AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ರೋಗಿಗಳು ಹೃದಯಾಘಾತಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆಯೇ? ನೀವು ತಿಳಿಯಲೇಬೇಕಾದ ಮಾಹಿತಿ ಇದು

ಇತ್ತೀಚಿನ ದಿನಗಳಲ್ಲಿ ಮಧುಮೇಹ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದ್ದು ಯುವಜನರಲ್ಲಿಯೂ ಕಂಡುಬರುತ್ತಿರುವುದು ಕಳವಳಕಾರಿ ಸಂಗತಿ. ಅದರಲ್ಲಿಯೂ ಇತ್ತೀಚಿನ ವರ್ಷಗಳಲ್ಲಿ, ಮಧುಮೇಹದಿಂದ ಬಳಲುತ್ತಿರುವವರಲ್ಲಿ ಹೃದಯಾಘಾತ ಮತ್ತು ಇತರ ಹೃದಯ ಸಂಬಂಧಿ ಕಾಯಿಲೆಗಳ ಪ್ರಕರಣಗಳಲ್ಲಿ ತ್ವರಿತ ಏರಿಕೆ ಕಂಡುಬಂದಿದೆ. ಹಾಗಾಗಿ ಈ ಸಮಸ್ಯೆಯ ಆರಂಭಿಕ ಲಕ್ಷಣಗಳನ್ನು ಸರಿಯಾಗಿ ಗುರುತಿಸುವ ಮೂಲಕ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾದರೆ ಮಧುಮೇಹ ಮತ್ತು ಹೃದ್ರೋಗಗಳ ನಡುವಿನ ಸಂಬಂಧವನ್ನು ಅರ್ಥಮಾಡಿಕೊಳ್ಳುವುದು ಹೇಗೆ, ಮಧುಮೇಹ ರೋಗಿಗಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಾಗಲು ಕಾರಣವೇನು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಧುಮೇಹ ರೋಗಿಗಳು ಹೃದಯಾಘಾತಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆಯೇ? ನೀವು ತಿಳಿಯಲೇಬೇಕಾದ ಮಾಹಿತಿ ಇದು
Diabetes & Heart Attack Risk
ಪ್ರೀತಿ ಭಟ್​, ಗುಣವಂತೆ
|

Updated on: Dec 29, 2025 | 5:00 PM

Share

ಇತ್ತೀಚಿನ ದಿನಗಳಲ್ಲಿ ಮಧುಮೇಹ (Diabetes) ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿವೆ. ಇದಕ್ಕೆ ಕಾರಣಗಳು ಹಲವು ಆದರೆ ಬದಲಾಗುತ್ತಿರುವ ಜೀವನಶೈಲಿ, ಕಳಪೆ ಆಹಾರ ಪದ್ಧತಿ ಮತ್ತು ದೈಹಿಕ ಚಟುವಟಿಕೆಯ ಕೊರತೆ ಇವೆಲ್ಲವೂ ಕೂಡ ಈ ರೀತಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿರುವುದಕ್ಕೆ ಮುಖ್ಯ ಕಾರಣವಾಗಬಹುದು. ಮಧುಮೇಹ ಕ್ರಮೇಣ ದೇಹದ ಅನೇಕ ಪ್ರಮುಖ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವು ಮಧುಮೇಹ ರೋಗಿಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ವಿಶ್ವ ಹೃದಯ ಒಕ್ಕೂಟದ ವರದಿಯ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ, ಮಧುಮೇಹದಿಂದ ಬಳಲುತ್ತಿರುವವರಲ್ಲಿ ಹೃದಯಾಘಾತ ಮತ್ತು ಇತರ ಹೃದಯ ಸಂಬಂಧಿ ಕಾಯಿಲೆಗಳ ಪ್ರಕರಣಗಳಲ್ಲಿ ತ್ವರಿತ ಏರಿಕೆ ಕಂಡುಬಂದಿದೆ, ಇದು ಕಳವಳಕಾರಿ ವಿಷಯವಾಗಿದ್ದು ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡದೆಯೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾದರೆ ಮಧುಮೇಹ ಮತ್ತು ಹೃದ್ರೋಗಗಳ ನಡುವಿನ ಸಂಬಂಧವನ್ನು ಅರ್ಥಮಾಡಿಕೊಳ್ಳುವುದು ಹೇಗೆ, ಮಧುಮೇಹ ರೋಗಿಗಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಾಗಲು ಕಾರಣವೇನು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಧುಮೇಹ ರೋಗಿಗಳಲ್ಲಿ ಹೃದಯಾಘಾತದ ಅಪಾಯ ಹೆಚ್ಚುತ್ತಿರುವುದಕ್ಕೆ ಕಾರಣವೇನು?

ಸಾಮಾನ್ಯವಾಗಿ ಮಧುಮೇಹ ರೋಗಿಗಳಲ್ಲಿ ದೀರ್ಘಕಾಲದವರೆಗೆ ಅಧಿಕ ರಕ್ತದ ಸಕ್ಕರೆಯು ದೇಹದಲ್ಲಿನ ರಕ್ತನಾಳಗಳಿಗೆ ಹಾನಿ ಮಾಡುತ್ತದೆ. ಇದು ಹೃದಯಕ್ಕೆ ರಕ್ತವನ್ನು ಸಾಗಿಸುವ ಅಪಧಮನಿಗಳನ್ನು ದುರ್ಬಲಗೊಳಿಸಬಹುದು ಅಥವಾ ಕಿರಿದಾಗಿಸಬಹುದು, ಇದರಿಂದಾಗಿ ಹೃದಯ ಸಂಬಂಧಿ ಕಾಯಿಲೆಯ ಅಪಾಯ ಹೆಚ್ಚಾಗುತ್ತದೆ. ಜೊತೆಗೆ ಮಧುಮೇಹವು ಹೆಚ್ಚಾಗಿ ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಸಮಸ್ಯೆಗಳೊಂದಿಗೆ ಸಂಬಂಧಿಸಿದ್ದು ಇದು ಹೃದಯಾಘಾತದ ಅಪಾಯವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಹೆಚ್ಚುವರಿಯಾಗಿ, ಮಧುಮೇಹವು ದೇಹದಲ್ಲಿ ಉರಿಯೂತ ಮತ್ತು ಕೊಬ್ಬಿನ ಶೇಖರಣೆಯನ್ನು ವೇಗಗೊಳಿಸುವುದರಿಂದ, ಇದು ಅಪಧಮನಿಗಳನ್ನು ಗಟ್ಟಿಯಾಗಿಸುತ್ತದೆ. ಅದಲ್ಲದೆ ಅನೇಕ ಸಂದರ್ಭಗಳಲ್ಲಿ, ಮಧುಮೇಹ ರೋಗಿಗಳಲ್ಲಿ ಹೃದಯಾಘಾತದ ಸಾಮಾನ್ಯ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುವುದಿಲ್ಲ, ಇದು ಸಕಾಲಿಕ ಚಿಕಿತ್ಸೆಯಲ್ಲಿ ವಿಳಂಬಕ್ಕೆ ಕಾರಣವಾಗುತ್ತದೆ. ಈ ಕಾರಣಗಳಿಗಾಗಿ, ಮಧುಮೇಹ ರೋಗಿಗಳಲ್ಲಿ ಹೃದಯಾಘಾತದ ಅಪಾಯ ಹೆಚ್ಚು.

ಲಕ್ಷಣಗಳು ಹೇಗಿರುತ್ತವೆ?

ಮಧುಮೇಹ ರೋಗಿಗಳಲ್ಲಿ, ಹೃದಯಾಘಾತದ ಲಕ್ಷಣಗಳು ಸಾಮಾನ್ಯ ವ್ಯಕ್ತಿಗಳಿಗಿಂತ ಭಿನ್ನವಾಗಿರುತ್ತವೆ. ತೀವ್ರವಾದ ಎದೆ ನೋವು, ಒತ್ತಡ, ಸುಡುವ ಸಂವೇದನೆ ಅಥವಾ ಅಸ್ವಸ್ಥತೆ ಕಂಡುಬರಬಹುದು. ಕೆಲವರಲ್ಲಿ ಉಸಿರಾಟದ ತೊಂದರೆ, ತೀವ್ರ ಆಯಾಸ, ತಲೆತಿರುಗುವಿಕೆ ಅಥವಾ ಬೆವರುವುದು ಸಹ ಕಂಡುಬರಬಹುದು. ಇನ್ನು ಕೆಲವರಲ್ಲಿ ದವಡೆ, ಕುತ್ತಿಗೆ, ಭುಜ ಅಥವಾ ಎಡಗೈಯಲ್ಲಿ ನೋವು ಕೂಡ ಕಂಡುಬರಬಹುದು. ಅನೇಕ ಸಂದರ್ಭಗಳಲ್ಲಿ, ವಾಕರಿಕೆ, ವಾಂತಿ ಅಥವಾ ಅಸ್ವಸ್ಥತೆಯಂತಹ ಲಕ್ಷಣಗಳು ಸಹ ಕಾಣಿಸಿಕೊಳ್ಳುತ್ತವೆ. ಇಂತಹ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಇದನ್ನೂ ಓದಿ: ಮಧುಮೇಹ ಬರುವ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುವ 5 ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ

ತಡೆಗಟ್ಟುವುದು ಹೇಗೆ?

  • ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಿ.
  • ಸಮತೋಲಿತ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಿ.
  • ನಿಯಮಿತವಾಗಿ ವ್ಯಾಯಾಮ ಮಾಡಿ.
  • ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಮೇಲ್ವಿಚಾರಣೆ ಮಾಡಿ.
  • ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ ಜೊತೆಗೆ ಚೆನ್ನಾಗಿ ನಿದ್ರೆ ಮಾಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ