ಮಕ್ಕಳಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಜ್ವರ; ಪೋಷಕರು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳಿವು

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದೆ. ಇದುವರೆಗೂ 4,000ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಮಕ್ಕಳಲ್ಲೇ ಹೆಚ್ಚಾಗಿ ಡೆಂಗ್ಯೂ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕ ಮೂಡಿಸಿದೆ. ನಿಮ್ಮ ಮಕ್ಕಳನ್ನು ಸುರಕ್ಷಿತವಾಗಿರಿಸಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಇಲ್ಲಿವೆ.

ಮಕ್ಕಳಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಜ್ವರ; ಪೋಷಕರು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳಿವು
ಡೆಂಗ್ಯೂImage Credit source: iStock
Follow us
|

Updated on: Sep 16, 2023 | 6:39 PM

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಭಾರತದ ಟೆಕ್ ರಾಜಧಾನಿ ಎಂದು ಕರೆಯಲ್ಪಡುವ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದೆ. ಇದುವರೆಗೂ 4,000ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಮಕ್ಕಳಲ್ಲೇ ಹೆಚ್ಚಾಗಿ ಡೆಂಗ್ಯೂ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕ ಮೂಡಿಸಿದೆ.

ಡೆಂಗ್ಯೂ ಪೀಡಿತ ಮಕ್ಕಳ ನಿಖರ ಸಂಖ್ಯೆಯ ಬಗ್ಗೆ ಅಧಿಕೃತ ಮಾಹಿತಿಯು ಆರೋಗ್ಯ ಇಲಾಖೆಯಿಂದ ಇನ್ನೂ ಬಿಡುಗಡೆ ಆಗಿಲ್ಲ. 103ರಿಂದ 104 ಡಿಗ್ರಿಗಳವರೆಗಿನ ತಾಪಮಾನ ಇರುವ ಜ್ವರ ಇರುವ ಶಿಶುಗಳನ್ನು ಆಸ್ಪತ್ರೆಗೆ ಸೇರಿಸಲಾಗುತ್ತಿದೆ.

ಇದನ್ನೂ ಓದಿ: Black Pepper: ಕಾಳು ಮೆಣಸಿನ ಬಗ್ಗೆ ನಿಮಗೆ ಗೊತ್ತಿರದ ಅಚ್ಚರಿಯ ಸಂಗತಿಗಳಿವು

ಸಾಮಾನ್ಯವಾಗಿ, ನಿರಂತರ ಮಳೆಯಿಂದ ನೀರು ನಿಲ್ಲುವುದರಿಂದ ಡೆಂಗ್ಯೂ, ಮಲೇರಿಯಾ ಮತ್ತು ಚಿಕೂನ್‌ಗುನ್ಯಾಗಳಂತಹ ಸೊಳ್ಳೆಗಳಿಂದ ಹರಡುವ ರೋಗಗಳು ಹೆಚ್ಚಾಗುತ್ತಿವೆ. ಮಕ್ಕಳು ಶಾಲೆಗಳು, ಉದ್ಯಾನವನಗಳು ಅಥವಾ ವಿವಿಧ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಹೊರಾಂಗಣದಲ್ಲಿ ಹೆಚ್ಚು ಸಮಯವನ್ನು ಕಳೆಯುವುದರಿಂದ ಈ ರೋಗಗಳ ಮತ್ತಷ್ಟು ಹರಡುವಿಕೆಯನ್ನು ತಡೆಯಲು ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯವಾಗಿದೆ.

ನಿಮ್ಮ ಮಕ್ಕಳನ್ನು ಸುರಕ್ಷಿತವಾಗಿರಿಸಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು:

ಸ್ವಚ್ಛ, ಸೊಳ್ಳೆ ಮುಕ್ತ ಪರಿಸರವನ್ನು ನಿರ್ಮಿಸಿ:

ವಿಶೇಷವಾಗಿ ಹೂವಿನ ಕುಂಡಗಳು, ಬಕೆಟ್‌ಗಳು ಮತ್ತು ಬಾಲ್ಕನಿಯಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಲು ನಿಂತ ನೀರನ್ನು ತಕ್ಷಣವೇ ತೆಗೆದುಹಾಕಬೇಕು. ಸೊಳ್ಳೆ ಕಡಿತದ ಅಪಾಯವನ್ನು ಕಡಿಮೆ ಮಾಡಲು ವಿಶೇಷವಾಗಿ ಮಕ್ಕಳು ಮನೆಯಲ್ಲಿದ್ದರೆ ಸಂಜೆಯ ಸಮಯದಲ್ಲಿ ಕಿಟಕಿಗಳನ್ನು ತೆರೆದಿಡುವುದನ್ನು ತಪ್ಪಿಸಿ. ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳಿಂದ ರಕ್ಷಿಸಲು ನಿಮ್ಮ ಮಕ್ಕಳು ಮಲಗುವ ಸಮಯದಲ್ಲಿ ಸೊಳ್ಳೆ ಪರದೆಗಳನ್ನು ಬಳಸಿ.

ಪರಿಣಾಮಕಾರಿ ಸೊಳ್ಳೆ ನಿವಾರಕಗಳನ್ನು ಬಳಸಿ:

ಸೊಳ್ಳೆಯಿಂದ ಹರಡುವ ಕಾಯಿಲೆಗಳಿಂದ ನಿಮ್ಮ ಮಕ್ಕಳನ್ನು ರಕ್ಷಿಸಲು ಸೊಳ್ಳೆ ನಿವಾರಕಗಳನ್ನು ಬಳಸಿ. ಸುರಕ್ಷಿತ ನಿವಾರಕ ಬಳಕೆಯ ಬಗ್ಗೆ ಮಾರ್ಗದರ್ಶನಕ್ಕಾಗಿ ತಜ್ಞರು ಅಥವಾ ಮಕ್ಕಳ ತಜ್ಞರನ್ನು ಭೇಟಿಯಾಗಿ.

ಇದನ್ನೂ ಓದಿ: ಟೊಮ್ಯಾಟೋ ಜ್ಯೂಸ್ ಸೇವಿಸುವುದರಿಂದ ಆಗುವ ಅಡ್ಡ ಪರಿಣಾಮಗಳೇನು?

ಸೂಕ್ತವಾದ ಉಡುಪು ತೊಡಿಸಿ:

ನಿಮ್ಮ ಮಕ್ಕಳಿಗೆ ಹಗುರವಾದ, ಸಡಿಲವಾದ ಮತ್ತು ಪೂರ್ಣ ತೋಳಿನ ಉಡುಪನ್ನು ಹಾಕಿರಿ. ಸೊಳ್ಳೆಗಳು ಹೆಚ್ಚಾಗಿರುವ ಸಮಯದಲ್ಲಿ ಮಕ್ಕಳನ್ನು ಹೊರಗೆ ಬಿಡಬೇಡಿ.

ಮನೆಯ ಶುಚಿತ್ವವನ್ನು ಕಾಪಾಡಿಕೊಳ್ಳಿ:

ಅಲರ್ಜಿಯನ್ನು ತೊಡೆದುಹಾಕಲು ಮತ್ತು ನಿಮ್ಮ ಮಗುವಿಗೆ ಆರೋಗ್ಯಕರ ವಾತಾವರಣವನ್ನು ಸೃಷ್ಟಿಸಲು ಬೆಡ್ ಶೀಟ್, ಹೊದಿಕೆಗಳು ಮತ್ತು ಇತರ ಗೃಹೋಪಯೋಗಿ ವಸ್ತುಗಳನ್ನು ನಿಯಮಿತವಾಗಿ ತೊಳೆಯುತ್ತಿರಿ.

ಕೈಗಳನ್ನು ತೊಳೆಸುತ್ತಿರಿ:

ರೋಗಾಣುಗಳ ಹರಡುವಿಕೆಯನ್ನು ತಡೆಗಟ್ಟಲು ನಿಮ್ಮ ಮಗುವಿಗೆ ಊಟಕ್ಕೆ ಮೊದಲು, ಶಾಲೆಯಿಂದ ಹಿಂದಿರುಗಿದ ನಂತರ ಮತ್ತು ಆಗಾಗ ನೀವೇ ಕೈಗಳನ್ನು ತೊಳೆಸುತ್ತಿರಿ. ಅಥವಾ ಅವರಿಗೇ ಕೈಗಳನ್ನು ತೊಳೆಯಲು ಪ್ರೋತ್ಸಾಹಿಸಿ.

ಪೌಷ್ಟಿಕ ಆಹಾರ ನೀಡಿ:

ನಿಮ್ಮ ಮಗುವಿಗೆ ಅಗತ್ಯವಾದ ಪೋಷಕಾಂಶಗಳು, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಸಮತೋಲಿತ ಆಹಾರವನ್ನು ನೀಡಿ. ಕಿತ್ತಳೆ, ಕಿವಿ ಹಣ್ಣು, ನಿಂಬೆ ಹಣ್ಣು, ಸ್ಟ್ರಾಬೆರಿ, ಎಲೆಕೋಸು, ಹೂಕೋಸು ಮತ್ತು ಟೊಮೆಟೊಗಳಂತಹ ವಿಟಮಿನ್ ಸಿ ಹೆಚ್ಚಿರುವ ಆಹಾರಗಳು ಅವರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ