತಗಳು ಬರದಂತೆ ತಡೆಯುತ್ತದೆ ಮತ್ತು ದೇಹವು ಬೆಚ್ಚಗಿರುವಂತೆ ಮಾಡುತ್ತದೆ. ಹಾಗಾಗಿ ರಾತ್ರಿ ಹಾಲಿನೊಂದಿಗೆ ಇವುಗಳನ್ನು ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಅವುಗಳಲ್ಲಿ ಗ್ಲೂಕೋಸ್, ಸುಕ್ರೋಸ್ ಮತ್ತು ಫ್ರಕ್ಟೋಸ್‌ನಂತಹ ನೈಸರ್ಗಿಕ ಸಕ್ಕರೆಗಳಿದ್ದು, ಅವು ದೇಹಕ್ಕೆ ಶಕ್ತಿಯನ್ನು ಒದಗಿಸಲು ಕೂಡ ಸಹಾಯ ಮಾಡುತ್ತವೆ. ಮಾತ್ರವಲ್ಲ ರಾತ್ರಿ ಬಿಸಿ ಹಾಲಿನಲ್ಲಿ ಕುದಿಸಿದ ಖರ್ಜೂರ ತಿನ್ನುವುದು ಕೂಡ ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಸಾಧ್ಯವಾದಲ್ಲಿ ನೀವು ಹಗಲಿನಲ್ಲಿ 2 ರಿಂದ 3 ಖರ್ಜೂರ ತಿನ್ನಬಹುದು. ಅವು ನೈಸರ್ಗಿಕವಾಗಿ ಸಕ್ಕರೆಯನ್ನು ಹೊಂದಿರುವುದರಿಂದ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ.

ಸ್ನಾಯು ನೋವಿನಿಂದ ಮುಕ್ತಿ ಪಡೆಯಬಹುದು

ಖರ್ಜೂರದಲ್ಲಿ ಉತ್ತಮ ಪ್ರಮಾಣದ ಮೆಗ್ನೀಸಿಯಮ್ ಇದ್ದು ಸ್ನಾಯು ನೋವಿನಿಂದ ಪರಿಹಾರ ನೀಡುತ್ತದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಅಲ್ಲಲ್ಲಿ ನೋವುಗಳು ಕಂಡುಬರುವ ಪ್ರಮಾಣ ಹೆಚ್ಚಾಗಿರುವುದರಿಂದ, ಇದರಿಂದ ಪರಿಹಾರ ಪಡೆಯಲು ಖರ್ಜೂರ ಬಹಳ ಒಳ್ಳೆಯ ಆಯ್ಕೆ. ಇವುಗಳಲ್ಲಿರುವ ವಿಟಮಿನ್ ಎ ಅಂಶ ದೃಷ್ಟಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಸಹಕಾರಿಯಾಗಿದೆ. ನಿಮಗೆ ಖರ್ಜೂರವನ್ನು ಹಾಗೆ ತಿನ್ನಲು ಇಷ್ಟವಾಗದಿದ್ದಲ್ಲಿ ಹಾಲಿನಲ್ಲಿ ಕುದಿಸಿ, ಮಿಶ್ರಣ ಮಾಡಿ ಅಥವಾ ಸ್ಮೂಥಿ ಮಾಡಿಯೂ ಸೇವನೆ ಮಾಡಬಹುದು.

ಇದನ್ನೂ ಓದಿ: ಪ್ರತಿದಿನ ಒಂದೇ ಒಂದು ಖರ್ಜೂರ ತಿಂದರೆ ಏನಾಗುತ್ತೆ ಗೊತ್ತಾ? 99% ಜನರಿಗೆ ಈ ರಹಸ್ಯ ತಿಳಿದಿಲ್ಲ

ಖರ್ಜೂರ ಯಾರಿಗೆ ಒಳ್ಳೆಯದಲ್ಲ

ಸಾಮಾನ್ಯವಾಗಿ ಖರ್ಜೂರದಲ್ಲಿ ನೈಸರ್ಗಿಕ ಸಕ್ಕರೆ ಅಂಶ ಇರುವುದರಿಂದ ಮಧುಮೇಹ ಇರುವವರು ಇವುಗಳ ಸೇವನೆ ಮಾಡುವುದನ್ನು ತಪ್ಪಿಸಬೇಕು. ಹೆಚ್ಚುವರಿಯಾಗಿ, ಯಾರಿಗಾದರೂ ಈಗಾಗಲೇ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿದ್ದರೆ, ಅವರು ಖರ್ಜೂರ ಸೇವನೆ ಮಾಡುವ ಮೊದಲು ಆರೋಗ್ಯ ತಜ್ಞರನ್ನು ಸಂಪರ್ಕಿಸಬೇಕು. ಮಾತ್ರವಲ್ಲ ದಿನಕ್ಕೆ 4 ಕ್ಕಿಂತ ಹೆಚ್ಚು ಖರ್ಜೂರ ತಿನ್ನುವುದು ಒಳ್ಳೆಯದಲ್ಲ. ಯಾಕೆಂದರೆ ಇವುಗಳಲ್ಲಿ ಬಹಳಷ್ಟು ನೈಸರ್ಗಿಕ ಸಕ್ಕರೆ ಅಂಶ ಇರುವುದರಿಂದ ಮಿತ ಪ್ರಮಾಣದಲ್ಲಿ ಸೇವಿಸುವುದು ಬಹಳ ಒಳ್ಳೆಯದು. ಇದಲ್ಲದೆ, ಅತಿಯಾದ ಸೇವನೆಯು ವಾಂತಿ ಅಥವಾ ಅತಿಸಾರಕ್ಕೆ ಕಾರಣವಾಗಬಹುದು. ಆದ್ದರಿಂದ, ಇವುಗಳನ್ನು ಮಿತವಾಗಿ ಸೇವನೆ ಮಾಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ