AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

diabetes: ಸೌತೆಕಾಯಿ ತಿಂದರೆ ಮಧುಮೇಹ ಸಮಸ್ಯೆ ನಿವಾರಣೆಯಾಗುತ್ತಾ? ತಜ್ಞರು ಹೇಳುವುದೇನು?

ಆರೋಗ್ಯ ತಜ್ಞರ ಪ್ರಕಾರ, ಸೌತೆಕಾಯಿಯನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ವಾಸ್ತವವಾಗಿ, ಇದು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದೆ.

diabetes: ಸೌತೆಕಾಯಿ ತಿಂದರೆ ಮಧುಮೇಹ ಸಮಸ್ಯೆ ನಿವಾರಣೆಯಾಗುತ್ತಾ? ತಜ್ಞರು ಹೇಳುವುದೇನು?
ಸೌತೆಕಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 26, 2022 | 9:16 PM

ಇಂದಿನ ಬಿಡುವಿಲ್ಲದ ಜಗತ್ತಿನಲ್ಲಿ ಮಧುಮೇಹ (Diabetes) ಪೀಡಿತರ ಸಂಖ್ಯೆ ಅಧಿಕವಾಗುತ್ತಿದೆ. ಒಮ್ಮೆ ಮಧುಮೇಹ ಬಂದರೆ ಜೀವನ ಪರ್ಯಂತ ಔಷಧಗಳಿಗೆ ದಾಸರಾಗಬೇಕಾಗುತ್ತದೆ. ಅಲ್ಲದೆ, ಆಹಾರಕ್ಕೆ ವಿಶೇಷ ಗಮನ ನೀಡಬೇಕಾಗುತ್ತದೆ. ಮಧುಮೇಹಿಗಳಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಔಷಧಿಗಳ ಜೊತೆಗೆ ನಾವು ಸೇವಿಸುವ ಆಹಾರವೂ ಸಹ ಸಹಾಯ ಮಾಡುತ್ತದೆ. ಅವುಗಳಲ್ಲಿ ವಿಶೇಷವಾಗಿ ಸೌತೆಕಾಯಿ (cucumber) ಯನ್ನು ಆರೋಗ್ಯ ತಜ್ಞರು ಸೇವಿಸುವಂತೆ ಸಲಹೆ ನೀಡುತ್ತಾರೆ. ಸೌತೆಕಾಯಿಯನ್ನು ಆಹಾರದಲ್ಲಿ ಅಥವಾ ಜೊತೆಗೆ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಬಹುದಾಗಿದೆ. ಅಷ್ಟೇ ಅಲ್ಲದೇ ಸೌತೆಕಾಯಿ ಇತರೆ ಹಲವು ಪ್ರಯೋಜನಗಳನ್ನು ಹೊಂದಿದೆ.  ಆರೋಗ್ಯ ತಜ್ಞರ ಪ್ರಕಾರ, ಸೌತೆಕಾಯಿಯನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ವಾಸ್ತವವಾಗಿ, ಇದು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ. ಅದಕ್ಕಾಗಿಯೇ ಪ್ರತಿದಿನ ಒಂದು ಸೌತೆಕಾಯಿಯನ್ನು ಸೇವಿಸಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಮಧುಮೇಹಗಳು ಸೌತೆಕಾಯಿಯನ್ನು ಹೇಗೆ ಸೇವಿಸಬೇಕು?

ಸೌತೆಕಾಯಿ ಸೂಪ್: ಮಧುಮೇಹದಿಂದ ಮುಕ್ತಿ ಪಡೆಯಲು ಸೌತೆಕಾಯಿಯನ್ನು ಹಲವು ರೀತಿಯಲ್ಲಿ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಮಧುಮೇಹದಿಂದ ಶೀಘ್ರವಾಗಿ ಉಪಶಮನ ಪಡೆಯಬೇಕೆಂದರೆ ಪ್ರತಿದಿನ ಸೌತೆಕಾಯಿ ಸೂಪ್ ಸೇವಿಸಬೇಕು. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.  ಸೂಪ್ ಮಾಡುವುದು ಹೇಗೆಂದರೇ,  ಒಂದು ಸೌತೆಕಾಯಿ ಸಾಕು. ಸೌತೆಕಾಯಿಯನ್ನು ಕತ್ತರಿಸಿ, ನಂತರ 3 ಟೀ ಚಮಚ ನಿಂಬೆ ರಸ, 1 ಸಣ್ಣ ಈರುಳ್ಳಿ, 1 ಬೆಳ್ಳುಳ್ಳಿ ಎಸಳು, 1/4 ಆಲಿವ್ ಎಣ್ಣೆ, 1/2 ಕಪ್ ಕೊತ್ತಂಬರಿ, ಒಂದು ಚಮಚ ಜೀರಿಗೆ, ಸಾಕಷ್ಟು ಉಪ್ಪು ಮತ್ತು ಮೆಣಸು ಪುಡಿ ಸೇರಿಸಿ. ಈ ಎಲ್ಲಾ ಪದಾರ್ಥಗಳನ್ನು ಮಿಶ್ರಣ ಮಾಡಿ. ನಂತರ ಮಿಶ್ರಣವನ್ನು ಒಂದು ಪಾತ್ರೆಯಲ್ಲಿ ತೆಗೆದುಕೊಳ್ಳಿ. ಇದನ್ನು ಸೂಪ್ ಆಗಿ ತೆಗೆದುಕೊಳ್ಳಬಹುದು. ಇದು ಸಕ್ಕರೆಯನ್ನು ಕಡಿಮೆ ಮಾಡುವುದಲ್ಲದೆ, ತೂಕವನ್ನು ತ್ವರಿತವಾಗಿ ಕಡಿಮೆ ಮಾಡುತ್ತದೆ.

ಸಲಾಡ್: ಸೌತೆಕಾಯಿಯನ್ನು ಹಲವು ವಿಧಗಳಲ್ಲಿ ತಿನ್ನಬಹುದು. ಸೌತೆಕಾಯಿ ಸೂಪ್ ಮಾಡಲು ನಿಮಗೆ ಸಮಯವಿಲ್ಲದಿದ್ದರೆ, ನೀವು ಅದನ್ನು ಸಲಾಡ್ ರೂಪದಲ್ಲಿ ತಿನ್ನಬಹುದು. ನೀವು ಮಧುಮೇಹಿಗಳಾಗಿದ್ದರೆ, ಪ್ರತಿದಿನ ಸೌತೆಕಾಯಿಯನ್ನು ತಿನ್ನಲು ಪ್ರಯತ್ನಿಸಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಮತ್ತಷ್ಟು ಆರೋಗ್ಯ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?