Fruits: ವಿವಿಧ ಬಗೆಯ ಹಣ್ಣುಗಳ ಸೇವನೆ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ?

Health Care: ನಿಮ್ಮ ಸುತ್ತ- ಮುತ್ತಲು ಸಿಗುವ ಹಣ್ಣುಗಳನ್ನು ಸೇವಿಸುವ ಮೂಲಕ ನಿಮ್ಮ ದೇಹವನ್ನು ಸದೃಢವಾಗಿರಿಸಿಕೊಳ್ಳಿ. ಆರೋಗ್ಯದ ಕುರಿತಾಗಿ ಯಾವಾಗಲೂ ನಿರ್ಲಕ್ಷ್ಯ ಬೇಡ.

Fruits: ವಿವಿಧ ಬಗೆಯ ಹಣ್ಣುಗಳ ಸೇವನೆ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ?
ಸಂಗ್ರಹ ಚಿತ್ರ
Follow us
TV9 Web
| Updated By: shivaprasad.hs

Updated on: Oct 16, 2021 | 8:18 AM

ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಜತೆಗೆ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸಲು ಸಹಾಯ ಮಾಡುತ್ತವೆ. ನೈಸರ್ಗಿಕವಾಗಿ ಸಿಗುವ ಹಣ್ಣುಗಳು ಅನೇಕ ಪೌಷ್ಟಿಕ ಗುಣಗಳನ್ನು ಹೊಂದಿರುತ್ತವೆ. ಹಾಗಿರುವಾಗ ನಿಮ್ಮ ಸುತ್ತ- ಮುತ್ತಲು ಸಿಗುವ ಹಣ್ಣುಗಳನ್ನು ಸೇವಿಸುವ ಮೂಲಕ ನಿಮ್ಮ ದೇಹವನ್ನು ಸದೃಢವಾಗಿರಿಸಿಕೊಳ್ಳಿ. ಆರೋಗ್ಯದ ಕುರಿತಾಗಿ ಯಾವಾಗಲೂ ನಿರ್ಲಕ್ಷ್ಯ ಬೇಡ.

ಸೀತಾಫಲ ಸೀತಾಫಲ ಹಣ್ಣಿನಲ್ಲಿ ಪೊಟ್ಯಾಶಿಯಂ, ಫೈಬರ್ ಮತ್ತು ವಿಟಮಿನ್ ಬಿ6 ಅಧಿಕವಾಗಿರುತ್ತದೆ. ಜತೆಗೆ ಸೀತಾಫಲ ಹಣ್ಣು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಹೀಗಿರುವಾಗ ಮನೆಯಲ್ಲಿಯೇ ಬೆಳೆದ ಸೀತಾಫಲ ಹಣ್ಣನ್ನು ಸೇವಿಸುವ ಮೂಲಕ ಹೆಚ್ಚಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಬಾಳೆಹಣ್ಣು ಬಾಳೆಹಣ್ಣು ಜೀರ್ಣಕ್ರಿಯೆ ಸಮಸ್ಯೆಗೆ ಒಳ್ಳೆಯದು. ಜೀರ್ಣಕ್ರಿಯೆಯನ್ನು ಸುಧಾರಿಸಲು ಬಾಳೆಹಣ್ಣು ತಿನ್ನುವುದಾಗಿ ತಜ್ಞರು ಸಲಹೆ ನೀಡುತ್ತಾರೆ. ಅದಕ್ಕಾಗಿಯೇ ಊಟವಾದ ತಕ್ಷಣ ಒಂದು ಬಾಳೆಹಣ್ಣು ತಿನ್ನುವಂತೆ ಸಲಹೆ ನೀಡುವುದು. ಬಾಳೆಹಣ್ಣು ಸೇವಿಸುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಸಿಕೊಳ್ಳಬಹುದು.

ಕಿತ್ತಳೆ ಹಣ್ಣು ನಿಯಮಿತವಾಗಿ ಕಿತ್ತಳೆ ಹಣ್ಣನ್ನು ಸೇವಿಸುವ ಅಭ್ಯಾಸದಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದರಿಂದ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಿಕೊಳ್ಳಬಹುದು. ಜತೆಗೆ ಮಲಬದ್ಧತೆ ಸಮಸ್ಯೆ ಇರುವವರು ಕಿತ್ತಳೆ ಹಣ್ಣು ಸೇವನೆಯಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ ಇರುವುದರಿಂದ ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಎಲ್ಲಾ ಹಣ್ಣುಗಳು ಆರೋಗ್ಯಕ್ಕೆ ವಿವಿಧ ಪೋಷಕಾಂಶಗಳನ್ನು ಒದಗಿಸುತ್ತವೆ. ಅದರಲ್ಲಿಯು ಮುಖ್ಯವಾಗಿ ನಿಮ್ಮ ಸುತ್ತ ಮುತ್ತಲು ಬೆಳೆದುರುವ ಹಣ್ಣುಗಳು ನಿಮ್ಮ ಆರೋಗ್ಯವನ್ನು ಸುಧಾರಿಸುವುದರಿಂದ ಹಣ್ಣುಗಳ ಸೇವನೆಯನ್ನು ಅಭ್ಯಾಸದಲ್ಲಿಟ್ಟುಕೊಳ್ಳಿ. ವಿವಿಧ ಹಣ್ಣುಗಳನ್ನು ಸೇವಿಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಿ. ಸದೃಢ ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಪಡೆದುಕೊಳ್ಳಿ.

ಇದನ್ನೂ ಓದಿ:

Health Tips: ಬೆಳಿಗ್ಗೆ ವಾಕಿಂಗ್ ಮಾಡುವಾಗ ಮೊಬೈಲ್ ಬಳಸುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ತಿಳಿಯಿರಿ

Health Tips: ಪ್ರತಿನಿತ್ಯ ನೀವು ಮಾಡುವ ಈ ಕೆಲವು ತಪ್ಪುಗಳು ನಿಮ್ಮ ಆರೋಗ್ಯವನ್ನು ಇನ್ನಷ್ಟು ದುರ್ಬಲಗೊಳಿಸುತ್ತದೆ!