AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲದಲ್ಲಿ ಡೆಂಗ್ಯೂ ಬರದಂತೆ ತಡೆಯಲು ಈ ಸಿಂಪಲ್ ಟಿಪ್ಸ್ ಪಾಲಿಸಿ

ದೇಶಾದ್ಯಂತ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಲೇರಿಯಾ, ಡೆಂಗ್ಯೂ ಮತ್ತು ವೈರಲ್ ಜ್ವರಗಳ ಅಪಾಯ ಎಲ್ಲೆ ಮೀರಿರುತ್ತದೆ. ಹಾಗಾಗಿ ನಾವು ನಮ್ಮ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕೆಲವು ಸಲಹೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಅದರಲ್ಲಿಯೂ ಡೆಂಗ್ಯೂ ಬಂದರೆ ದೇಹದಲ್ಲಿ ಕೆಲವು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಅದನ್ನು ನಿರ್ಲಕ್ಷಿಸುವುದು ಜೀವಕ್ಕೆ ಅಪಾಯಕಾರಿಯಾಗಿರುತ್ತದೆ. ಹಾಗಾಗಿ ಡೆಂಗ್ಯೂ ಬಗ್ಗೆ ಕೆಲವು ವಿಷಯಗಳನ್ನು ತಿಳಿದಿರಬೇಕಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಈ ಸ್ಟೋರಿಯಲ್ಲಿದೆ.

ಮಳೆಗಾಲದಲ್ಲಿ ಡೆಂಗ್ಯೂ ಬರದಂತೆ ತಡೆಯಲು ಈ ಸಿಂಪಲ್ ಟಿಪ್ಸ್ ಪಾಲಿಸಿ
Dengue Fever
ಪ್ರೀತಿ ಭಟ್​, ಗುಣವಂತೆ
|

Updated on: Jul 30, 2025 | 7:32 PM

Share

ಮಳೆ (Rain) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಆರೋಗ್ಯ (Health) ಕಾಪಾಡಿಕೊಳ್ಳುವುದು ಬಹಳ ಕಷ್ಟ. ಏಕೆಂದರೆ ಮಳೆ ಬಂದಾಗ ಎಲ್ಲೆಡೆ ನೀರು ಸಂಗ್ರಹವಾಗುತ್ತದೆ. ಪರಿಣಾಮವಾಗಿ, ಸೊಳ್ಳೆಗಳು ಒಂದೇ ಸ್ಥಳದಲ್ಲಿ ನಿಂತ ನೀರಿನಲ್ಲಿ ಮೊಟ್ಟೆಗಳನ್ನು ಇಡುತ್ತವೆ ಹಾಗಾಗಿ ಸೊಳ್ಳೆಗಳ ಕಾಟ ಹೆಚ್ಚಾಗುತ್ತದೆ. ಅದಕ್ಕಾಗಿಯೇ ಈ ಋತುವಿನಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳ ಅಪಾಯ ಹೆಚ್ಚಾಗಿರುತ್ತದೆ. ಮಲೇರಿಯಾ, ಡೆಂಗ್ಯೂ (Dengue) ಮತ್ತು ವೈರಲ್ ಜ್ವರಗಳ ಅಪಾಯ ಎಲ್ಲೆಮೀರಿರುತ್ತದೆ. ಅದರಲ್ಲಿಯೂ ಎಲ್ಲರನ್ನು ಹೆದರಿಸುವ ಡೆಂಗ್ಯೂ ಹಾವಳಿ ಈ ಭಾರಿಯೂ ಜೋರಾಗಿಯೇ ಇದೆ. ದೇಶಾದ್ಯಂತ ಈಗಾಗಲೇ ಡೆಂಗ್ಯೂ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದ್ದು ಬೆಂಗಳೂರಿನಲ್ಲಿಯೂ ಬಹಳಷ್ಟು ಪ್ರಕರಣಗಳು ಕಂಡುಬರುತ್ತಿದೆ. ಡೆಂಗ್ಯೂ ಹರಡುವ ಈಡಿಸ್ ಈಜಿಪ್ಟಿ ಸೊಳ್ಳೆ ಹಗಲಿನ ವೇಳೆಯಲ್ಲಿ ಹೆಚ್ಚು ಸಕ್ರಿಯವಾಗಿರುತ್ತದೆ. ಹಾಗಾಗಿ ನಾವು ನಮ್ಮ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕೆಲವು ಸಲಹೆಗಳನ್ನು ಅನುಸರಿಸಬೇಕು. ಅದರಲ್ಲಿಯೂ ಡೆಂಗ್ಯೂ ಬಂದರೆ ದೇಹದಲ್ಲಿ ಕೆಲವು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಅದನ್ನು ನಿರ್ಲಕ್ಷಿಸುವುದು ಜೀವಕ್ಕೆ ಅಪಾಯಕಾರಿಯಾಗಿರುತ್ತದೆ. ಹಾಗಾಗಿ ಡೆಂಗ್ಯೂ ಬಗ್ಗೆ ಕೆಲವು ವಿಷಯಗಳನ್ನು ತಿಳಿದಿರಬೇಕಾಗುತ್ತದೆ.

ಈ ಸಲಹೆಯನ್ನು ತಪ್ಪದೆ ಪಾಲಿಸಿ:

  • ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ತುಂಬಾ ಕಡಿಮೆ ಇರುತ್ತದೆ. ಆದ್ದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವತ್ತ ಗಮನಹರಿಸಲು ಸಮತೋಲಿತ ಆಹಾರವನ್ನು ಸೇವಿಸಿ.
  • ಆಹಾರದಲ್ಲಿ ತಾಜಾ ಹಣ್ಣು, ತರಕಾರಿ ಮತ್ತು ಬೀಜಗಳನ್ನು ಸೇವನೆ ಮಾಡಿ, ಜೊತೆಗೆ ಸಾಕಷ್ಟು ನೀರು ಕುಡಿಯಿರಿ. ಬೆಳಿಗ್ಗೆ ಒಂದು ಲೋಟ ಬೆಚ್ಚಗಿನ ನೀರಿನಿಂದ ನಿಮ್ಮ ದಿನವನ್ನು ಪ್ರಾರಂಭಿಸಿ.
  • ಕಡಿಮೆ ಕೊಬ್ಬಿನ ಪ್ರೋಟೀನ್‌ಗಳು ಮತ್ತು ಧಾನ್ಯಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ. ಅವು ದೇಹಕ್ಕೆ ಸಾಕಷ್ಟು ಶಕ್ತಿಯನ್ನು ಒದಗಿಸುತ್ತವೆ.
  • ಪ್ರತಿದಿನ ವ್ಯಾಯಾಮ ಮಾಡುವುದು ಬಹಳ ಮುಖ್ಯ. ದಿನಕ್ಕೆ ಕನಿಷ್ಠ ಮೂವತ್ತು ನಿಮಿಷಗಳ ಕಾಲ ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಹಾಗಾಗಿ ನಡಿಗೆ, ಜಾಗಿಂಗ್ ಮತ್ತು ಯೋಗದಂತಹ ಚಟುವಟಿಕೆಗಳನ್ನು ರೂಢಿಸಿಕೊಳ್ಳಿ.

ಇದನ್ನೂ ಓದಿ: ಬೆಂಗಳೂರು: ಹೆಚ್ಚಾಯ್ತು ಡೆಂಗ್ಯೂ, ಮನೆ ಬಳಿ ಸ್ವಚ್ಛತೆ ಕಾಪಾಡದಿದ್ದರೆ ಬೀಳಲಿದೆ ಭಾರೀ ಮೊತ್ತದ ದಂಡ

ಡೆಂಗ್ಯೂ ತಡೆಗಟ್ಟುವುದು ಹೇಗೆ?

  • ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಡೆಂಗ್ಯೂ ಸೊಳ್ಳೆಗಳು ಹಗಲಿನ ವೇಳೆಯಲ್ಲಿ ಹೆಚ್ಚು ಸಕ್ರಿಯವಾಗಿರುತ್ತವೆ. ಆದ್ದರಿಂದ, ಹಗಲಿನ ವೇಳೆಯಲ್ಲಿ ಕಾಡುವ ಈ ಸೊಳ್ಳೆಗಳಿಂದ ತಪ್ಪಿಸಿಕೊಳ್ಳುವುದು ಅವಶ್ಯಕ.
  • ಈ ಸೊಳ್ಳೆಗಳಿಂದ ದೂರವಿರಲು, ಪೂರ್ಣ ತೋಳಿನ ಬಟ್ಟೆಗಳನ್ನು ಧರಿಸಿ. ಸೊಳ್ಳೆಗಳು ಹೆಚ್ಚಾಗಿ ತೋಳುಗಳು ಮತ್ತು ಕಾಲಿನ ಭಾಗದಲ್ಲಿ ಹೆಚ್ಚು ಕಚ್ಚುತ್ತವೆ.
  • ಮಲಗುವಾಗ ಸೊಳ್ಳೆ ಪರದೆಯನ್ನು ಬಳಸಿ ಇದು ಸೊಳ್ಳೆ ಕಡಿತವನ್ನು ತಪ್ಪಿಸಲು ಸಹಾಯ ಮಾಡುತ್ತದೆ.
  • ಕೆಲವು ನೈಸರ್ಗಿಕ ಸಲಹೆಗಳು ಸೊಳ್ಳೆಗಳು ಮನೆಗೆ ಪ್ರವೇಶಿಸುವುದನ್ನು ತಡೆಯುವಲ್ಲಿ ಪರಿಣಾಮಕಾರಿ. ಬೇವಿನ ಎಣ್ಣೆ ಸ್ಪ್ರೇ, ಮೆಣಸಿನ ಸ್ಪ್ರೇ ಮತ್ತು ಬಿರಿಯಾನಿ ಎಲೆಗಳಿಂದ ಬರುವ ಹೊಗೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ.
  • ಮನೆಯೊಳಗೆ ಸೊಳ್ಳೆಗಳು ಬರದಂತೆ ತಡೆಯಲು ಕಿಟಕಿ ಮತ್ತು ಬಾಗಿಲುಗಳಿಗೆ ಸಣ್ಣ ನೆಟ್ ಗಳನ್ನು ಹಾಕಿ.
  • ಮನೆಯ ಸುತ್ತಲೂ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಿ. ಇದರಿಂದ ಸೊಳ್ಳೆಗಳು ಮೊಟ್ಟೆ ಇಡುವುದನ್ನು ತಡೆಯಬಹುದು.
  • ಮನೆಯಲ್ಲಿರುವ ಕೂಲರ್‌ಗಳಲ್ಲಿ ನೀರನ್ನು ಬದಲಾಯಿಸುತ್ತಾ ಇರಿ, ಇದರಿಂದ ಸೊಳ್ಳೆಗಳು ಮೊಟ್ಟೆ ಇಡುವುದನ್ನು ತಡೆಯಬಹುದು.
  • ಪ್ರತಿದಿನ ನೀರಿನ ಪಾತ್ರೆಗಳನ್ನು ಸ್ವಚ್ಛಗೊಳಿಸಿ ಮತ್ತು ಅವುಗಳನ್ನು ಮುಚ್ಚಿಡಿ. ಹೆಚ್ಚುವರಿಯಾಗಿ, ಪ್ರತಿ ವಾರ ನೀರಿನ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಿ.
  • ಮನೆಯ ಸುತ್ತಲೂ ಕಸ ಸಂಗ್ರಹವಾಗದಂತೆ ನೋಡಿಕೊಳ್ಳಿ. ಅಲ್ಲದೆ, ಕಸದ ತೊಟ್ಟಿಯನ್ನು ಯಾವಾಗಲೂ ಮುಚ್ಚಿಡಿ.

ಡೆಂಗ್ಯೂ ಹೇಗೆ ಸಾವಿಗೆ ಕಾರಣವಾಗುತ್ತದೆಯೇ?

ಡೆಂಗ್ಯೂ ಜ್ವರ ಬಂದಾಗ ಅದನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಇದು ಹಲವಾರು ಸಮಸ್ಯೆಗಳು ಉದ್ಭವಕ್ಕೆ ಕಾರಣವಾಗಬಹುದು. ಜೊತೆಗೆ ಸಾವಿನ ಅಪಾಯವನ್ನು ಹೆಚ್ಚಿಸಬಹುದು. ಅದಲ್ಲಷ್ಟೇ ಬೊಜ್ಜು, ಆಸ್ತಮಾ, ಅಧಿಕ ರಕ್ತದೊತ್ತಡ ಅಥವಾ ಯಾವುದೇ ಹೃದಯ ಸಂಬಂಧಿತ ಕಾಯಿಲೆ ಇರುವವರಿಗೆ ಈ ರೀತಿಯ ಅಪಾಯ ಹೆಚ್ಚಾಗಿರುತ್ತದೆ. ಮಾತ್ರವಲ್ಲ ಹೆಚ್ಚುವರಿಯಾಗಿ, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧ ವ್ಯಕ್ತಿಗಳಿಗೂ ಅಪಾಯವಿದೆ. ಇದರ ಹೊರತಾಗಿ ಮೂತ್ರಪಿಂಡದ ಸಮಸ್ಯೆಗಳಿದ್ದವರಲ್ಲಿಯೂ ಅಪಾಯ ಹೆಚ್ಚಾಗಿರುತ್ತದೆ. ಹಾಗಾಗಿ ಡೆಂಗ್ಯೂ ಲಕ್ಷಣ ಕಂಡು ಬಂದಾಗ ಅದನ್ನು ಗುರುತಿಸಿ ಸಮಯೋಚಿತವಾಗಿರುವ ಔಷಧಿ ತೆಗೆದುಕೊಳ್ಳುವುದು ಬಹಳ ಮುಖ್ಯ.

ಇದನ್ನೂ ಓದಿ
Image
ಪ್ರತಿದಿನ ಕಾಫಿ ಕುಡಿಯುವುದರಿಂದ ಏನೆಲ್ಲಾ ಆಗುತ್ತೆ ಗೊತ್ತಾ?
Image
ಹೃದಯಾಘಾತಕ್ಕೂ ಮುನ್ನ ಚರ್ಮದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತಂತೆ
Image
ಈ ಆಯುರ್ವೇದ ಅಭ್ಯಾಸಗಳನ್ನು ಅನುಸರಿಸಿದರೆ ಲಿವರ್ ಆರೋಗ್ಯವಾಗಿರುತ್ತೆ!
Image
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!