Diabetes Drinks: ಮಧುಮೇಹಿಗಳು ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು ಈ ರಸ ಸೇವನೆ ಮಾಡಿ

ಮಧುಮೇಹ ರೋಗಿಗಳು ಕೇವಲ ಔಷಧಿಗಳ ಮೇಲೆ ಅವಲಂಬಿತರಾಗಬಾರದು. ಏನು ತಿನ್ನಬೇಕು, ಕುಡಿಯಬೇಕು ಎಂಬುದರ ಬಗ್ಗೆಯೂ ತಿಳಿದುಕೊಂಡಿರಬೇಕಾಗುತ್ತದೆ. ಮಧುಮೇಹಿಗಳ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈ ಕೆಳಗಿನ 5 ಪಾನೀಯಗಳು ಉಪಯುಕ್ತವಾಗಿವೆ.

Diabetes Drinks: ಮಧುಮೇಹಿಗಳು ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು ಈ ರಸ ಸೇವನೆ ಮಾಡಿ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 03, 2024 | 6:21 PM

ಮಧುಮೇಹದ ಬಗ್ಗೆ ಪ್ರತಿನಿತ್ಯವೂ ಗಮನಹರಿಸಬೇಕಾಗುತ್ತದೆ. ಇದರಲ್ಲಿ ಸ್ವಲ್ಪ ಏರುಪೇರಾದರೂ ಅದು ವ್ಯತಿರಿಕ್ತ ಪರಿಣಾಮ ಬೀರಬಹುದು. ಹೀಗಾಗಿ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ರಕ್ತದಲ್ಲಿನ ಸಕ್ಕರೆ ಮಟ್ಟವು ಏರಿಕೆಯಾದರೆ ಆಗ ಇದನ್ನು ನಿಯಂತ್ರಿಸುವುದು ಅನಿವಾರ್ಯ. ಸಕ್ಕರೆ ತಿನ್ನುವುದರಿಂದ ಮಾತ್ರ ಮಧುಮೇಹ ಬರುತ್ತದೆ ಎಂಬುದು ಒಂದು ಮಿಥ್ಯೆ. ಒತ್ತಡ ಮತ್ತು ನಿದ್ರೆಯ ಕೊರತೆಯಂತಹ ಸಮಸ್ಯೆಗಳು ಕೂಡ ನಿಮ್ಮ ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಕಾರಣವಾಗಬಹುದು. ಅಲ್ಲದೆ ಫಾಸ್ಟ್ ಫುಡ್ ತಿನ್ನುವ ಅಭ್ಯಾಸವೂ ಅಪಾಯಕಾರಿಯಾಗಿದೆ.

ನೀವು ಮಧುಮೇಹದಿಂದ ಬಳಲುತ್ತಿದ್ದರೆ, ಔಷಧಿಗಳಿಲ್ಲದೆ ಬದುಕುವುದು ಅಸಾಧ್ಯ. ನಿಯಮಿತವಾಗಿ ಔಷಧಿ ತೆಗೆದುಕೊಂಡರೂ, ರೋಗವು ಹೋಗುವುದಿಲ್ಲ. ಈ ಔಷಧಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮಾತ್ರ ಸಹಾಯ ಮಾಡುತ್ತವೆ. ಆದ್ದರಿಂದ, ಮಧುಮೇಹ ರೋಗಿಗಳು ಔಷಧಿಗಳ ಮೇಲೆ ಅವಲಂಬಿತರಾಗಬಾರದು. ಏನು ತಿನ್ನಬೇಕು, ಕುಡಿಯಬೇಕು ಎಂಬುದರ ಬಗ್ಗೆಯೂ ತಿಳಿದುಕೊಂಡಿರಬೇಕಾಗುತ್ತದೆ. ಮಧುಮೇಹಿಗಳ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈ ಕೆಳಗಿನ 5 ಪಾನೀಯಗಳು ಉಪಯುಕ್ತವಾಗಿವೆ.

ಮೆಂತ್ಯ ಬೀಜಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಶಕ್ತಿಯನ್ನು ಹೊಂದಿವೆ. ಆಯುರ್ವೇದದ ಪ್ರಕಾರ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮೆಂತ್ಯವನ್ನು ನೆನೆಸಿದ ನೀರನ್ನು ಕುಡಿಯುವುದು ತುಂಬಾ ಉತ್ತಮ.

ಹಾಗಲಕಾಯಿ ರಸವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಕೆಲವು ಸಂಯುಕ್ತಗಳನ್ನು ಹೊಂದಿದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಾಗಲಕಾಯಿ ರಸವನ್ನು ಕುಡಿಯುವ ಮೂಲಕ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.

ನೀವು ಬೆಳಿಗ್ಗೆ ಚಹಾ ಕುಡಿಯುವವರಾಗಿದ್ದರೆ ದಾಲ್ಚಿನ್ನಿ ಚಹಾವನ್ನು ಪ್ರಯತ್ನಿಸಿ. ಚಹಾ ಪುಡಿ ಮತ್ತು ದಾಲ್ಚಿನ್ನಿಯನ್ನು ನೀರಿನಲ್ಲಿ ಕುದಿಸಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಇದು ಜೀರ್ಣಾಂಗ ವ್ಯವಸ್ಥೆಯಲ್ಲಿ ಕಾರ್ಬೋಹೈಡ್ರೇಟ್ ಗಳ ವಿಭಜನೆಯನ್ನು ನಿಧಾನಗೊಳಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

ಬಿಸಿ ಹಾಲಿಗೆ ಒಂದು ಚಿಟಿಕೆ ಅರಿಶಿನವನ್ನು ಬೆರೆಸಿ ಮಲಗುವ ಮೊದಲು ಕುಡಿಯಿರಿ. ಅರಿಶಿನ ಹಾಲು ಮಧುಮೇಹಿಗಳ ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಸೋಂಕಿನ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ಎಸಿ ಕೊಠಡಿಯಲ್ಲಿ ಧೂಮಪಾನ ಮಾಡುವುದು ತುಂಬಾ ಅಪಾಯಕಾರಿ; ಸಂಶೋಧನೆ

ನೆಲ್ಲಿಕಾಯಿ ರಸವನ್ನು ಕುಡಿಯುವುದರಿಂದ ಸಕ್ಕರೆ ಮಟ್ಟವು ಕಡಿಮೆಯಾಗುತ್ತದೆ. ಇದು ಸೋಂಕುಗಳನ್ನು ಸಹ ತಡೆಯುತ್ತದೆ. ಜೊತೆಗೆ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಇದ್ದು, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ