AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Diabetes Day 2022: ವಿಶ್ವ ಮಧುಮೇಹ ದಿನದ ಇತಿಹಾಸ, ಮಹತ್ವ ಹಾಗೂ ನೀವು ತೆಗೆದುಕೊಳ್ಳಬೇಕಾದ ಆಹಾರಗಳ ಬಗ್ಗೆ ಇಲ್ಲಿದೆ ಮಾಹಿತಿ

ಈ ಕಾಯಿಲೆಯ ಬಗ್ಗೆ ಜಗತ್ತಿನಾದ್ಯಂತ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ನವೆಂಬರ್ 14 ರಂದು ವಿಶ್ವ ಮಧುಮೇಹ ದಿನವನ್ನು ಆಚರಿಸಲಾಗುತ್ತದೆ. ನೀವು ಮಧುಮೇಹಿಗಳಾಗಿದ್ದರೆ, ನಿಮ್ಮ ಆಹಾರದಲ್ಲಿ ಕ್ರಮದಲ್ಲಿ ಈ ಐದು ಪದಾರ್ಥಗಳನ್ನು ರೂಢಿಸಿಕೊಳ್ಳಿ.

World Diabetes Day 2022: ವಿಶ್ವ ಮಧುಮೇಹ ದಿನದ ಇತಿಹಾಸ, ಮಹತ್ವ ಹಾಗೂ ನೀವು ತೆಗೆದುಕೊಳ್ಳಬೇಕಾದ ಆಹಾರಗಳ ಬಗ್ಗೆ ಇಲ್ಲಿದೆ ಮಾಹಿತಿ
World Diabetes Day 2022Image Credit source: DNA India
TV9 Web
| Edited By: |

Updated on: Nov 14, 2022 | 6:00 AM

Share

ಮಧುಮೇಹವು ಒಂದು ದೊಡ್ಡ ಸಮಸ್ಯೆಯಾಗಿದ್ದು, ಜಗತ್ತಿನಾದ್ಯಂತ ಸಾಕಷ್ಟು ಜನರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರಕ್ತದಲ್ಲಿನ ಗ್ಲೂಕೋಸ್ ಅಥವಾ ಸಕ್ಕರೆಯ ಮಟ್ಟವು ಅತಿಯಾಗಿ ಹೆಚ್ಚಾದಾಗ ಈ ಕಾಯಿಲೆ ಉಂಟಾಗುತ್ತದೆ. ಇದು ಮೂತ್ರಪಿಂಡ ವೈಫಲ್ಯ ಮತ್ತು ಪಾರ್ಶ್ವವಾಯು ಮುಂತಾದ ಇತರ ತೀವ್ರ ಸಮಸ್ಯೆಗಳಿಗೆ ಕಾರಣವಾಗಬಹುದು.

ಈ ಕಾಯಿಲೆಯ ಬಗ್ಗೆ ಜಗತ್ತಿನಾದ್ಯಂತ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ನವೆಂಬರ್ 14 ರಂದು ವಿಶ್ವ ಮಧುಮೇಹ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಬೆಂಬಲದೊಂದಿಗೆ 1991 ರಲ್ಲಿ ಇಂಟರ್ನ್ಯಾಷನಲ್ ಡಯಾಬಿಟಿಸ್ ಫೆಡರೇಶನ್ ಈ ದಿನವನ್ನು ಪ್ರಸ್ತಾಪಿಸಿತು ಮತ್ತು 2006 ರ ನಂತರ ಅಧಿಕೃತವಾಗಿ ಈ ದಿನವನ್ನು ಆಚರಿಸಲಾಗುತ್ತದೆ.

ಆದ್ದರಿಂದ, ನೀವು ಮಧುಮೇಹಿಗಳಾಗಿದ್ದರೆ, ನಿಮ್ಮ ಆಹಾರ ಪದ್ಧತಿಯನ್ನು ನೀವು ಜಾಗೃತಿ ವಹಿಸುವುದು ಅತ್ಯಂತ ಅಗತ್ಯವಾಗಿದೆ. ಜೊತೆಗೆ ನಿಮ್ಮ ರಕ್ತದಲ್ಲಿನ ಗ್ಲೂಕೋಸ್, ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಹೇಗೆ ನಿರ್ವಹಿಸುವುದು ಎಂಬುದರ ಬಗ್ಗೆ ತಿಳಿದಿರಬೇಕು.

ವಿಶ್ವ ಮಧುಮೇಹ ದಿನದ ಸಂದರ್ಭದಲ್ಲಿ, ಮಧುಮೇಹ ಇರುವವರಿಗೆ ಪ್ರಯೋಜನಕಾರಿಯಾದ ಕೆಲವು ಆಹಾರ ಪದಾರ್ಥಗಳು ಇಲ್ಲಿವೆ.

ಸಿಟ್ರಸ್ ಹಣ್ಣುಗಳು: ಕಿತ್ತಳೆ ಮತ್ತು ನಿಂಬೆ ಹಣ್ಣುಗಳು ತಾಜಾತನ ಮತ್ತು ಹುಳಿ ರುಚಿಗೆ ಹೆಸರುವಾಸಿಯಾಗಿದೆ. ಅಮೇರಿಕನ್ ಡಯಾಬಿಟಿಸ್ ಅಸೋಸಿಯೇಷನ್ ​​ಪ್ರಕಾರ, ಸಿಟ್ರಸ್ ಹಣ್ಣುಗಳು ಪೊಟ್ಯಾಸಿಯಮ್ ಮತ್ತು ಫೋಲೇಟ್ ಜೊತೆಗೆ ಆರೋಗ್ಯಕರ ಫೈಬರ್ ಅನ್ನು ಹೊಂದಿರುತ್ತವೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮತ್ತು ಮಧುಮೇಹವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.

ಯೋಗರ್ಟ್: ನೀವು ಮಧುಮೇಹಿಗಳಾಗಿದ್ದರೆ, ನಿಮ್ಮ ಆಹಾರದಲ್ಲಿ ಯೋಗರ್ಟ್ ಸೇರಿಸಿಕೊಳ್ಳಿ. ಹಾರ್ವರ್ಡ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ (HSPH) ಸಂಶೋಧಕರು ನಡೆಸಿದ ಅಧ್ಯಯನವು ಯೋಗರ್ಟ್ ಸೇವನೆಯು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಕಂಡುಹಿಡಿದಿದೆ. ಜೊತೆಗೆ ಕ್ಯಾಲ್ಸಿಯಂ ಮತ್ತು ಪ್ರೋಟೀನ್‌ಗಳು ಸಮೃದ್ಧವಾಗಿದ್ದು ಆರೋಗ್ಯವನ್ನು ಸುಧಾರಿಸುತ್ತದೆ.

ಚಿಯಾ ಬೀಜಗಳು: ಚಿಯಾ ಬೀಜಗಳು ತೂಕ ನಷ್ಟಕ್ಕೆ ಸಹಾಯ ಮಾಡುವ ಪರಿಣಾಮಕಾರಿ ಸೂಪರ್‌ಫುಡ್ ಎಂದು ಹೇಳಲಾಗುತ್ತದೆ. ಮಧುಮೇಹವನ್ನು ನಿಭಾಯಿಸಲು ಚಿಯಾ ಬೀಜಗಳು ಸಹ ನಿಮಗೆ ಸಹಾಯ ಮಾಡಬಹುದು ಎಂದು ತಜ್ಞರು ಸೂಚಿಸುತ್ತಾರೆ. ಅವು ಉತ್ಕರ್ಷಣ ನಿರೋಧಕಗಳು, ಒಮೆಗಾ -3 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್ ಮತ್ತು ಫೈಬರ್ ಅನ್ನು ಹೊಂದಿರುತ್ತವೆ. ಈ ಪೋಷಕಾಂಶಗಳು ಮಧುಮೇಹದ ಅಪಾಯವನ್ನು ಮತ್ತು ಅದಕ್ಕೆ ಸಂಬಂಧಿಸಿದ ತೊಡಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಡ್ರೈ ಫ್ರೂಟ್ಸ್: ಇದರಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಸಮೃದ್ಧವಾಗಿದೆ. ಅಲ್ಲದೆ, ಮಧುಮೇಹ ಉರಿಯೂತ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ: ಮಧುಮೇಹ ಮತ್ತು ಕ್ಯಾನ್ಸರ್ ಕಾಯಿಲೆಗಳನ್ನು ನಿರ್ವಹಿಸಲು ಚುಚ್ಚುಮದ್ದು ಅಗತ್ಯವಿಲ್ಲ

ಧಾನ್ಯಗಳು: ನೀವು ಮಧುಮೇಹಿಗಳಾಗಿದ್ದರೆ, ಬಾರ್ಲಿ ಮತ್ತು ಓಟ್ಸ್‌ನಂತಹ ಧಾನ್ಯಗಳನ್ನು ನಿಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಿ. ನಿಮ್ಮ ರಕ್ತದಲ್ಲಿನ ಸಕ್ಕರೆಯ ಅಂಶ ಹೆಚ್ಚಾಗದಂತೆ ತಡೆಯುತ್ತದೆ. ಧಾನ್ಯಗಳು ವಿಟಮಿನ್ ಬಿ, ಕಬ್ಬಿಣ ಮತ್ತು ಖನಿಜಗಳಲ್ಲಿ ಸಮೃದ್ಧವಾಗಿದ್ದು, ಅತ್ಯಂತ ಪ್ರಯೋಜನಕಾರಿಯಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ