Pregnant Women: ಡೆಂಘಿ ಜ್ವರ ಗರ್ಭಿಣಿ ಹಾಗೂ ಭ್ರೂಣದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ?

ಡೆಂಘಿಯಂತಹ ಕಾಯಿಲೆಗಳಿಗೆ ಗರ್ಭಿಣಿಯರು ಬೇಗ ಗುರಿಯಾಗುತ್ತಾರೆ. ಯಾಕೆಂದರೆ ಗರ್ಭಾವಸ್ಥೆಯ ಹಂತದಲ್ಲಿ ಪ್ರತಿರಕ್ಷಣಾ ವ್ಯವಸ್ಥೆಗಳು ಭ್ರೂಣದ ಬೆಳವಣಿಗೆಗೂ ಬೆಂಬಲವಾಗಿರುವುದರಿಂದ ಪ್ರತಿರಕ್ಷಣಾ ವ್ಯವಸ್ಥೆಯಲ್ಲಿ ಏರುಪೇರಾಗುತ್ತವೆ. ಆದ್ದರಿಂದ ಗರ್ಭಿಣಿಯರು ಹಾಗೂ ಭ್ರೂಣದ ಮೇಲೆ ಡೆಂಘಿ ಹೇಗೆ ಪರಿಣಾಮ ಬೀರುತ್ತದೆ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Pregnant Women: ಡೆಂಘಿ ಜ್ವರ  ಗರ್ಭಿಣಿ ಹಾಗೂ ಭ್ರೂಣದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ?
Dengue FeverImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on:Oct 03, 2023 | 3:04 PM

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ  ನಿರಂತರವಾಗಿ ಡೆಂಘಿ ಜ್ವರ ಏರಿಕೆಯಾಗ್ತಿದೆ. ರಾಷ್ಟ್ರರಾಜಧಾನಿಯಲ್ಲಿ ಕಳೆದ ವಾರ 2600 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಸೊಳ್ಳೆಗಳಿಂದ ಹರಡುವ ಕಾಯಿಲೆಗಳು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ. ವೃದ್ಧರು ಮತ್ತು ಮಕ್ಕಳನ್ನು ಹೊರತುಪಡಿಸಿ, ಗರ್ಭಿಣಿಯರು ವೇಗವಾಗಿ ಡೆಂಗ್ಯೂಗೆ ಒಳಗಾಗುತ್ತಾರೆ. ಇದು ಕೇವಲ ಗರ್ಭಿಣಿಯರಿಗೆ ಮಾತ್ರವಲ್ಲದೇ ಭ್ರೂಣದ ಮೇಲೂ ಗಂಭೀರ ಪರಿಣಾಮವನ್ನುಂಟು ಮಾಡಬಹುದು.

ಗರ್ಭಾವಸ್ಥೆಗೆ ಸಂಬಂಧಿಸಿದ ಡೆಂಘಿ ಜ್ವರವು ತಾಯಿ ಮತ್ತು ಭ್ರೂಣದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ. ಆದಾಗ್ಯೂ, ಸರಿಯಾದ ಔಷಧ ಮತ್ತು ತ್ವರಿತ ಚಿಕಿತ್ಸೆಯೊಂದಿಗೆ ನಿರ್ಣಾಯಕ ಫಲಿತಾಂಶಗಳ ಸಾಧ್ಯತೆಯನ್ನು ಕಡಿಮೆ ಮಾಡಬಹುದು. ಗರ್ಭಿಣಿಯರು ಸಹ ಸೊಳ್ಳೆ ಕಡಿತದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ವಿಶೇಷ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಹೆಚ್ಚುವರಿಯಾಗಿ, ಅನಾರೋಗ್ಯವು ಸಾಂಕ್ರಾಮಿಕವಾಗಿದ್ದರೆ, ಗರ್ಭಾವಸ್ಥೆಯಲ್ಲಿ ಹಾರ್ಮೋನುಗಳ ಬದಲಾವಣೆಗಳು ಸ್ಥಿತಿಯ ತೀವ್ರತೆಯ ಮೇಲೆ ಪರಿಣಾಮ ಬೀರಬಹುದು.

ಗರ್ಭಿಣಿಯರ ಮೇಲೆ ಡೆಂಘಿ ಹೇಗೆ ಪರಿಣಾಮ ಬೀರುತ್ತದೆ?

ಮೂಗಿನ ರಕ್ತಸ್ರಾವ ಮತ್ತು ಜಠರಗರುಳಿನ ರಕ್ತಸ್ರಾವದ ಸಮಸ್ಯೆಗಳನ್ನು ಉಂಟುಮಾಡಬಹುದು. ಇದಲ್ಲದೇ ವಿಪರೀತ ಜ್ವರ ವಾಂತಿ ತೀವ್ರ ನಿರ್ಜಲೀಕರಣಕ್ಕೆ ಕಾರಣವಾಗಬಹುದು. ಆದ್ದರಿಂದ ಹಣ್ಣು ಮತ್ತು ತರಕಾರಿ ರಸಗಳಂತಹ ಸಾಕಷ್ಟು ದ್ರವಗಳನ್ನು ಕುಡಿಯಿರಿ ಮತ್ತು ಎಳನೀರು ಸಹ ನಿಮಗೆ ತೇವಾಂಶ ನೀಡುವಲ್ಲಿ ಸಹಾಯ ಮಾಡುತ್ತದೆ. ಡೆಂಘಿ ಜ್ವರ ನಿರ್ಲಕ್ಷ್ಯಿಸಿದರೆ ಭ್ರೂಣದ ನಷ್ಟ ಅಥವಾ ಗರ್ಭಪಾತಕ್ಕೆ ಕಾರಣವಾಗಬಹುದು. ಆದ್ದರಿಂದ ಜ್ವರದ ಲಕ್ಷಣಗಳು ಕಂಡುಬಂದ ತಕ್ಷಣ ಚಿಕಿತ್ಸೆ ಪಡೆಯುವುದು ಅಗತ್ಯ.

ಇದನ್ನೂ ಓದಿ: ಸುತ್ತಲಿನವರ ಖುಷಿಯೇ ನಮ್ಮ ಪರಮ ಸಂತೋಷ; ಬರುಣ್ ದಾಸ್ ಜೊತೆ ಆರೋಗ್ಯ ವ್ಯವಸ್ಥೆ ಬಗ್ಗೆ ಡಾ. ದೇವಿ ಶೆಟ್ಟಿ ಮನ ಬಿಚ್ಚಿ ಮಾತು

ಡೆಂಘಿ ಶಿಶುಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ಮಹಿಳೆಗೆ ಡೆಂಘಿ ಜ್ವರ ಬಂದಾಗ ಅವಧಿಪೂರ್ವ ಹೆರಿಗೆಯಾಗುವ ಸಾಧ್ಯತೆ ಹೆಚ್ಚುತ್ತದೆ. ಅಕಾಲಿಕವಾಗಿ ಜನಿಸಿದ ಶಿಶುಗಳು ಉಸಿರಾಟ ಮತ್ತು ಬೆಳವಣಿಗೆಯ ಸಮಸ್ಯೆಗಳನ್ನು ಹೊಂದಿರಬಹುದು.ಡೆಂಘಿ ಇರುವ ತಾಯಂದಿರಿಗೆ ಜನಿಸಿದ ಶಿಶುಗಳು ಕಡಿಮೆ ತೂಕ ಹೊಂದಿರಬಹುದು.ಇದರ ಪರಿಣಾಮವಾಗಿ ಶಿಶುಗಳು ದೀರ್ಘಕಾಲದ ಆರೋಗ್ಯ ಸಮಸ್ಯೆಗಳನ್ನು ಅನುಭವಿಸಬಹುದು. ಆದ್ದರಿಂದ ಸೂಕ್ತವಾದ ಬಟ್ಟೆಗಳನ್ನು ಧರಿಸಿ ಮತ್ತು ನೀವು ಮನೆಯಲ್ಲಿದ್ದರೂ, ಕೆಲಸದಲ್ಲಿದ್ದರೂ ಅಥವಾ ಪ್ರಯಾಣಿಸುತ್ತಿದ್ದರೂ ಕೀಟ-ನಿವಾರಕ ಲೋಷನ್‌ಗಳನ್ನು ಬಳಸಿ. ಸೊಳ್ಳೆ ಪರದೆಗಳನ್ನು ಬಳಸುವುದು ಮತ್ತು ಮನೆಯ ಸುತ್ತ ಮುತ್ತ ನೀರು ನಿಲ್ಲುದಂತೆ ನೋಡಿಕೊಳ್ಳಿ ಹಾಗೂ ಡೆಂಘಿ ಅಪಾಯದಿಂದ ದೂರವಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:03 pm, Tue, 3 October 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್