ಮಧುಮೇಹಿಗಳು ಮೆಂತ್ಯ ನೀರನ್ನು ಈ ರೀತಿ ಸೇವಿಸಿದ್ರೆ ಶುಗರ್ ಲೆವೆಲ್ ಕಂಟ್ರೋಲ್‌ಗೆ ಬರುತ್ತೆ

ಮಧುಮೇಹವು ದೀರ್ಘಕಾಲದವರೆಗೆ ಕಾಡುವ ಕಾಯಿಲೆಗಳಲ್ಲಿ ಒಂದು. ಹೀಗಾಗಿ ಎಷ್ಟು ಎಚ್ಚರಿಕೆ ವಹಿಸುತ್ತೇವೋ ಅಷ್ಟು ಒಳ್ಳೆಯದು. ಆಹಾರದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಕೂಡ ಸಕ್ಕರೆ ಪ್ರಮಾಣವು ಹೆಚ್ಚಾಗುತ್ತದೆ. ಈ ಎಲ್ಲಾ ಕಾರಣಗಳಿಂದ ಜೀವನಶೈಲಿಯಲ್ಲಿ ಸಣ್ಣ ಪುಟ್ಟ ಬದಲಾವಣೆಗಳನ್ನು ಮಾಡಿಕೊಳ್ಳುವುದು, ಸೇವಿಸುವ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಆದರೆ ಈ ಬೀಜದ ನೀರು ಕೂಡ ಮಧುಮೇಹ ಸಮಸ್ಯೆಯನ್ನು ನಿಯಂತ್ರಿಸಲು ಸಹಕಾರಿಯಾಗಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ.

ಮಧುಮೇಹಿಗಳು ಮೆಂತ್ಯ ನೀರನ್ನು ಈ ರೀತಿ ಸೇವಿಸಿದ್ರೆ ಶುಗರ್ ಲೆವೆಲ್ ಕಂಟ್ರೋಲ್‌ಗೆ ಬರುತ್ತೆ
ಮೆಂತ್ಯ ಬೀಜದ ನೀರು
Image Credit source: Pinterest

Updated on: Aug 27, 2025 | 7:09 PM

ಇತ್ತೀಚೆಗಿನ ದಿನಗಳಲ್ಲಿ ಮಧುಮೇಹ (Diabetes) ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೌದು, ಆಧುನಿಕ ಜೀವನಶೈಲಿಯಿಂದಾಗಿ ಮಕ್ಕಳಿಂದ ಹಿಡಿದು ವಯೋವೃದ್ಧರನ್ನು ಈ ಮಧುಮೇಹವು ಕಾಡುತ್ತಿದೆ. ಈ ಆರೋಗ್ಯ ಸಮಸ್ಯೆಯಿರುವವರು ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಶುಗರ್ ಲೆವೆಲ್ ಕಂಟ್ರೋಲ್ ಮಾಡಲು ಆರೋಗ್ಯಕರ ಜೀವನಶೈಲಿ ಹಾಗೂ ಆಹಾರ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಶುಗರ್ ಲೆವೆಲ್ ಕಂಟ್ರೋಲ್‌ಗೆ ಮೆಂತ್ಯ ಬೀಜದ ನೀರು (Fenugreek seed water) ಸೇವನೆ ಮಾಡುವುದು ಪರಿಣಾಮಕಾರಿಯಾಗಿದೆ.

ಮಧುಮೇಹ ಸಮಸ್ಯೆಗೆ ಮೆಂತ್ಯ ನೀರು ಹೇಗೆ ಸಹಕಾರಿ?

ಪ್ರತಿಯೊಬ್ಬರ ಅಡುಗೆಮನೆಯಲ್ಲಿ ಇರುವ ಮೆಂತ್ಯವು ಮಧುಮೇಹವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ಪ್ರತಿದಿನ ರಾತ್ರಿ ಒಂದು ಲೋಟ ನೀರಿಗೆ ಒಂದು ಚಮಚ ಮೆಂತ್ಯ ಹಾಕಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ಇದನ್ನೂ ಓದಿ
ಮಾರ್ನಿಂಗ್ ವಾಕಿಂಗ್‌ ವೇಳೆ ಈ ತಪ್ಪುಗಳನ್ನು ಮಾಡದಿರಿ
ನಕಲಿ ಔಷಧಿಗಳನ್ನು ಗುರುತಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ
ಗರ್ಭಿಣಿಯರಲ್ಲಿ ಕ್ಯಾಲ್ಸಿಯಂ ಕೊರತೆಯಾಗುವುದನ್ನು ತಡೆಯಲು ಈ ರೀತಿ ಮಾಡಿ
ಬ್ಯೂಟಿ ಪಾರ್ಲರ್‌, ಸಲೂನ್ ಸೆಂಟರ್​ಗಳಿಗೆ ಬರಲಿದೆ ಕಠಿಣ ನಿಯಮ

ಇದನ್ನೂ ಓದಿ: ಈ ಒಂದು ಮಸಾಲೆ ಪದಾರ್ಥಕ್ಕೆ ನಿಮ್ಮನ್ನು ಮಾನಸಿಕ ಖಿನ್ನತೆಯಿಂದ ಹೊರತರುವ ಶಕ್ತಿ ಇದೆ

ಮೆಂತ್ಯ ನೀರು ಸೇವನೆಯೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಮೆಂತ್ಯ ಬೀಜಗಳು ಮಧುಮೇಹ ವಿರೋಧಿ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದ್ದು ಇನ್ಸುಲಿನ್ ಪ್ರತಿರೋಧವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಮೆಂತ್ಯದಲ್ಲಿರುವ ಫೈಬರ್ ಹಾಗೂ ರಾಸಾಯನಿಕಗಳು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತವೆ. ದೇಹವು ಕಾರ್ಬೋಹೈಡ್ರೇಟ್‌ಗಳು ಹಾಗೂ ಸಕ್ಕರೆಯನ್ನು ಹೀರಿಕೊಳ್ಳುವ ವೇಗವನ್ನು ಕಡಿಮೆಗೊಳಿಸಿ, ಇನ್ಸುಲಿನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಈ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ